Sushanth a Top Graduate from PoornaPrajna Evening College, working as a Vegetable Trader in A.P.M.C Market in Udupi also a RSS activist & Spokesperson from BJP OBC MORCHA UDUPI CITY has done a remarkable history under the guidance of Puthige Paryaya Sri Sri Sugunendra Teertha Swamiji of global recognised famous temple Udupi Krishna Matha on 22 December 2024 by breaking the record done by Pathanjali Gurukul Students who has written the entire verses in 8.00 hours. This Tremendous job by him was done by seeking the Blessing From Swamiji and making thousands of people to give him a applause with most of live coverage from the Media for World Record. Now lets hope for the appreciation either all over people from the society and wishing him to get the appreciation from the FIrst Citizen of Bharath Honourable President and also from Honourable Prime Minister of Bharath Shri Narendra DamodarDas Modi to recognise the tremendous work done by his own party small Karyakarthas and will see if he gets promoted to higher level and opportunities to work for the party welfare.\
Dakshina Kannada
ಮಂಗಳೂರು : ಕೊಟ್ಟಾರಚೌಕಿ ಬಳಿಯ ಮಾಲೆಮಾರ್ನ ಕಚೇರಿಯೊಂದರ ಎದುರು ನಿಲ್ಲಿಸಲಾಗಿದ್ದ ಬಜಾಜ್ ಪಲ್ಸರ್ ಬೈಕ್ ಕಳವಾಗಿದೆ ಎಂದು ಕಾವೂರು ಠಾಣೆಗೆ ದೂರು ನೀಡಲಾಗಿದೆ.
ವಿಶ್ವಾಸ್ ಎನ್ನುವವರು ಕೆಲಸ ಮಾಡುತ್ತಿದ್ದ ಕಚೇರಿಯ ಎದುರು ಮಾ.6ರಂದು ಸಂಜೆ 6 ಗಂಟೆಗೆ ಬೈಕನ್ನು ನಿಲ್ಲಿಸಿದ್ದು, ಮರುದಿನ ಬೆಳಗ್ಗೆ 11 ಗಂಟೆಗೆ ಅದು ನಾಪತ್ತೆಯಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು : ಫೇಸ್ಬುಕ್ನಲ್ಲಿ ಬಂದ ಷೇರು ಟ್ರೇಡಿಂಗ್ ಕುರಿತ ಜಾಹೀರಾತಿಗೆ ಸ್ಪಂದಿಸಿ 38,53,961 ರೂ. ಕಳೆದುಕೊಂಡಿರುವ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರು ಫೇಸ್ಬುಕ್ನಲ್ಲಿ ಬಂದ ಲಿಂಕನ್ನು ತೆರೆದು ತಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದಾರೆ. ಅನಂತರ ಅಪರಿಚಿತನೊಬ್ಬ ಕರೆ ಮಾಡಿದ್ದು, ಷೇರು ಟ್ರೇಡಿಂಗ್ನಲ್ಲಿ ನೋಂದಣಿ ಮಾಡಲು 21 ಸಾವಿರ ರೂ. ವರ್ಗಾವಣೆ ಮಾಡುವಂತೆ ತಿಳಿಸಿದ್ದಾನೆ. ಆತ ಕಳುಹಿಸಿದ ಯುಪಿಐ ಐಡಿಗಳಿಗೆ ಹಣ ವರ್ಗಾಯಿಸಿದ ಬಳಿಕ ಟ್ರೇಡಿಂಗ್ ಕಂಪೆನಿಯವರು ಕರೆ ಮಾಡಿ ಮಾಹಿತಿ ಹಾಗೂ ತರಬೇತಿ ನೀಡಿದ್ದಾರೆ.
ಹೆಚ್ಚು ಹಣ ತೊಡಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎನ್ನುವ ಆಮಿಷದಂತೆ ಹಂತ ಹಂತವಾಗಿ ವಿವಿಧ ಖಾತೆಗಳಿಂದ 38,53,961 ರೂ. ಪಾವತಿಸಿದ್ದಾರೆ. ಹಣವನ್ನು ಹಿಂಪಡೆಯಲು ಯತ್ನಿಸಿದಾಗ ಸಾಧ್ಯವಾಗಿಲ್ಲ. ಈ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ ಎಂದು ಕಾವೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
18 ಶಾಸಕರ 6 ತಿಂಗಳ ಅಮಾನತು ಪ್ರಕರಣ; ವರ್ತನೆ ಪುನರಾವರ್ತಿಸಿದರೆ ಮತ್ತೆ ಕಠಿಣ ಕ್ರಮ: ಖಾದರ್
ಮಂಗಳೂರು : ವಿಧಾನಸಭೆಯಲ್ಲಿ ಸ್ಪೀಕರ್ ಪೀಠಕ್ಕೇರಿ ದುಂಡಾವರ್ತನೆ ತೋರಿದ್ದ 18 ಶಾಸಕರನ್ನು 6 ತಿಂಗಳು ಅಮಾನತುಗೊಳಿಸಿರುವುದನ್ನು ಶಾಸಕರು ಶಿಕ್ಷೆ ಎಂದು ಭಾವಿಸುವುದು ಬೇಡ. ಅವತ್ತು ನಡೆದ ಘಟನೆ ರಾಜ್ಯದ ಜನತೆಗೆ ಅಸಹ್ಯ ಮೂಡಿಸಿದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿ ಕೆಲಸ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮತ್ತೆ ಇಂತಹ ವರ್ತನೆ ಮುಂದುವರಿಸಿದರೆ ಒಂದು ವರ್ಷ ಅಮಾನತು ಅಥವಾ ಕಾಯ್ದೆಯಡಿ ಲಭ್ಯವಿರುವ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಕೊನೆಯ ದಿನದಂದು ಧನ ವಿನಿಯೋಗದ ಬಿಲ್ ಮಂಜೂರು ಮಾಡುವ ವೇಳೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆಯಾಗುವ ರೀತಿಯಲ್ಲಿ ಕೆಲ ಶಾಸಕರು ವರ್ತಿಸಿದ್ದರು. ಸಂವಿಧಾನ ಪೀಠದ ಗೌರವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆರು ತಿಂಗಳು ಅಮಾನತು ಮಾಡಲಾಗಿದೆ ಎಂದವರು ಹೇಳಿದರು.
ಹೆಜಮಾಡಿ ಟೋಲ್ ಗೇಟ್ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ
ಕಾಪು : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿಯಲ್ಲಿ ಹಲವಾರು ವರ್ಷಗಳಿಂದ ಟೋಲ್ ಗೇಟ್ ನಿರ್ಮಾಣಗೊಂಡು ಸುಂಕ ವಸೂಲಾತಿಯನ್ನು ಮಾಡುತ್ತಾ ಬಂದಿರುತ್ತಾರೆ. ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿಯನ್ನು ಮಾಡಿರುತ್ತಾರೆ.
ಅದರಂತೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಸ್ತಾನ ಟೋಲ್ಗೇಟ್ನಲ್ಲಿ ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಿದ್ದು, ಅದರಂತೆ ಹೆಜಮಾಡಿ ಟೋಲ್ಗೇಟ್ನಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯತ್ನ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿಗೊಳಿಸುವಂತೆ ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಪಕ್ಷದ ಹಿರಿಯರಾದ ರಮಕಾಂತ್ ಪಡುಬಿದ್ರಿ ಉಪಸ್ಥಿತರಿದ್ದರು.
ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.
ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ಬಂದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
ಸುರತ್ಕಲ್ : ರಸ್ತೆ ಮಧ್ಯೆ ನಿಲ್ಲಿಸಿದ್ದ ಟಿಪ್ಪರ್ ಲಾರಿಗಳನ್ನು ತೆರವು ಮಾಡುವಂತೆ ಸೂಚಿಸಿದ್ದಕ್ಕಾಗಿ ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮುಂಚ್ಚೂರು ಎಂಬಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುರತ್ಕಲ್ ಮಧ್ಯಪದವು ನಿವಾಸಿ ದಿವಾಕರ (39), ಬಂಟ್ವಾಳ ಶಾರದಾ ಭಜನಾಮಂದಿರ ಬಳಿಯ ನಿವಾಸಿ ನವೀನ್ (27), ಸುರತ್ಕಲ್ ಅಗರಮೇಲು ನಿವಾಸಿ ಯಶೋಧರ (28), ಸುರತ್ಕಲ್ ಮುಂಚೂರು ನಿವಾಸಿ ರವಿ (27) ಎಂದು ಗುರುತಿಸಲಾಗಿದೆ.
ಕಾಟಿಪಳ್ಳ 5ನೇ ಬ್ಲಾಕ್ ಡೆಕ್ಕನ್ ವಿಲ್ಲಾ ನಿವಾಸಿ ಅಬೂಬರ್ ಸಿದ್ದೀಕ್ (37) ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಇವರು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೆಂಪುಕಲ್ಲಿನ ವ್ಯವಹಾರ ಮಾಡುತ್ತಿದ್ದ ಅಬೂಬರ್ ಸಿದ್ದೀಕ್ ಅವರು ಪಕ್ಷಿಕೆರೆ ಹನೀಫ್ ಎಂಬವರಿಗೆ ಕೆಂಪು ಕಲ್ಲುಗಳನ್ನು ಮಾರಾಟ ಮಾಡಿದ್ದು, ಮುಂಚೂರಿಗೆ ತೆರಳಿ ಅವರಿಂದ ಹಣವನ್ನು ಪಡೆದುಕೊಂಡು ಹಿಂದೆ ಬರುತ್ತಿದ್ದ ವೇಳೆ ಸತೀಶ್ ಮುಂಚೂರು ಎಂಬವರ ಮನೆಯ ಬಳಿ ತಲುಪಿದಾಗ ಎರಡು ಟಿಪ್ಪರ್ ಲಾರಿಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಲಾಗಿತ್ತು. ಈ ಬಗ್ಗೆ ಟಿಪ್ಪರ್ ಚಾಲಕರನ್ನು ಪ್ರಶ್ನಿಸಿ ಲಾರಿಯನ್ನು ರಸ್ತೆ ಬದಿಗೆ ಸರಿಸುವಂತೆ ಸೂಚಿಸಿದಾಗ ಸತೀಶ್ ಮುಂಚೂರು ಅವರ ಮನೆಯ ಗೇಟಿನಿಂದ ಹೊರಬಂದ 8 ರಿಂದ 10 ಮಂದಿಯ ಅಪರಿಚಿತರ ತಂಡ ಕೈ ಮತ್ತು ರಸ್ತೆಯಲ್ಲಿದ್ದ ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಸಿದ್ದೀಕ್ ಅವರು ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವಿಟ್ಲ : ವಿಟ್ಲದ ಖಾಸಗಿ ಬಸ್ಸ್ಟ್ಯಾಂಡ್ ಹಿಂಬದಿಯ ಪಾಳುಬಿದ್ದ ಕೆರೆಯಲ್ಲಿ ಪುರುಷನ ಮೃತದೇಹದ ಅವಶೇಷಗಳು ಪತ್ತೆಯಾಗಿರುವ ಘಟನೆ ನಿನ್ನೆ ನಡೆದಿದೆ.

ಮೃತ ದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ಅಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಅವಶೇಷಗಳನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು.
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾದ ವ್ಯಕ್ತಿಗಳ ಕುಟುಂಬಸ್ಥರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಯ ನಂತರ ಇದೀಗ ವ್ಯಕ್ತಿಯ ಅವಷೇಶದ ಗುರುತು ಪತ್ತೆಹಚ್ಚಲಾಗಿದೆ.
ಪತ್ತೆಯಾದ ಮೃತದೇಹದ ಅವಶೇಷವನ್ನು ಆರು ತಿಂಗಳ ಹಿಂದೆ ನವರಾತ್ರಿ ಹಬ್ಬದ ಸಂದರ್ಭ ವೇಷ ಹಾಕಲು ಪರವಾನಿಗೆ ಪಡೆಯಲೆಂದು ಮನೆಯವರಲ್ಲಿ ಹೇಳಿ ಹೋಗಿದ್ದ ವಿಟ್ಲ ಪಳಿಕೆ ನಿವಾಸಿ ಸುಂದರ ನಾಯ್ಕ ಎಂದು ಗುರುತಿಸಲಾಗಿದೆ.
ಮೃತದೇಹದ ಭಾಗಗಳನ್ನು ಕಾನೂನು ಪ್ರಕ್ರಿಯೆಯಂತೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಕುಟುಂಬಸ್ಥರಿಗೆ ವೈದ್ಯಾಧಿಕಾರಿಗಳು ಒಪ್ಪಿಸಿದ್ದಾರೆ.
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಏರಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಮೂಲದ ಅಬ್ದುಲ್ ಗಫೂರ್ ಗಾಯಗೊಂಡ ವ್ಯಕ್ತಿಯಾಗಿದ್ದು, ಚಾಲಕ ಅಬ್ದುಲ್ ರಹಮಾನ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವೇಳೆ ರಾಮಲ್ವಕಟ್ಟೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ, ಮಂಗಳೂರಿನಿoದ ಬಿಸಿರೋಡು ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ.