Featured posts
ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!
ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಪತಂಜಲಿ ಗುರುಕುಲದ ವಿದ್ಯಾರ್ಥಿಗಳು 8.00 ಗಂಟೆಗಳಲ್ಲಿ ಸಂಪೂರ್ಣ ಭಗವದ್ಗೀತೆಯ ಶ್ಲೋಕಗಳನ್ನು ಬರೆದು ನಿರ್ಮಿಸಿದ್ದ ದಾಖಲೆಗಳನ್ನು ಮೀರಿಸಿ, ಸುಶಾಂತ್ ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯಗಳು ಮತ್ತು 700 ಶ್ಲೋಕಗಳ ಬರಹವನ್ನು ಪೂರ್ಣಗೊಳಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಸ್ವಾಮೀಜಿಯವರ ಆಶೀರ್ವಾದದಿಂದ ಈ ಮಹತ್ವದ ಸಾಧನೆಯನ್ನು ಮಾಡಿ, ಸಾವಿರಾರು ಜನರಿಂದ ಅಭಿನಂದನೆಗೆ ಪಾತ್ರರಾದರು. ಅಲ್ಲದೆ, ಈ ಸಾಧನೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರವಾಗಿದ್ದು, ವಿಶ್ವದಾಖಲೆಯಾಗಿ ಗುರುತಿಸಲ್ಪಟ್ಟಿದೆ.
ಈ ಅಪೂರ್ವ ಸಾಧನೆಗೆ ಸಮಾಜದ ಎಲ್ಲೆಡೆ ಮೆಚ್ಚುಗೆ ದೊರಕಬೇಕೆಂಬ ನಿರೀಕ್ಷೆ ಇದ್ದು, ಭಾರತದ ಪ್ರಥಮ ನಾಗರಿಕರಾದ ಗೌರವಾನ್ವಿತ ರಾಷ್ಟ್ರಪತಿಗಳಿಂದ ಹಾಗೂ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ದಾಮೋದರದಾಸ್ ಮೋದಿ ಅವರಿಂದ ಈ ಮಹಾನ್ ಕಾರ್ಯಕ್ಕೆ ಮಾನ್ಯತೆ ದೊರಕುವ ಆಶಯವಿದೆ. ತಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ಸುಶಾಂತ್ ಅವರ ಈ ಅದ್ಭುತ ಸಾಧನೆಯನ್ನು ಗಮನಿಸಿ, ಅವರು ಹೆಚ್ಚಿನ ಮಟ್ಟದ ಪ್ರೋತ್ಸಾಹ ಮತ್ತು ಅವಕಾಶಗಳನ್ನು ಪಡೆದು, ಪಕ್ಷದ ಕಲ್ಯಾಣಕ್ಕಾಗಿ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗಲಿ ಎಂಬುದು ಎಲ್ಲರ ನಿರೀಕ್ಷೆಯಾಗಿದೆ.