Dakshina Kannada

ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಶಾಹುಲ್ ಹಮೀದ್ ನೇಮಕ

ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಈ ಆದೇಶವನ್ನು ಹೊರಡಿಸಿದೆ. ದಿವಂಗತ ಕೆ. ಅಬ್ದುಲ್ ರಹಿಮಾನ್ ಮತ್ತು…

Read more

ಫೆಂಗಲ್ ಚಂಡಮಾರುತ ಹಿನ್ನಲೆ ಡಿಸೆಂಬರ್ 3ರಂದು ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು : ಫೆಂಗಲ್‌ ಚಂಡಮಾರುತದ ಅಬ್ಬರಕ್ಕೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇದೀಗ ಜಿಲ್ಲೆಯ ಎಲ್ಲಾ ಶಾಲಾ ಪಿಯು ಕಾಲೇಜುಗಳಿಗೆ ನಾಳೆ ಡಿಸೆಂಬರ್ 3 ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ…

Read more

ಬಾಂಗ್ಲಾದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ. 04ರಂದು ಮಂಗಳೂರಿನಲ್ಲಿ ಪ್ರತಿಭಟನೆ; ಪುತ್ತೂರಿನಿಂದ 2 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ : ವಿಹಿಂಪ

ಪುತ್ತೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ನೀಡಲಿದ್ದು, ಪುತ್ತೂರಿನಿಂದ 2 ಸಾವಿರ ಮಂದಿ ಮಂಗಳೂರಿಗೆ ತೆರಳುವ ನಿರೀಕ್ಷೆಯಿದೆ ಎಂದು ವಿಶ್ವಹಿಂದೂ ಪರಿಷದ್…

Read more

ಕಾಂಗ್ರೆಸ್ ಕಚೇರಿಯೊಳಗಡೆ ನಾಯಕರ ನಡುವೆ ಹೊಡೆದಾಟ

ಮಂಗಳೂರು : ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯೊಳಗಡೆ ನಾಯಕರ ನಡುವೆ ಹೊಡೆದಾಟ ನಡೆದಿದೆ‌. ನೂತನವಾಗಿ ಆಯ್ಕೆಯಾದ ಗ್ರಾ.ಪಂ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ದ.ಕ. ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ…

Read more

12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್…!

ಬಂಟ್ವಾಳ : 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಾವಳಪಡೂರು ಗ್ರಾಮದ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ…

Read more

ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಾಲಯದಲ್ಲಿ ಒಂಟಿಸಲಗನ ಓಡಾಟ – ಮರಳಿ ಕಾಡುದಾರಿ ಹಿಡಿದ ಕಾಡಾನೆ; ಪೊಲೀಸ್, ಅರಣ್ಯ ಇಲಾಖೆ ಹರಸಾಹಸ

ಮಂಗಳೂರು : ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾಡಾನೆಯೊಂದು ನುಗ್ಗಿ ಆತಂಕ ಸೃಷ್ಟಿಸಿರುವ ಘಟನೆ ನಡೆದಿದೆ. ರವಿವಾರ ರಾತ್ರಿ ವೇಳೆ ಒಂಟಿ ಸಲಗ ದೇಗುಲದೊಳಗೆ, ದೇವಾಲಯದ ಪರಿಸರದ ಸುತ್ತಾಮುತ್ತಾ ಓಡಾಡಿದೆ. ತಕ್ಷಣ ಅರಣ್ಯ ಇಲಾಖೆ, ಪೊಲೀಸರು ಹಾಗೂ…

Read more

ಅಡ್ಡಬಂದಿದೆ ಎಂದು ಹೆಲ್ಮೆಟ್‌ನಲ್ಲಿ ಬಡಿದು ಕೆಎಸ್ಆರ್‌ಟಿಸಿ ಬಸ್ ಗಾಜು ಒಡೆದು ಸ್ಕೂಟರ್ ಸವಾರ ಪರಾರಿ

ಮಂಗಳೂರು : ರಸ್ತೆ ಸಂಚಾರದ ವೇಳೆ ಅಡ್ಡ ಬಂದಿದೆ ಎಂದು ಸ್ಕೂಟರ್ ಸವಾರನೋರ್ವ ಹೆಲ್ಮೆಟ್‌ನಲ್ಲಿ ಕೆಎಸ್ಆರ್‌ಟಿಸಿ ಬಸ್‌ನ ಮುಂಭಾಗದ ಗಾಜು ಒಡೆದು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರವಿವಾರ ಸಂಜೆ 7.30ರ ಸುಮಾರಿಗೆ ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಎಂಬಲ್ಲಿ ಮಂಗಳೂರಿನಿಂದ…

Read more

ಫೆಂಗಲ್ ಚಂಡಮಾರುತ ಎಫೆಕ್ಟ್ : ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಫೆಂಗಲ್ ಚಂಡಮಾರುತ ಪರಿಣಾಮ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ. ಹೀಗಾಗಿ ಸಮುದ್ರ ತೀರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಡದೋಣಿಗಳು ಸಮುದ್ರ ತೀರದಲ್ಲಿ ಲಂಗರು ಹಾಕಿವೆ. ಕರ್ನಾಟಕದ ದಕ್ಷಿಣ ಒಳನಾಡು,…

Read more

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಂಟೇನರ್

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೇನರ್‌ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾಯಿತು. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್…

Read more

ವೆನ್‌ಲಾಕ್‌ಗೆ ಉಪಲೋಕಾಯುಕ್ತರ ಭೇಟಿ

ಮಂಗಳೂರು : ಉಪಲೋಕಾಯುಕ್ತ. ನ್ಯಾ. ಬಿ. ವೀರಪ್ಪ ಅವರು ಭಾನುವಾರ ವೆನ್‌ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ವಿವಿಧ ವಾಡು೯ಗಳಿಗೆ ಭೇಟಿ ನೀಡಿದ ಅವರು ರೋಗಿಗಳೊಂದಿಗೆ ಮಾತನಾಡಿ ಅಹವಾಲು ಆಲಿಸಿದರು. ಆಸ್ಪತ್ರೆಯ ಔಷಧ ದಾಸ್ತಾನು ಪರಿಶೀಲಿಸಿದ ಉಪಲೋಕಾಯುಕ್ತರು, ಮಕ್ಕಳ ಆಸ್ಪತ್ರೆಗೂ ಭೇಟಿ…

Read more