ಮಂಗಳೂರು: ವಯನಾಡ್ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿಯವರು ಅಮೇಥಿ ಸಂಸದರಾದ ಕೆ.ಎಲ್ ಶರ್ಮಾ ಅವರೊಂದಿಗೆ ಕೋಟತ್ತಾರ ಗ್ರಾಮ ಪಂಚಾಯತ್ ನಲ್ಲಿ ನೆಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
Election
ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ವಿನಯ್ ಕುಲಕರ್ಣಿ ಮತ್ತು ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಲಾಗಿದ್ದು ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ HUDA ಅಧ್ಯಕ್ಷರಾದ ಶಾಕಿರ್ ಸನದಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ರ್ಶಿ ವಿಜಯ್ ಮತ್ತಿಕಟ್ಟಿ ಅವರು ಹುಬ್ಬಳ್ಳಿಯಲ್ಲಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚನಾವಣೆಯ ಬಗ್ಗೆ ಚರ್ಚೆ ನಡೆಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಾಲರಾಜ್ ನಾಯ್ಕ್ ಮತ್ತು ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರುಗಳು ಉಪಸ್ಥಿತರಿದ್ದರು.
ವಿಧಾನಪರಿಷತ್ ಚುನಾವಣೆ : 1600ಕ್ಕೂ ಅಧಿಕ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು.
ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ, ದಕ್ಷಿಣ ಕನ್ನಡದಲ್ಲಿ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಅ. 21ರಂದು ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಿಶೋರ್ ಕುಮಾರ್ ತಮ್ಮ ಮುಖ್ಯ ಪ್ರತಿಸ್ಪರ್ಧಿ, ಕಾಂಗ್ರೆಸ್ನ ರಾಜು ಪೂಜಾರಿ ವಿರುದ್ಧ ಗೆಲುವು ಸಾಧಿಸಿದರು.
ಒಟ್ಟು 5,906 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದು, 12 ಮೇಜುಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ಪ್ರತಿ ಮೇಜಿಗೆ ಕಣ್ಕಾವಲು ಮತ್ತು ಸಹಾಯಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮಿಶ್ರಣ ಮತ್ತು ಸಿಂಧುತ್ವ ಪರಿಶೀಲನೆಯ ನಂತರ, ಮೊದಲ ಪ್ರಾಶಸ್ತ್ಯದ ಮತಗಳ ಅಂತಿಮ ಎಣಿಕೆ ನಡೆಸಲಾಯಿತು.
ಈ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳು ಸ್ಪರ್ಧಿಸಿದ್ದರು – ಬಿಜೆಪಿನ ಕಿಶೋರ್ ಕುಮಾರ್, ಕಾಂಗ್ರೆಸ್ನ ರಾಜು ಪೂಜಾರಿ, ಎಸ್ಡಿಪಿಐನ ಅನ್ವರ್ ಸಾದತ್, ಮತ್ತು ಪಕ್ಷೇತರ ದಿನಕರ ಉಳ್ಳಾಲ್. ಈ ಕ್ಷೇತ್ರವು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿದ್ದು, ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆ ಮತ್ತು ಶಾಸಕರು ಈ ಕ್ಷೇತ್ರದ ಮತದಾರರಾಗಿದ್ದರು.
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿರುವುದರಿಂದ, ಅವರು ದಕ್ಷಿಣ ಕನ್ನಡದ ಹೊಸ ಪರಿಷತ್ ಸದಸ್ಯರಾಗಿ ಆಯ್ಕೆಯಾದರು.
ಮಂಗಳೂರು: ವಿಧಾನಪರಿಷತ್ ಉಪಚುನಾವಣೆಯ ಮತಗಳ ಎಣಿಕೆ ಇಂದು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದೆ.
ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಮತಗಳ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ನಿಯೋಜಿಸಲಾಗಿದೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ಗೆ 33ರಂತೆ ಹಂಚಿಕೆ ಮಾಡಲಾಗುತ್ತದೆ.
ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುತ್ತದೆ. ಅ.21 ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.
ಉಡುಪಿ : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು ‘ಡಿ’ ಗ್ರೂಪ್ ಸಿಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ಗೆ 33ರಂತೆ ಹಂಚಿಕೆ ಮಾಡಲಾಗುತ್ತದೆ.
ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಅನಂತರ ಒಂದನೇ ಪ್ರಾಶಸ್ತ್ರದ ಮತಗಳ ಎಣಿಕೆ ಮಾಡಲಾಗುತ್ತದೆ.
ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ರದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು. ಅಕ್ಟೋಬರ್ 21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.
ಚೆನ್ನಪಟ್ಟಣ ಕ್ಷೇತ್ರದ ಗೊಂದಲ ಸುಖಾಂತ್ಯ ಆಗಲಿದೆ, ಅಲ್ಲಿ ಎನ್ಡಿಎ ಗೆಲ್ಲುತ್ತೆ – ಸಂಸದ ಕೋಟ
ಉಡುಪಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗೊಂದಲಗಳು ಶೀಘ್ರ ಸುಖಾಂತ್ಯ ಕಾಣಲಿದೆ. ಅಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಕೇಳಿದಾಗ, ಈ ಕ್ಷಣದವರೆಗೆ ಅವರು ನಮ್ಮ ಪಕ್ಷದಲ್ಲೇ ಇದ್ದಾರೆ ಎಂಬ ಮಾಹಿತಿ ಇದೆ. ಆದರೆ ಮುಂದಿನ ಬೆಳವಣಿಗೆ ಗೊತ್ತಿಲ್ಲ. ಅವರು ಈ ಹಿಂದೆ ಬಿಜೆಪಿಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದವರು.ಕುಮಾರಸ್ವಾಮಿ ಅವರು ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಹೀಗಾಗಿ ಸಹಜವಾಗಿಯೇ ಚೆನ್ನಪಟ್ಟಣ ಸೂಕ್ಷ್ಮ ಕ್ಷೇತ್ರ. ಅಲ್ಲಿ ಏನೇ ಗೊಂದಲಗಳಿದ್ದರೂ ನಮ್ಮ ವರಿಷ್ಠರು ಅದಕ್ಕೆ ಪರಿಹಾರ ಸೂಚಿಸಲಿದ್ದಾರೆ. ಆ ಕ್ಷೇತ್ರದಲ್ಲಿ ಎನ್ಡಿಎ ಗೆಲ್ಲಲೇಬೇಕಿದೆ ಎಂದು ಹೇಳಿದ್ದಾರೆ.
ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಗ್ಗೆ 5ರಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದು, ಮೆರವಣಿಗೆ ಅಥವಾ ಸಭೆ/ಸಮಾರಂಭ ಮಾಡುವುದನ್ನು ನಿಷೇಧಿಸಲಾಗಿದೆ.
ಮತ ಎಣಿಕೆ ಕೇಂದ್ರದ ಆವರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗಿದೆ. ಈ ಸಂದರ್ಭ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್ ಮಾಡಲು ಅವಕಾಶ ಇರುವುದಿಲ್ಲ. ಮತ ಎಣಿಕೆ ಕೇಂದ್ರದ 200 ಮೀಟರ್ ಅಂತರದಲ್ಲಿ ಮೊಬೈಲ್ ಪೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರ ಇಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ.
ಚುನಾವಣೆಯ ಮತ ಎಣಿಕೆ ಫಲಿತಾಂಶದ ಸಮಯದಲ್ಲಿ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ. ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಮಾರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಯಾವುದೇ ಕ್ಷಾರಕ ಅಥವಾ ಸ್ಫೋಟ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ.
ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಕ್ಷಿಪಣಿಗಳ ಅಥವಾ ಕ್ಷಿಪಣಿಯಾಗಿ ಉಪಯೋಗಿ ಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಗ್ರಿಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕ ಅಥವಾ ಉದ್ರಿಕ ಕಾರ್ಯ, ಹಾಡುಗಳು, ಕೂಗಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋ ವಧೆ ಮಾಡುವಂತಹ ಚಿತ್ರಗಳು ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಹಾಗೂ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ಆದೇಶವು ಚುನಾವಣಾ ಕಾರ್ಯನಿರತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶದಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದ್ದು, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ನಗರಸಭೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಈ ಕ್ಷೇತ್ರದ 392 ಮತಗಟ್ಟೆಗಳಲ್ಲಿ ಮತದಾನ ನಡೆಯಿತು.
ಕಿಶೋರ್ ಬಿ.ಆರ್. (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದಾತ್ ಎಸ್. (ಎಸ್ಡಿಪಿಐ), ದಿನಕರ ಉಳ್ಳಾಲ (ಪಕ್ಷೇತರ) ಚುನಾವಣಾ ಕಣದಲ್ಲಿದ್ದಾರೆ.
ಅ.24ರಂದು ನಗರದ ಸಂತ ಅಲೋಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಯು ನಡೆಯಲಿದೆ.
ಉಡುಪಿ : ಇಂದು ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ನಡೆಯುತ್ತಿದೆ. ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾದ ಬಳಿಕ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಿಗದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ 328 ಪೊಲೀಸ್ ಅಧಿಕಾರಿಗಳು ಹಾಗೂ ಮತಕಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2480 ಮತದಾರರು ಇದ್ದಾರೆ.
ಬೆಳಿಗ್ಗೆ ಎಂಟರಿಂದ ಸಂಜೆ ನಾಲ್ಕರವರೆಗೆ ಮತದಾನ ನಡೆಯಲಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರು, ಶಾಸಕರು, ಸಂಸದರು ಮತದಾರರಾಗಿದ್ದಾರೆ. ಬೆಳಿಗ್ಗಿನಿಂದಲೇ ಜಿಲ್ಲೆಯಾದ್ಯಂತ ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ಪಂಚಾಯತ್ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕಾಗಿರುವುದು ಇಂದಿನ ಆದ್ಯತೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ : ತಳಮಟ್ಟದ ಗ್ರಾಮೀಣಾಭಿವೃದ್ಧಿ ಗುರಿಸಾಧನೆಗಾಗಿ ಪಂಚಾಯತ್ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕಾಗಿರುವುದು ಇಂದಿನ ಆದ್ಯತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಅನಿವಾರ್ಯ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣೆಯ ಉಸ್ತುವಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ಈ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಅನುಭವಿಯಾಗಿದ್ದು, ಪಕ್ಷದ ಶಿಸ್ತಿನ ಸಿಪಾಯಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.
ಸೋಮವಾರ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ನಮಗೆ ಉತ್ತಮ ಅವಕಾಶಗಳಿವೆ. ರಾಜಕೀಯವಾಗಿಯೂ ಈ ಚುನಾವಣೆ ನಮಗೆ ಮುಖ್ಯವಾಗಿದೆ. ಕಾರ್ಯಕರ್ತರೇ ನಮಗೆ ಸ್ಪೂರ್ತಿ. ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ರಾಜು ಪೂಜಾರಿ ಅವರ ಗೆಲವು ಶತಃಸಿದ್ಧ ಎಂದರು.