Dakshina Kannada

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ

ಮಂಗಳೂರು : ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ (ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ) ಅಧ್ಯಕ್ಷ ಸ್ಥಾನಕ್ಕೆ ಕೆ. ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ. ಜೂ.11 ರಂದು ಬೆಂಗಳೂರಿನಿಂದ ಶಾಸಕರು ಕರೆ ಮಾಡಿ, ಪುಡಾ (ಪುತ್ತೂರು…

Read more

ನಾಲ್ಕು ದರೋಡೆ ಪ್ರಕರಣ ಬೇಧಿಸಿದ ಪೊಲೀಸರು – ಆರುಮಂದಿ ಅರೆಸ್ಟ್

ಮಂಗಳೂರು : ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಮನೆಗಳವು ಹಾಗೂ ಪಂಪ್‌ವೆಲ್‌ ಕಪಿತಾನಿಯೋ ಬಳಿಯ ಅಂಗಡಿಗಳವು ಪ್ರಕರಣವನ್ನು ಬೇಧಿಸಿದ ಮಂಗಳೂರು ಪೊಲೀಸರು ನಾಲ್ವರನ್ನು ಬಂಧಿಸಿ 10ಲಕ್ಷ ನಗದು ಸೇರಿದಂತೆ 12.50ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರದ ಮಹಮ್ಮದ್ ಸಿಯಾಬ್,…

Read more

‘ನಾಳೆ ಶಾಲೆಗೆ ರಜೆ ಇದೆಯಾ?’ ಮಾವನಿಗೆ ಕರೆ ಮಾಡಿರುವ ಪುಟ್ಟಮಗುವಿನ ಆಡಿಯೋ ವೈರಲ್

ಮಂಗಳೂರು : ‘ನಾಳೆ ಶಾಲೆಗೆ ರಜೆ ಇದೆಯಾ?’ ಎಂದು ಪುಟ್ಟಮಗುವೊಂದು ತನ್ನ ತೊದಲು ಮಾತಿನಿಂದ ಮಾವನಿಗೆ ಕರೆ ಮಾಡಿರುವ ಆಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಮಳೆ ಹೆಚ್ಚಾದಲ್ಲಿ, ರೆಡ್ ಅಲರ್ಟ್ ಇರುವ ದಿನ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ…

Read more

ಸತ್ತ ನಾಗರ ಹಾವನ್ನು ಕುಕ್ಕೆ ಸುಬ್ರಹ್ಮಣ್ಯ ದೇಗುಲ ಕಚೇರಿ ಮುಂದಿಟ್ಟು ಪ್ರತಿಭಟನೆಗೆ ಮುಂದಾದ ವ್ಯಕ್ತಿ..!

ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ಕಚೇರಿ ಮುಂಭಾಗ ವ್ಯಕ್ತಿಯೊಬ್ಬರು ಸತ್ತ ನಾಗರ ಹಾವು ಇಟ್ಟು ಪ್ರತಿಭಟನೆಗೆ ಮುಂದಾದ ಘಟನೆ ಜು.11 ರಂದು ನಡೆದಿದೆ. ಕುಕ್ಕೆ ಬೈಪಾಸ್ ರಸ್ತೆಯಲ್ಲಿ ಯಾವುದೋ ವಾಹನದಡಿಗೆ ಬಿದ್ದು ನಾಗರ ಹಾವು ಸತ್ತು ಬಿದ್ದಿತ್ತು. ಇದನ್ನು ಗಮನಿಸಿದ…

Read more

ಮೂಡ ಹಗರಣ ವಿರೋಧಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕರ ಬಂಧನ – ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ…

Read more

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ, ತೇರ್ಗಡೆಯಾದ ಅನುಶ್ರೀ ನಿಟ್ಟೆ

ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅನುಶ್ರೀ ಅವರು ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ಮೂಲಕ ತೇರ್ಗಡೆ ಹೊಂದಿದ್ದಾರೆ. ಇವರು ನಿಟ್ಟೆ ಗಣೇಶ್ ಆಚಾರ್ಯ ಮತ್ತು ವೀಣಾ ಆಚಾರ್ಯ…

Read more

ಸಿಎ ಅಂತಿಮ ಪರೀಕ್ಷೆಯಲ್ಲಿ ಅರುಣ್ ಕುಮಾರ್ ಡಿ. ತೇರ್ಗಡೆ

ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಳೆಮಜಲು ಪೊನ್ವಲ್ಲಿಯ ಅರುಣ್ ಕುಮಾರ್ ಡಿ. ಅವರು ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ 2024ರ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅರುಣ್ ಕುಮಾರ್ ಬೆಂಗಳೂರಿನ ಜಿ.ಪಿ.ಎಸ್.ವಿ. ಮತ್ತು…

Read more

ಗಾಂಜಾ ಸಾಗಾಟ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ಸುಳ್ಯ : ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್‌ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್‌ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ…

Read more

ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು : ಪ್ರತಿಭಟನೆ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು…

Read more

ಕೆಲಸದ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು..!

ಕಿನ್ನಿಗೋಳಿ : ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು‌ ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಎಂದು ಗುರುತಿಸಲಾಗಿದೆ. ಕಿನ್ನಿಗೋಳಿಯ ಉಲ್ಲಂಜೆಯಲ್ಲಿ ಮನೆಯೊಂದಕ್ಕೆ ಶೀಟ್ ಅಳವಡಿಸುವಾಗ,…

Read more