ಮನೆಯಿಂದ ಚಿನ್ನಾಭರಣ ಕಳ್ಳತನ ಪ್ರಕರಣ-ಆರೋಪಿ ಬಂಧನ, 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕಾರ್ಕಳ : ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿ ಲಾಕರ್ ನಲ್ಲಿರಿಸಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳ ನಿವಾಸಿ ಸಂತೋಷ್ ಟಿ(32) ಬಂಧಿತ ಆರೋಪಿ.

ಈತ ಸುಮಾರು 33 ಪವನ್ ತೂಕದ 10,05,000 ರೂ. ಅಂದಾಜು ಮೌಲ್ಯದ ವಿವಿಧ ರೀತಿಯ ಚಿನ್ನಾಭರಣಗಳನ್ನು ಕಳವು ಮಾಡಿದ್ದ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಂಧಿತ ಆರೋಪಿಯಿಂದ ಕಳವು ಮಾಡಿದ 33 ಪವನ್ ತೂಕದ 10,05,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ