‘ಕಂಬಳ ಹೆಸರಲ್ಲಿ ಜಾತಿ ರಾಜಕಾರಣ ಸಲ್ಲದು’ – ಪ್ರತಿಭಾ ಕುಳಾಯಿ

ಮಂಗಳೂರು : ಪಿಲಿಕುಳ ಕಂಬಳದ ಪೂರ್ವಭಾವಿ ಸಭೆಗೆ ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಕರೆಯದೆ ಜಿಲ್ಲಾಡಳಿತ ಅವಮಾನ ಮಾಡಿದೆ. ಇದು ಬಿಲ್ಲವ ಸಮಾಜಕ್ಕೆ ಅವಮಾನ ಎಂದು ಜಾತಿ ರಾಜಕಾರಣಕ್ಕೆ ಮುಂದಾಗಿರುವುದು ಸಮಂಜಸವಲ್ಲ ಎಂದು ಕೆಪಿಸಿಸಿ ರಾಜ್ಯ ವಕ್ತಾರೆ ಪ್ರತಿಭಾ ಕುಳಾಯಿ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಡಿಸಿಯವರು ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕರೆ ಮಾಡಿದ್ದು ಅವರು ಸ್ವೀಕರಿಸಿಲ್ಲ. ಬಳಿಕ ಮೊಬೈಲ್ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಕಂಬಳ ಸಮಿತಿಯ ಅಧ್ಯಕ್ಷರು ಕೂಡ ಅವರಿಗೆ ಆಹ್ವಾನ ನೀಡಿದ್ದಾರೆ. ಪ್ರತಿಯೊಂದು ವಿಚಾರಗಳಿಗೆ ಶಾಸಕರ ಮನೆ ಬಾಗಿಲಿಗೆ ಜಿಲ್ಲಾಧಿಕಾರಿ ತೆರಳಿ ಆಮಂತ್ರಿಸುವ ಸಂಪ್ರದಾಯವಿಲ್ಲ. ಬಿಲ್ಲವ ಸಮಾಜ ಗುರಿಯಾಗಿಸಿ ಜನರನ್ನು ದಾರಿ ತಪ್ಪಿಸುವ ಯತ್ನಗಳಾಗುತ್ತಿವೆ. ರವಿಶಂಕರ್ ಮಿಜಾರ್ ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದರು.

ಮೂಲ್ಕಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೀರಜ್‌ಪಾಲ್, ವಕ್ತಾರ ಚಂದ್ರಹಾಸ ಇದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ