Mangaluru

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಬೆಂಕಿಗಾಹುತಿ

ಮಂಗಳೂರು : ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್‌ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗಿನ ಜಾವ 3ರಿಂದ 4 ಗಂಟೆಯ…

Read more

ಬೀದಿಬದಿಯಲ್ಲಿ ಕೊಳೆತ ಕುರಿಗಳ ಕಳೇಬರವನ್ನು ಎಸೆದು ಪರಾರಿಯಾದ ಕಟುಕರು

ಸುರತ್ಕಲ್ : ಇಲ್ಲಿನ ಮುಕ್ಕ ಭಾಗದಲ್ಲಿ ಹಳೆ ಟೋಲ್‌ಗೇಟ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಕೊಳೆತ ಕುರಿಗಳ ಕಳೇಬರವನ್ನು ಕಟುಕರು ಎಸೆದು ಪರಾರಿಯಾದ ಘಟನೆ ನಡೆದಿದೆ. ಸತ್ತು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ನಾಲ್ಕೈದು ಕುರಿಗಳ ಕಳೇಬರವನ್ನು ನಗರಪಾಲಿಕೆಯ ಕಾರ್ಮಿಕರ ಸಹಾಯದಿಂದ ಮಣ್ಣು ಮಾಡುವ…

Read more

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹ ಪ್ರಸ್ತಾಪ ಖಂಡನೀಯ, ಅನ್ಯಾಯದ ವಿರುದ್ಧ ಹೋರಾಟ ಅನಿವಾರ್ಯ : ಮಾಜಿ ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿ

ಕಾರ್ಕಳ : ಪ್ರಸಕ್ತ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕೇಂದ್ರವಿದೆ. ರಾಜ್ಯ ಹೆದ್ದಾರಿ ಎಂಬ ಸಬೂಬು ನೀಡಿ ಕೇವಲ 3 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತೊಂದು ಟೋಲ್ ಸಂಗ್ರಹ ಕೇಂದ್ರ ತೆರೆಯಲು ರಾಜ್ಯ ಸರಕಾರ ತಯಾರಿ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದು…

Read more

ಕಾರ್ಕಳ-ಪಡುಬಿದ್ರಿ ರಸ್ತೆಯ ಟೋಲ್ ಸಂಗ್ರಹ ಕೇಂದ್ರ ಸ್ಥಗಿತಕ್ಕೆ ಮನವಿ

ಉಡುಪಿ : ಪಡುಬಿದ್ರಿ-ಬೆಳ್ಮಣ್ ರಸ್ತೆಯಲ್ಲಿ ಹೊಸದಾಗಿ ಟೋಲ್ ಸಂಗ್ರಹ ಮಾಡುವ ಪ್ರಸ್ತಾಪದಿಂದ ಜನರಿಗಾಗುವ ತೊಂದರೆಯನ್ನು ಜಿಲ್ಲಾಧಿಕಾರಿಗಳು ತಕ್ಷಣ ರಾಜ್ಯ ಸರ್ಕಾರದ ಗಮನಕ್ಕೆ ತರುವ ಮೂಲಕ ರಾಜ್ಯ ಸರ್ಕಾರ ಟೋಲ್ ಸಂಗ್ರಹಕ್ಕೆ ನೀಡಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಳ್ಮಣ್…

Read more

ಕಾಲೇಜು ವಿದ್ಯಾರ್ಥಿಗಳಿಂದ ನಡುರಸ್ತೆಯಲ್ಲೇ ಹೊಡೆದಾಟ – ವೀಡಿಯೋ ವೈರಲ್

ಮಂಗಳೂರು : ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ…

Read more

ಗೂಡಂಗಡಿ ತೆರವು ವಿರುದ್ಧ ತಿರುಗಿಬಿದ್ದ ಬೀದಿಬದಿ ವ್ಯಾಪಾರಿಗಳು – ಮೇಯರ್, ಆಯುಕ್ತರು, ಅಧಿಕಾರಿಗಳಿಗೆ ಬೈಗಳ ಸುರಿಮಳೆ

ಮಂಗಳೂರು : ಕಳೆದ ನಾಲ್ಕೈದು ದಿನಗಳಿಂದ ಮಂಗಳೂರು ಮನಪಾದಿಂದ ಟೈಗರ್ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಗೂಡಂಗಡಿ ತೆರವು ಕಾರ್ಯಾಚರಣೆ ವಿರುದ್ಧ ತಿರುಗಿಬಿದ್ದಿರುವ ಬೀದಿಬದಿ ವ್ಯಾಪಾರಿಗಳು ನಗರದ ಸರ್ವೀಸ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದಾರೆ. ನೂರಾರು ಸಂಖ್ಯೆಯಲ್ಲಿ ಸರ್ವೀಸ್ ಬಸ್ ನಿಲ್ದಾಣದ…

Read more

ಬಿಜೆಪಿ ಪಾದಯಾತ್ರೆಯಲ್ಲಿ ಮಂಗಳೂರಿನ 5ಸಾವಿರ ಕಾರ್ಯಕರ್ತರು ಭಾಗಿ – ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ

ಮಂಗಳೂರು : ರಾಜ್ಯ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ಆ.3ರಿಂದ 10ರವರೆಗೆ ನಡೆಯುವ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ದ.ಕ.ಜಿಲ್ಲೆಯ ಸುಮಾರು 5ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ‌ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು. ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ…

Read more

ಶ್ರೀಮತಿ ಉಷಾಗೆ ಪಿಹೆಚ್‌ಡಿ ಪದವಿ

ಉಡುಪಿ : ದಾವಣಗೆರೆ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಉಷಾ ಇವರಿಗೆ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನ ಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್‌ಸ್ರ್ಟೀಟ್, ಮಂಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ಸಹ…

Read more

“ರೆಡ್ ಅಲರ್ಟ್” ನಾಳೆ (ಆ.2) ದ.ಕ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ

ಮಂಗಳೂರು : ರೆಡ್ ಅಲರ್ಟ್ ಎಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾನಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ಆಗಸ್ಟ್ 2ರಂದು ರಜೆಯನ್ನು ಘೋಷಿಸಿ‌ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ…

Read more

ಏಕಾಏಕಿ ಕುಸಿದ ಮನೆಯ ಮೇಲ್ಛಾವಣಿ – ಅಜ್ಜಿ, ಮೊಮ್ಮಗಳು ಪ್ರಾಣಾಪಾಯದಿಂದ ಪಾರು

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನಗರದ ಹೊರವಲಯದಲ್ಲಿರುವ ಬಜಾಲ್ ಫೈಸಲ್ ನಗರದಲ್ಲಿ ಮನೆಯೊಂದು ಕುಸಿದು ಅಜ್ಜಿ – ಮೊಮ್ಮಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಮಧ್ಯಾಹ್ನ 12.30ಸುಮಾರಿಗೆ ಯಮುನಾ ಎಂಬವರಿಗೆ ಸೇರಿದ ಮನೆಯ ಮೇಲ್ಛಾವಣಿ ಏಕಾಏಕಿ ಕುಸಿದಿದೆ. ಈ…

Read more