Dakshina Kannada

ಕಾರು ಹಾಗೂ ರಿಕ್ಷಾ ನಡುವೆ ಅಪಘಾತ; ನಾಲ್ವರಿಗೆ ಗಾಯ

ಮಂಗಳೂರು : ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾ ಒಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ನಾಡು ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಅಬ್ದುಲ್…

Read more

ನಟ ರಿಷಬ್ ಶೆಟ್ಟಿಗೆ ವಾರಾಹಿ ಪಂಜುರ್ಲಿ ದೈವದ ಖಡಕ್ ಎಚ್ಚರಿಕೆ…!!

ಮಂಗಳೂರು : ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್ 1’ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಪ್ಯಾನ್‌ ಇಂಡಿಯಾದಲ್ಲಿ ಚಿತ್ರದ ಬಗ್ಗೆ ಭಾರೀ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ. ‘ಕಾಂತಾರʼ ದೈವ ಹಾಗೂ ತುಳುನಾಡಿನ ಕಥೆಯನ್ನು ಒಳಗೊಂಡಿದೆ. ‘ಕಾಂತಾರ ಚಾಪ್ಟರ್‌ -1’ ಚಿತ್ರೀಕರಣ…

Read more

ಜೈಲಿನ ಜಾಮರ್ ವಿರುದ್ಧ ಬಿಜೆಪಿ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಂಗಳೂರು : ಮಂಗಳೂರು ಜೈಲ್‌ನ ಜಾಮರ್‌ನಿಂದ ನೆಟ್‌ವರ್ಕ್ ಸಮಸ್ಯೆ ಉಂಟಾಗಿದ್ದು, ನೆಟ್‌ವರ್ಕ್ ಸಮಸ್ಯೆ ಬಗೆಹರಿಸದ ಹಿನ್ನೆಲೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಜಿಲ್ಲಾ ಕಾರಾಗೃಹದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಕಾರರು ಮೊಬೈಲ್‌ನ್ನು ನೆಲಕ್ಕೆ ಬಡಿದು…

Read more

ರೈಲು ಚಲಿಸುತ್ತಿದ್ದ ವೇಳೆ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಸಿಬ್ಬಂದಿ

ಸುರತ್ಕಲ್ : ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಡಿಗೆ ಬೀಳುತ್ತಿದ್ದ ಪ್ರಯಾಣಿಕನೊಬ್ಬನನ್ನು ಇಬ್ಬರು ಭದ್ರತಾ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಗುರುವಾರ ನಡೆದಿದೆ. ಜಗದೀಶ್ ಮತ್ತು ಸ್ಟೇಷನ್ ಮಾಸ್ಟರ್ ಮನೋಜ್ ಶೆಟ್ಟಿ ಪ್ರಯಾಣಿಕನ ರಕ್ಷಣೆ ಮಾಡಿದ್ದ ಸಿಬ್ಬಂದಿ. ಸುರತ್ಕಲ್ ರೈಲ್ವೆ…

Read more

ಎನ್‌ಎಸ್‌ಯುಐನಿಂದ “ವಿದ್ಯಾರ್ಥಿ ನ್ಯಾಯ ಯಾತ್ರೆ” – ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಮಹತ್ವದ ಹೋರಾಟ

ಉಡುಪಿ : ರಾಜ್ಯದ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಹಾಗೂ ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಲು ನಮ್ಮ ತಂಡವು ವಿದ್ಯಾರ್ಥಿ ನ್ಯಾಯ ಯಾತ್ರೆ ಎಂಬ ಮಹತ್ವಾಕಾಂಕ್ಷಿ ಪ್ರಯತ್ನವನ್ನು ಆರಂಭಿಸಿದೆ. ಈ ಪ್ರಯತ್ನದ ಭಾಗವಾಗಿ ನಾವು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು ಹಾಗೂ…

Read more

ಎಪ್ರಿಲ್ 9-12ರ ವರೆಗೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಖೋ-ಖೋ ಪಂದ್ಯಾಕೂಟ

ಉಡುಪಿ : ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ಪೂರ್ಣಪ್ರಜ್ಞ ಕಾಲೇಜು, (ಸ್ವಾಯತ್ತ) ಉಡುಪಿ, ವಿಶೇಷವಾಗಿ ನಿರ್ಮಿಸಲಾದ ಶ್ರೀ ವಿಬುಧೇಶತೀರ್ಥ ಸ್ವಾಮೀಜಿ ಒಳಾಂಗಣ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಖೋ-ಖೋ ಪಂದ್ಯಾಕೂಟವನ್ನು ಎಪ್ರಿಲ್ 9-12ರ…

Read more

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಅಪಘಾತ; ಒರ್ವ ಮೃತ್ಯು

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ…

Read more

ಸೈನಿಕರ ಅಂಗವೈಕಲ್ಯ ಪಿಂಚಣಿ ಪಡೆಯುವ ಸಮಸ್ಯೆಗಳ ಬಗ್ಗೆ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ : ಕರ್ತವ್ಯ ನಿರತರಾಗಿದ್ದ ವೇಳೆ ಅಂಗವಿಕಲತೆಗೆ ಒಳಗಾಗಿರುವ ನಮ್ಮ ಮಾಜಿ ಸೈನಿಕರು ಪಿಂಚಣಿ ಪಡೆಯುವುದಕ್ಕೆ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದಕ್ಕೆ ಪ್ರಸ್ತುತವಿರುವ ವ್ಯವಸ್ಥೆ ಸರಳೀಕೃತಗೊಳಿಸುವ ಮೂಲಕ ಸಿಂಗಲ್ ವಿಂಡೋ ಮಾದರಿ ವ್ಯವಸ್ಥೆ ಜಾರಿಗೊಳಿಸಬೇಕು. ಜೊತೆಗೆ ಈ ವಿಚಾರದಲ್ಲಿ ಅಧಿಕಾರಿಗಳು…

Read more

ಯುವ ವಕೀಲೆಗೆ ಬೈದ ಜಡ್ಜ್ : ನ್ಯಾಯಾಲಯದ ಆವರಣದಲ್ಲಿ ವಕೀಲರಿಂದ ಪ್ರತಿಭಟನೆ

ಮಂಗಳೂರು : ನ್ಯಾಯಾಧೀಶರು ಯುವ ವಕೀಲೆಯೊಬ್ಬರನ್ನು ಬೈದರೆಂದು ಆರೋಪಿಸಿ, ಗುರುವಾರ ಮಂಗಳೂರು ನ್ಯಾಯಾಲಯದ ಆವರಣದಲ್ಲಿ ಕಿರಿಯರು ವಕೀಲರು ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ಮಂಗಳೂರಿನ ಒಂದನೇ ಸಿಜೆಎಂ ಕೋರ್ಟ್‌ನಲ್ಲಿ ಬುಧವಾರ ಪ್ರಕರಣವೊಂದರ ವಿಚಾರಣೆ ವೇಳೆ ಯುವ…

Read more

19 ಗೋವು ಅಕ್ರಮ ಸಾಗಾಟ ಪ್ರಕರಣ : ಐವರು ಪೊಲೀಸ್ ವಶಕ್ಕೆ

ಮಂಗಳೂರು : ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ಮಾ.28ರಂದು 19 ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಸೂರಲ್ಪಾಡಿಯಲ್ಲಿ ಬಜಪೆ ಪೊಲೀಸರು ಪತ್ತೆ ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದುಗನಬೆಟ್ಟು…

Read more