ಪ್ರಿಯಕರನ ಜೊತೆ ಸೇರಿ ಪತ್ನಿಯಿಂದ ಕೊಲೆ ಪ್ರಕರಣ – ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ

ಕಾರ್ಕಳ : ನಾಲ್ಕು ದಿನಗಳ ಹಿಂದೆ ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ ಎಂಬವರ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸೋಮವಾರ ವಿಚಾರಣೆ ನಡೆಸಿದ ಕಾರ್ಕಳ ತಾಲೂಕು ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ದಿಲೀಪ್‌ ಹೆಗ್ಡೆಗೆ ನವಂಬರ್ 7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಆರಂಭದಲ್ಲಿ ದಿಲೀಪ್‌ ಹೆಗ್ಡೆಯನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರತಿಮಾ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಹಿರಿಯಡಕ ಸಬ್‌ಜೈಲಿನಲ್ಲಿದ್ದಾಳೆ.

ಅಜೆಕಾರಿನ ಬಾಲಕೃಷ್ಣ ಪೂಜಾರಿ ಅವರನ್ನು ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆ ಮಾಡಿದ್ದರು. ಪತಿಯ ಆಹಾರಕ್ಕೆ ನಿಯಮಿತವಾಗಿ ವಿಷ ಪದಾರ್ಥವೊಂದನ್ನು ಸೇರಿಸಿ ಪತ್ನಿ ಪ್ರತಿಮಾ ನೀಡುತ್ತಿದ್ದಳು. ಬಳಿಕ ಕಳೆದ ಅಕ್ಟೋಬರ್ 20ರಂದು ಇಬ್ಬರೂ ಸೇರಿ ಮಲಗಿದ್ದ ಬಾಲಕೃಷ್ಣ ಅವರ ಮುಖಕ್ಕೆ ಬೆಡ್ ಶೀಟ್ ಒತ್ತಿ ಹಿಡಿದು ಹತ್ಯೆ ಮಾಡಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ