Mangaluru

ದುಬೈ ಗಡಿನಾಡ ಉತ್ಸವದಲ್ಲಿ ಶೈಕ್ಷಣಿಕ ಶ್ರೇಷ್ಠತೆಗಾಗಿ ಡಾ. ಫಖ್ರುದ್ದೀನ್ ಕುನಿಲ್ ಅವರಿಗೆ ಸನ್ಮಾನ

ಮಂಗಳೂರು : ದುಬೈನ ಔದ್ ಮೆಥಾದಲ್ಲಿರುವ ‘ಜೆಮ್’ ಖಾಸಗಿ ಶಾಲೆಯು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದಿಂದ ಆಯೋಜಿಸಲಾದ ದುಬೈ ಗಡಿನಾಡ ಉತ್ಸವಕ್ಕೆ ಸಾಕ್ಷಿಯಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅಕಾಡೆಮಿಯು ತನ್ನ 50ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸುಸಂದರ್ಭದಲ್ಲಿ ಶಿಕ್ಷಣ…

Read more

ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿ ವಂಚನೆ

ಮಂಗಳೂರು : ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೋರ್ವ…

Read more

ಅ.24ರಂದು ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆ ಮತ ಎಣಿಕೆ, ನಿಷೇಧಾಜ್ಞೆ..

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಗ್ಗೆ 5ರಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಶಿಯಸ್…

Read more

ವಿಧಾನ ಪರಿಷತ್ ಉಪ ಚುನಾವಣೆ : ಸ್ಪೀಕರ್ ಯು.ಟಿ.ಖಾದರ್ ಮತದಾನ

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದ್ದು, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಈ ಕ್ಷೇತ್ರದ…

Read more

ರೈಲ್ವೆ ಹಳಿ ಮೇಲೆ ಕಲ್ಲು – ಗಂಭೀರವಾಗಿ ಪರಿಗಣಿಸಲು‌ ಶಾಸಕ ಕಾಮತ್ ಆಗ್ರಹ

ಮಂಗಳೂರು-ಕೇರಳ ನಡುವಿನ ರೈಲು ಮಾರ್ಗದ ಹಳಿಗಳ ಮೇಲೆ ತೊಕ್ಕೊಟ್ಟು ಬಳಿ ಆಗಂತುಕರು ಹಲವು ಕಲ್ಲುಗಳನ್ನಿಟ್ಟು ರೈಲು ಬೀಳಿಸಲು ನಡೆಸಿರುವ ಷಡ್ಯಂತ್ರವು ತೀವ್ರ ಕಳವಳಕಾರಿಯಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್‌ರವರು ಆಗ್ರಹಿಸಿದರು. ಹಳಿಗಳ…

Read more

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ; ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

ಮಂಗಳೂರು : ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್‌ ಬ್ರಿಡ್ಜ್‌ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌…

Read more

ತೆಂಕುತಿಟ್ಟುವಿನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಮಂಗಳೂರು : ತೆಂಕುತಿಟ್ಟು ಯಕ್ಷಗಾನದ ಪಾರಂಪರಿಕ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ(67) ಹೃದಯಾಘಾತದಿಂದ ನಿಧನರಾಗಿದ್ದಾರೆ. ಯಕ್ಷಗಾನ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಅದಕ್ಕಾಗಿ ನಿನ್ನೆ ರವಿವಾರ ಬೆಳಗ್ಗೆ ಬೆಂಗಳೂರಿನ…

Read more

ನಂತೂರು ಸರ್ಕಲ್‌ನಲ್ಲಿ ಅಪಘಾತ; ಕಂಕನಾಡಿ ಆಸ್ಪತ್ರೆಯ ಉದ್ಯೋಗಿ ಕ್ರಿಸ್ಟಿ ಕ್ರಾಸ್ತಾ ಸ್ಥಳದಲ್ಲೇ ಮೃತ್ಯು

ದಕ್ಷಿಣ ಕನ್ನಡ : ಕಂಕನಾಡಿ ಆಸ್ಪತ್ರೆಯ ಉದ್ಯೋಗಿ ಕೋಡಿಕಲ್ ನಿವಾಸಿ ಕ್ರಿಸ್ಟಿ ಕ್ರಾಸ್ತಾ(27) ತನ್ನ ದ್ವಿಚಕ್ರ ವಾಹನದಲ್ಲಿ ಮನೆ ಕಡೆ ಹೋಗುತ್ತಿದ್ದ ಸಂದರ್ಭ ನಂತೂರು ಸರ್ಕಲಲ್ಲಿ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಅದೇ ಸಂದರ್ಭ ಕೇರಳ ಕಡೆಗೆ ತೆರಳುತ್ತಿದ್ದ ಮೀನು ತುಂಬಿದ…

Read more

ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬಜ್ಪೆ : ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ ಪಿಎಲ್‌ (MRPL) ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್‌ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ. ಮೃತ ದುರ್ದೈವಿಯನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು…

Read more

ವಾಟ್ಸ್‌ಆ್ಯಪ್ ಸಂದೇಶವನ್ನು ನಂಬಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ವ್ಯಕ್ತಿ

ಮಂಗಳೂರು : ಆನ್‌ಲೈನ್ ಟ್ರೇಡಿಂಗ್ ಬಗ್ಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ…

Read more