Dakshina Kannada

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ : 5 ಮಂದಿ ಅಂತಾರಾಜ್ಯ ಕ್ರಿಮಿನಲ್ಸ್ ಅರೆಸ್ಟ್

ಮಂಗಳೂರು : ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟಕ್ಕೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು 24 ಗಂಟೆ ಅವಧಿಯಲ್ಲಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು…

Read more

ಶಿರಾಡಿ ಘಾಟ್‌ ಬೈಪಾಸ್ ಸಮಸ್ಯೆ ತುರ್ತಾಗಿ ಬಗೆಹರಿಸಲು ಕೇಂದ್ರ ಸಚಿವ ಗಡ್ಕರಿಗೆ ಸಂಸದ ಚೌಟ ಮನವಿ

ಮಂಗಳೂರು : ಶಿರಾಡಿ ಘಾಟಿ ಬೈಪಾಸ್‌ ಯೋಜನೆ ಅನುಷ್ಠಾನ ಸೇರಿ ಬೆಂಗಳೂರು-ಮಂಗಳೂರು ಹೆದ್ದಾರಿ ಸಂಪರ್ಕ ಸುಧಾರಣೆ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತಂತೆ ಪ್ರಕ್ರಿಯೆಗೆ ವೇಗ ನೀಡುವಂತೆ ಮನವಿ ಮಾಡಲು ಹೊಸದಿಲ್ಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಯವರ ಭೇಟಿಯಾಗಿ…

Read more

ಅದಾನಿ ಗ್ರೂಪ್‌ನಿಂದ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ 20 ಲಕ್ಷ ದೇಣಿಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪದ ಅದ್ಯಪಾಡಿ ಗ್ರಾಮದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಆದಿನಾಥೇಶ್ವರ ದೇವಲಾಯದ ಜೀರ್ಣೋದ್ಧಾರಕ್ಕೆ ಅದಾನಿ ಸಮೂಹವು ರೂ. 20 ಲಕ್ಷ ದೇಣಿಗೆಯನ್ನು ಘೋಷಿಸಿದೆ. ಅನುದಾನ ಪತ್ರವನ್ನು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೆಶಕರು ಹಾಗೂ ಅಧ್ಯಕ್ಷರಾದ…

Read more

ಪತ್ನಿಗೆ ಹಲ್ಲೆ ನಡೆಸಿ ವಿಷಪ್ರಾಶನಗೈದು ಹತ್ಯೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ಪತ್ನಿಗೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಹತ್ಯೆಗೈದ ಪತಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್‌. ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ ಕುಂಪಲ ಚೇತನ ನಗರದ…

Read more

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಚಾಲನೆ : ಸಂಸದ ಚೌಟ

ಮಂಗಳೂರು : ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ…

Read more

ನಾಪತ್ತೆಯಾಗಿ ಪತ್ತೆಯಾದ ಮಗನನ್ನು ಕಳುಹಿಸಿ ಕೊಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ ಪೋಷಕರು

ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ಮನೆಗೆ ಹೋಗಲು ಒಪ್ಪುತ್ತಿಲ್ಲ ಎಂಬ ವಿಚಾರದ ಬಗ್ಗೆ ವರದಿಯಾಗಿದೆ. ಬಂಟ್ವಾಳ ಪೊಲೀಸರು ಹೈಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಬಗ್ಗೆ ಉಲ್ಲೇಖವಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ದಿಗಂತ್ ಪತ್ತೆ ಬಗ್ಗೆ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಅಫಿಡವಿಟ್ನಲ್ಲಿ…

Read more

ಮೂಡಬಿದ್ರೆ ಭಜರಂಗದಳದ ನಗರ ಸಂಯೋಜಕ ವಿಜೇಶ್ ಮೂಡಬಿದ್ರೆ ನಿಧನ

ಮೂಡಬಿದ್ರಿ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮೂಡಬಿದ್ರೆಯ ನಗರ ಸಂಯೋಜಕರಾಗಿದ್ದ ವಿಜೇಶ್ (30) ನಿಧನರಾಗಿದ್ದಾರೆ. ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು. ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ…

Read more

ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ಹೊಸ ಕೋಚ್‌ಗಳಲ್ಲಿ ಲೋಪ : ದೂರು ನಿವಾರಣೆಗೆ ಸಚಿವರನ್ನು ಭೇಟಿಯಾದ ಸಂಸದ ಕೋಟ

ಉಡುಪಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾಗಿ ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್‌ಗಳ ಜೊತೆಗೆ 2020‌ರಲ್ಲಿ ತಯಾರಾದ ಹಳೆಯ LHB ಕೋಚ್‌ಗಳನ್ನು ಸೇರಿಸುವ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ.…

Read more

ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನ ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನ : ಆರೋಪಿಯ ಬಂಧನ

ಮೂಡುಬಿದಿರೆ : ಪಾಲಡ್ಕ ಗ್ರಾಪಂ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನ ಅಡ್ಡಗಟ್ಟಿ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಅಲಂಗಾರು ಉಳಿಯಾ ನಿವಾಸಿ ಪವನ್ ಕುಮಾರ್ ಎಂದು ಗುರುತಿಸಲಾಗಿದೆ.…

Read more

ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಮೂಡುಬಿದಿರೆ : ಪುರಸಭೆ ವ್ಯಾಪ್ತಿಯ ಪ್ರಾಂತ್ಯ ಗ್ರಾಮದಲ್ಲಿ ಮನೆ ಸಮೀಪದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿರುವ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಮಂಗಳವಾರ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪ್ರಾಂತ್ಯ ಅಜಂಕಲ್ಲುವಿನ ಪ್ರಕಾಶ್ ಎಂಬಾತ ತನ್ನ ಮನೆಯ ಸಮೀಪ ಬಾಡಿಗೆ…

Read more