Dakshina Kannada

ಆಟವಾಡುತ್ತಿದ್ದಾಗ ಹೃದಯಾಘಾತ; ಬಾಲಕ ಸಾವು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡರ ಪುತ್ರ ಪ್ರಥಮ್‌ (16)…

Read more

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12, ಉಡುಪಿ ಜಿಲ್ಲೆ ಶೇ. 89.96 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ…

Read more

ಉಡುಪಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…

Read more

ಸುಹಾಸ್‌ ಶೆಟ್ಟಿ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ.ಚೌಟ ಪತ್ರ

ಮಂಗಳೂರು : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ…

Read more

ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಶುಕ್ರವಾರದಿಂದ ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ಶೇಂದಿ ಅಂಗಡಿ ಮತ್ತು ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು, ಎಲ್ಲ ವಿಧದ ಅಮಲು ಪದಾರ್ಥಗಳ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.…

Read more

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ.…

Read more

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿ‌ಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ; ಇಬ್ಬರ ಬಂಧನ

ಉಡುಪಿ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿಯ ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಹಿರಿಯಡಕ ಬೊಮ್ಮರಬೆಟ್ಟು ನಿವಾಸಿ ಸಂದೇಶ್ (31) ಮತ್ತು ಸುಶಾಂತ್…

Read more

ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಬಂದ್‌ಗೆ ವಿ‌ಎಚ್‌ಪಿ ಕರೆ; ಖಾಸಗಿ ಬಸ್‌‌ಗಳ ಮೇಲೆ ಕಲ್ಲು ತೂರಾಟ; ಬಸ್ ಸಂಚಾರ ಸ್ಥಗಿತ

ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ (ಮೇ-2), ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಿದೆ. ಗುರುವಾರ ಮಂಗಳೂರಿನ ಬಜ್ಪೆ ಪರಿಸರದಲ್ಲಿ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ…

Read more

ಯಕ್ಷಗಾನ ಕಾರ್ಯಾಗಾರಗಳ ಮೂಲಕ ಅಕಾಡೆಮಿಯಿಂದ ಯಕ್ಷಗಾನಕ್ಕೆ ಶಕ್ತಿ ತುಂಬುವ ಕಾರ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಪ್ರಾಯ

ಉಡುಪಿ : ಯಕ್ಷಗಾನ ಕಲೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಈ ಕಲೆಯ ಆಳ, ವಿಸ್ತಾರ, ಸೊಬಗನ್ನು ಯಕ್ಷಾಸಕ್ತರಿಗೆ ಮುಟ್ಟಿಸಲು ವಿವಿಧ ಕಡೆಗಳಲ್ಲಿ ಯಕ್ಷಗಾನ ಕಾರ್ಯಾಗಾರಗಳನ್ನು ಅಕಾಡೆಮಿ ಹಮ್ಮಿಕೊಳ್ಳುವುದರ ಮೂಲಕ ಕಲೆಯ ಬೆಳೆವಣಿಗೆಗೆ ಪ್ರೋತ್ಸಾಹಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು…

Read more

ಮನೆಯಲ್ಲಿ ಕುಳಿತು ಹಣ ಸಂಪಾದಿಸಿ ಕರೆ ನಂಬಿ 12.15ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಮಂಗಳೂರು : ಮನೆಯಲ್ಲೇ ಕುಳಿತು ದಿನಕ್ಕೆ 2-3 ಸಾವಿರ ರೂ. ಸಂಪಾದಿಸಬಹುದು ಎಂದು ಬಂದ ಕರೆಯನ್ನು ನಂಬಿ ವ್ಯಕ್ತಿಯೊಬ್ಬರು 12,15,012 ರೂ. ಕಳೆದುಕೊಂಡಿರುವ ಕುರಿತಂತೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಮಾ.30ರಂದು ಕರೆ ಬಂದಿದ್ದು, ಕರೆ ಮಾಡಿದಾಕೆ ಪ್ರೀತಿ ಶರ್ಮಾ…

Read more