Sushanth Brahmavar A top-graduate from Poorna Prajna Evening college and Vice-President of Bharthiya Janatha Party OBC Morcha Udupi City of RSS Background Who has brought international Fame Award for completing Entire Bhagvadgits”s Verses in 5.30 hours has been nominated for one more National Fame Award of India Books of Awards, which has brought great privilage to the party in the city but the intresting part does not end here he has also taken the steps for getting the farmers ahead by giving great innovative margin profits to the farmers of the state promoting Indian Produce.Mr.Sushanth’s work has not only empowered local farmers but also set new benchmarks in sustainable agri-business.His entrepreneurial spirit and passion for excellence make him a true inspiration in many fields. Let us all applause his dedication and extend our heartfelt appreciation for his contribution to the nations’ economic and agricultural growth.
Education
ಎಸೆಸೆಲ್ಸಿ ಮರುಮೌಲ್ಯಮಾಪನ : ಸಾಯಿಸ್ಪರ್ಶಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ್ – 625 ಅಂಕ
ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ಮತ್ತು ವಿ. ಕೆ. ಆರ್. ಶಾಲೆಯ ಎಸೆಸೆಲ್ಸಿ ಪರೀಕ್ಷೆ-1ರ ಮರುಮೌಲ್ಯಮಾಪನದಲ್ಲಿ ಸಾಯಿಸ್ಪರ್ಶ ಕೆ. 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.
ಈಕೆಗೆ ಮೊದಲ ಪರೀಕ್ಷೆಯಲ್ಲಿ 623 ಅಂಕಗಳು ಬಂದಿದ್ದವು. ಇದರ ಜೊತೆಗೆ ಶಾಲೆಯಲ್ಲಿ ಇನ್ನೂ ಎಂಟು ವಿದ್ಯಾರ್ಥಿಳಿಗೆ ರ್ಯಾಂಕ್ ಬಂದಿದೆ. ಶಾಲೆಗೆ ಒಟ್ಟು ರಾಜ್ಯಮಟ್ಟದ 9 ರ್ಯಾಂಕ್ಗಳು ಲಭಿಸಿವೆ ಎಂದು ಶಾಲಾ ಅಧ್ಯಕ್ಷ ಹಾಗೂ ಸಂಚಾಲಕ ಬಿ. ಎಂ. ಸುಕುಮಾರ ಶೆಟ್ಟಿ ಮತ್ತು ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್ ತಿಳಿಸಿದ್ದಾರೆ.
ಉಡುಪಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ವಡ್ಡರ್ಸೆಯ ಕನ್ನಡ ಭಾಷಾ ಶಿಕ್ಷಕಿ ಗೀತಾ ಆನಂದ ಶೆಟ್ಟಿ ಅವರು 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಚಿನ್ನದ ಪದಕ ವಿಜೇತರಾಗಿ ಮೇಘಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಈವರೆಗೆ 13 ಬಾರಿ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದು, ಹಲವಾರು ಬಹುಮಾನಗಳನ್ನು ಪಡೆದಿದ್ದಾರೆ. 2025 ರ ಫೆಬ್ರವರಿಯಲ್ಲಿ ಚಂಢೀಗಡದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಈಗ ದ್ವಿತೀಯ ಬಾರಿಗೆ ಮೇಘಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ : ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಇಂದ್ರಾಳಿ ಯಕ್ಷಗಾನ ಕೇಂದ್ರ, ಪ್ರಾದೇಶಿಕ ಸಂಶೋಧನ ಕೇಂದ್ರಗಳ (ಆರ್ಆರ್ಸಿ) ನಿರ್ದೇಶಕರಾಗಿದ್ದ ಪ್ರೊ.ಹೆರಂಜೆ ಕೃಷ್ಣ ಭಟ್ (84) ಅಸೌಖ್ಯದಿಂದ ಮೇ 8ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಮೂಲತಃ ಬ್ರಹ್ಮಾವರ ಸಮೀಪದ ಹೆರಂಜೆಯವರಾದ ಭಟ್ಟರು ಉಡುಪಿ ಸಂಸ್ಕೃತ ಕಾಲೇಜಿನಲ್ಲಿ ಅಧ್ಯಯನ ಮಾಡಿ, ಸುದೀರ್ಘ ಕಾಲ ಎಂಜಿಎಂ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಉಪನ್ಯಾಸಕರು, ವಿಭಾಗ ಮುಖ್ಯಸ್ಥರು, ಎನ್ಸಿಸಿ ಮುಖ್ಯಸ್ಥರಾಗಿ, ಎಸ್ಟೇಟ್ ಮೆನೇಜರ್ ಆಗಿ ಸೇವೆ ಸಲ್ಲಿಸಿದ್ದರು.
ಪ್ರೊ.ಕು.ಶಿ.ಹರಿದಾಸ ಭಟ್ಟರ ಬಳಿಕ, ಗೋವಿಂದ ಪೈ ಸಂಶೋಧನ ಕೇಂದ್ರ, ಯಕ್ಷಗಾನ ಕೇಂದ್ರ, ಆರ್ಆರ್ಸಿ ನಿರ್ದೇಶಕರಾಗಿದ್ದರು. ಇವರ ಸಂಪಾದಕತ್ವದಲ್ಲಿ ಗೋವಿಂದ ಪೈ ಸಂಶೋಧನ ಸಂಪುಟದಂತಹ (ಮೊದಲ ಸಂಪುಟ) ಹತ್ತಾರು ಗ್ರಂಥಗಳು ಕೇಂದ್ರದಿಂದ ಹೊರಬಂದಿದ್ದವು. ಇವರ ನೇತೃತ್ವದಲ್ಲಿ ವಿದೇಶಗಳಲ್ಲಿ ಯಕ್ಷಗಾನ ಪ್ರದರ್ಶನಗಳು ನಡೆದಿದ್ದವು.
ಎಂಜಿಎಂ ಕಾಲೇಜಿನ ಆವರಣದಲ್ಲಿ ವಾದಿರಾಜ ಕನಕದಾಸ ಸಂಗೀತೋತ್ಸವ, ಸಾಂಸ್ಕೃತಿಕ ಹಬ್ಬಗಳು, ತುಳು ಸಮ್ಮೇಳನ, ಹಲವು ಜನಪದ ಪ್ರದರ್ಶನ ಕಲೆಗಳ ಕಾರ್ಯಕ್ರಮಗಳ ದಾಖಲಾತಿಗಳು ನಡೆದವು. ಉತ್ತಮ ಸಂಘಟಕರಾಗಿದ್ದ ಕೃಷ್ಣ ಭಟ್ಟರು ಸುದೀರ್ಘ ಕಾಲ ಉಡುಪಿ ಪರ್ಯಾಯೋತ್ಸವದ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು.
ವೇದಾಧ್ಯಯವನ್ನೂ ನಡೆಸಿದ್ದ ಭಟ್ಟರು ಡಾ.ಶಿವರಾಮ ಕಾರಂತ, ಕೆ.ಕೆ.ಹೆಬ್ಬಾರರಂತಹ ಹಿರಿಯರ ಒಡನಾಟವನ್ನು ಹೊಂದಿದ್ದರು.
ಸುಮಾರು ಐದು ದಶಕಗಳ ಕಾಲ ಉಡುಪಿಯಲ್ಲಿ ನಡೆದ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರೊ.ಭಟ್ಟರು ಹಳೆಯ ಮತ್ತು ಹೊಸ ತಲೆಮಾರಿನ ನಡುವಿನ ಕೊಂಡಿಯಾಗಿದ್ದರು. ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದ್ದರೂ ವೇದಿಕೆಯಲ್ಲಿ ಕಾಣಿಸಿಕೊಳ್ಳದೆ ತೆರೆಮರೆಯಲ್ಲಿಯೇ ನಿಂತು ಕಾರ್ಯ ನಿರ್ವಹಿಸುವ ಅವರ ಕಾರ್ಯಶೈಲಿ ಅನುಕರಣೀಯವಾಗಿತ್ತು. ಇವರ ಅಮೂಲ್ಯ ಬಹುಮುಖ ಸೇವೆಯನ್ನು ಪರಿಗಣಿಸಿ ಶ್ರೀಕೃಷ್ಣಮಠದಲ್ಲಿ ವಿವಿಧ ಮಠಾಧೀಶರಿಂದ, 2007ರಲ್ಲಿ ಉಡುಪಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಆಳ್ವಾಸ್ ನುಡಿಸಿರಿ, ತಿಂಗಳೆ ಗರೋಡಿ ಉತ್ಸವ ಸಹಿತ ಹಲವು ಗೌರವ ಪುರಸ್ಕಾರಗಳು ಸಂದಿವೆ.
ಸಂತಾಪ ಪ್ರೊ. ಭಟ್ಟರ ನಿಧನಕ್ಕೆ ಪರ್ಯಾಯ ಪುತ್ತಿಗೆ, ಪೇಜಾವರ, ಅದಮಾರು, ಪಲಿಮಾರು, ಭಂಡಾರಕೇರಿ, ಕಾಣಿಯೂರು, ಸೋದೆ, ಶೀರೂರು ಮಠಾಧೀಶರು, ಧರ್ಮಸ್ಥಳದ ಧರ್ಮಾಧಿಕಾರಿ ಡಾವೀರೇಂದ್ರ ಹೆಗ್ಗಡೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಮೂಡಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ ಆಳ್ವ ಸಂತಾಪ ಸೂಚಿಸಿದ್ದಾರೆ.
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ.
ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡರ ಪುತ್ರ ಪ್ರಥಮ್ (16) ಮೃತ ಬಾಲಕ.
ಮೇ 4ರಂದು ಮಧ್ಯಾಹ್ನಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಬಾಲಕನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಫಲಕಾರಿಯಾಗಿಲ್ಲ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್ಎಸ್ಎಲ್ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್ಪಾಲ್ ಸುವರ್ಣ ಅಭಿನಂದನೆ
ಉಡುಪಿ : ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12, ಉಡುಪಿ ಜಿಲ್ಲೆ ಶೇ. 89.96 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಗೆ ಉಡುಪಿ ಶಾಸಕ ಶ್ರೀ ಯಶ್ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಿಲ್ಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟವನ್ನು ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಸಾಬೀತು ಮಾಡಿದೆ.
ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಗಳಿಸಿದೆ. ಕಲಬುರಗಿ ಜಿಲ್ಲೆ ಕೊನೆ ಸ್ಥಾನ ಗಳಿಸಿದೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎಸೆಸೆಲ್ಸಿ ಫಲಿತಾಂಶವನ್ನು ಪ್ರಕಟಿಸಿದರು. ದ.ಕ. ಜಿಲ್ಲೆ 91.12 ಶೇ. ಫಲಿತಾಂಶ ದಾಖಲಿಸಿದ್ದರೆ, ಉಡುಪಿ ಜಿಲ್ಲೆ 89.96 ಫಲಿತಾಂಶ ದಾಖಲಿಸಿದೆ. 42.43 ಶೇ. ಫಲಿತಾಂಶ ದಾಖಲಿಸಿರುವ ಕಲಬುರಗಿ ಜಿಲ್ಲೆ ರಾಜ್ಯಕ್ಕೆ ಕೊನೆಯ ಸ್ಥಾನಿಯಾಗಿದೆ.
ಈ ವರ್ಷ ಒಟ್ಟು ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉಡುಪಿಯ ಸ್ವಸ್ತಿ ಕಾಮತ್ ಸಹಿತ 22 ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವರು ತಿಳಿಸಿದರು.
ಎಸ್ಎಸ್ಎಲ್ಸಿ ಫಲಿತಾಂಶ : ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ
ಉಡುಪಿ : ಉಡುಪಿ ಜಿಲ್ಲೆ 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು, ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ.
ಶೇಕಡ 89.96 ಫಲಿತಾಂಶ ಜಿಲ್ಲೆಗೆ ಲಭಿಸಿದ್ದು, ಈ ಸಾಧನೆಗೆ ಕಾರಣರಾದ ಜಿಲ್ಲಾಡಳಿತ, ಜಿಲ್ಲಾ ಮಟ್ಟದ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರನ್ನು ಅಭಿನಂದಿಸುತ್ತೇನೆ. ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಇದೀಗ ಎಸ್ಎಸ್ಎಲ್ಸಿ ಫಲಿತಾಂಶದಲ್ಲೂ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ.
ಈ ಪರೀಕ್ಷೆಯಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ಈ ಬಾರಿ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗಣಿತ ನಗರದ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಸ್ಕೂಲ್ನ ವಿದ್ಯಾರ್ಥಿನಿ ಕೂಡ ಫುಲ್ ಮಾರ್ಕ್ಸ್ ಪಡೆದವರ ಸಾಲಿಗೆ ಸೇರ್ಪಡೆಯಾಗಿದ್ದಾಳೆ. ಇಲ್ಲಿನ ಸ್ವಸ್ತಿ ಕಾಮತ್ 625 ಮಾರ್ಕ್ ಗಳಿಸಿ ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿದ್ದಾಳೆ.
ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ
ಉಡುಪಿ : ಉಡುಪಿ ಸಮೀಪದ ಕುಂತಳನಗರ ಮಣಿಪುರದಲ್ಲಿರುವ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೆರವೇರಿತು.
ಕಾರ್ಯಕ್ರಮವನ್ನು ಉದ್ಯಮಿ ಸಾಣೂರು ಗುತ್ತು ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಯುವ ಸಮುದಾಯಕ್ಕೆ ಉತ್ತಮ ಅವಕಾಶ ನಿರ್ಮಿಸಿಕೊಡುವುದು ಸಾಮಾನ್ಯ ಮಾತಲ್ಲ. ಕುಂತಳನಗರ ಮಣಿಪುರದಲ್ಲಿರುವ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರವು ಅತ್ಯುತ್ತಮ ಕಾರ್ಯ ಮಾಡುತ್ತಿದೆ. ಮಕ್ಕಳು ಅವಕಾಶವನ್ನು ಬಳಸಿಕೊಂಡು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕೋಶಾಧಿಕಾರಿ ವಿಜಿತ್ ಶೆಟ್ಟಿ ಮಾತನಾಡಿ, ಈಗಾಗಲೇ ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರವು ನೂರಾರು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಿದೆ. ಮೂರು ಬಾರಿ ಎಂಆರ್ಜಿ ಸಂಸ್ಥೆಯ ಡಾ. ಪ್ರಕಾಶ್ ಶೆಟ್ಟಿಯವರ ನೇತೃತ್ವದಲ್ಲಿ ಮೂರು ಬಾರಿ ಉದ್ಯೋಗ ಮೇಳ ಆಯೋಜಿಸಿದ್ದು, ಎರಡು ಸಾವಿರಕ್ಕೂ ಅಧಿಕ ಮಂದಿ ಉದ್ಯೋಗ ಪಡೆದಿದ್ದಾರೆ ಎಂದರು.
ಪ್ರೊ. ವಿದ್ಯಾರಾಣಿಯವರು ಸಂಸ್ಥೆಯ ಈ ವರೆಗಿನ ತರಬೇತಿ ಮತ್ತು ಉದ್ಯೋಗ ಮೇಳದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭ ಸಾಣೂರು ಗುತ್ತು ದೇವಿಪ್ರಸಾದ್ ಶೆಟ್ಟಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಎಂಎಸ್ಆರ್ಎಸ್ ಕಾಲೇಜಿನ ಪ್ರಾಂಶುಪಾಲ ಮಿಥುನ್ ಚಕ್ರವರ್ತಿ, ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್ಬಿ ಶೆಟ್ಟಿ, ಪದ್ಮನಾಭ ಹೆಗ್ಡೆ, ಕಾರ್ತಿಕ್ ಶೆಟ್ಟಿ, ರಂಜನಿ ಹೆಗ್ಡೆ, ಡಾ. ಸುಧೀರ್ ರಾಜ್, ಶ್ರೀಮತಿ ರಶ್ಮಿ, ಹರೀಶ್ ಶೆಟ್ಟಿ, ರಮೇಶ್ ಶೆಟ್ಟಿ ನಿಂಜೂರು, ಅಶೋಕ್ ಕುಮಾರ್ ಶೆಟ್ಟಿ ಕೆಮ್ತೂರು ಉಪಸ್ಥಿತರಿದ್ದರು.