ಉಡುಪಿ : ತೆಂಕನಿಡಿಯೂರು ಸರಕಾರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರೋಶನ್ ಶೆಟ್ಟಿ ಅವರನ್ನು ಜಿಲ್ಲೆಯ ಗೃಹ ರಕ್ಷಕ ದಳ ಗೌರವ ಸಮಾದೇಷ್ಟರನ್ನಾಗಿ ರಾಜ್ಯ ಸರಕಾರ ನೇಮಿಸಿದೆ.
ಇವರು ಜಿಲ್ಲಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ “ಕೃಷಿ ಮೇಳ-2024” ಅನ್ನು ಇದೇ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಧನಂಜಯ ಬಿ. ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅ.26ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಆನಂದ ಸಿ. ಕುಂದರ್ ಕೃಷಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್, ಕೃಷಿ ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ. ಗುರುಮೂರ್ತಿ, ಸಂಶೋಧನಾ ನಿರ್ದೇಶಕ ಡಾ. ಬಿ.ಎಂ. ದುಶ್ಯಂತ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಮೊದಲ ದಿನ ಮಧ್ಯಾಹ್ನ 2 ಗಂಟೆಯಿಂದ ಅಡಿಕೆ ಆಧಾರಿತ ಕೃಷಿ” ಮತ್ತು “ಜೇನು ಕೃಷಿ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಎರಡನೇ ದಿನ ಬೆಳಿಗ್ಗೆ 10ಗಂಟೆಗೆ “ವಿಕಸಿತ ಕೃಷಿಯಲ್ಲಿ ಕೃಷಿ ಮತ್ತು ಪಶು ಸಖಿಯರು” ಮತ್ತು ಮಧ್ಯಾಹ್ನ 2 ಗಂಟೆಗೆ “ಅಡಿಕೆ ಮತ್ತು ಹಲಸಿನಲ್ಲಿ ಮೌಲ್ಯವರ್ಧನೆ” ಎಂಬ ವಿಷಯದ ಕುರಿತ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಕೃಷಿ ಮೇಳದಲ್ಲಿ 200ಕ್ಕೂ ಅಧಿಕ ಮಳಿಗೆಗಳಿದ್ದು, ಅದರಲ್ಲಿ ವಿವಿಧ ಇಲಾಖೆ, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ಅಭಿವೃದ್ಧಿ ಪಡಿಸಿರುವ ಕೃಷಿ ತಂತ್ರಜ್ಞಾನಗಳ ಮತ್ತು ಕೃಷಿ ಪರಿಕರಗಳ ವಸ್ತು ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಪ್ರಧಾನ ಸಂಶೋಧಕ ಡಾ. ಕೆ.ವಿ. ಸುಧೀರ್ ಕಾಮತ್ ಮಾತನಾಡಿ, ಈ ವರ್ಷದ ಕೃಷಿಮೇಳದಲ್ಲಿ ಕೃಷಿಕರಿಗಾಗಿ ನಮ್ಮ ಕೇಂದ್ರದಿಂದ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆ ಮಾಡಲಾಗಿರುವ ಭತ್ತದ ತಳಿಗಳಾದ ಸಹ್ಯಾದ್ರಿ ಬ್ರಹ್ಮ, ಸಹ್ಯಾದ್ರಿ ಪಂಚಮುಖಿ, ಸಹ್ಯಾದ್ರಿ ಸಪ್ತಮಿ, ಕಜೆ 25-9 ಹಾಗೂ ಕೇಂದ್ರದಲ್ಲಿ ಪ್ರಸ್ತುತ ಪ್ರಯೋಗಗಳಲ್ಲಿ ತೊಡಗಿಸಲಾಗಿರುವ ಇತರ ಭತ್ತದ ತಳಿಗಳನ್ನು ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿರುತ್ತದೆ. ಇದೇ ಸಂದರ್ಭದಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದಿಂದ ಬಿಡುಗಡೆ ಮಾಡಿರುವಂತಹ ಕೃಷಿ ಯಂತ್ರೋಪಕರಣಗಳಾದ ಸುಧಾರಿತ ಕೊನೋ ವೀಡರ್, ಛತ್ತದಲ್ಲಿ ಕಳೆ ತೆಗೆಯುವ ಯಂತ್ರ, ಪವರ್ ಟಿಲ್ಲರ್ ಚಾಲಿತ ಮಣ್ಣು ದಬ್ಬುವ ಯಂತ್ರ ಹಾಗೂ ಕಾಡು ಪ್ರಾಣಿಗಳ ಹಾವಳಿ ಕುರಿತು ಮಾಲಿಕರನ್ನು ಎಚ್ಚರಿಸುವ ಸ್ವಯಂ ಚಾಲಿತ ವ್ಯವಸ್ಥೆ ಮುಂತಾದ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯ ಮಾಡಿಕೊಡಲಾಗುವುದು. ಈ ಕೃಷಿಮೇಳದ ವಿಶೇಷ ಆಕರ್ಷಣೆಗಳೆಂದರೆ ಕೃಷಿಯಲ್ಲಿ ಡೋನ್ ಬಳಕೆಯ ಪ್ರಾತ್ಯಕ್ಷಿಕೆ, ಸಿಓ-4, 5 ಮತ್ತು ಸಿಓಎಫ್ಎಸ್.-29, 31 ಹಾಗೂ ಸೂಪರ್ ನೇಪಿಯರ್ ಮೇವಿನ ಬೆಳೆಗಳ ಪ್ರಾತ್ಯಕ್ಷಿಕೆ, ತೆಂಗಿನಲ್ಲಿ ಬಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ, ತೋಟಗಾರಿಕೆ ಬೆಳೆಗಳಲ್ಲಿ ಕಸಿಕಟ್ಟುವಿಕೆ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರಗೊಬ್ಬರ, ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಕೋಳಿ ಮತ್ತು ಬಾತುಕೋಳಿ ಸಾಕಾಣಿಕೆಗಳ ಪ್ರಾತ್ಯಕ್ಷಿಕೆ, ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ, ಜೈವಿಕ ಅನಿಲ ಉತ್ಪಾದನಾ ಘಟಕಗಳು, ಅಲಂಕಾರಿಕೆ ಮತ್ತು ಹೂವಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಆಕರ್ಷಕ ಕೃಷಿ ವಸ್ತು ಪ್ರದರ್ಶನಗಳೂ ಇರುತ್ತವೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಎಂ. ಶಂಕರ್, ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲಕ್ಷಣ್ ಇದ್ದರು.
ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ “ಕೃಷಿ ಮೇಳ-2024” ಅನ್ನು ಇದೇ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಧನಂಜಯ ಬಿ. ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅ.26ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಆನಂದ ಸಿ. ಕುಂದರ್ ಕೃಷಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್, ಕೃಷಿ ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ. ಗುರುಮೂರ್ತಿ, ಸಂಶೋಧನಾ ನಿರ್ದೇಶಕ ಡಾ. ಬಿ.ಎಂ. ದುಶ್ಯಂತ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಮೊದಲ ದಿನ ಮಧ್ಯಾಹ್ನ 2 ಗಂಟೆಯಿಂದ ಅಡಿಕೆ ಆಧಾರಿತ ಕೃಷಿ” ಮತ್ತು “ಜೇನು ಕೃಷಿ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಎರಡನೇ ದಿನ ಬೆಳಿಗ್ಗೆ 10ಗಂಟೆಗೆ “ವಿಕಸಿತ ಕೃಷಿಯಲ್ಲಿ ಕೃಷಿ ಮತ್ತು ಪಶು ಸಖಿಯರು” ಮತ್ತು ಮಧ್ಯಾಹ್ನ 2 ಗಂಟೆಗೆ “ಅಡಿಕೆ ಮತ್ತು ಹಲಸಿನಲ್ಲಿ ಮೌಲ್ಯವರ್ಧನೆ” ಎಂಬ ವಿಷಯದ ಕುರಿತ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಕೃಷಿ ಮೇಳದಲ್ಲಿ 200ಕ್ಕೂ ಅಧಿಕ ಮಳಿಗೆಗಳಿದ್ದು, ಅದರಲ್ಲಿ ವಿವಿಧ ಇಲಾಖೆ, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ಅಭಿವೃದ್ಧಿ ಪಡಿಸಿರುವ ಕೃಷಿ ತಂತ್ರಜ್ಞಾನಗಳ ಮತ್ತು ಕೃಷಿ ಪರಿಕರಗಳ ವಸ್ತು ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಪ್ರಧಾನ ಸಂಶೋಧಕ ಡಾ. ಕೆ.ವಿ. ಸುಧೀರ್ ಕಾಮತ್ ಮಾತನಾಡಿ, ಈ ವರ್ಷದ ಕೃಷಿಮೇಳದಲ್ಲಿ ಕೃಷಿಕರಿಗಾಗಿ ನಮ್ಮ ಕೇಂದ್ರದಿಂದ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆ ಮಾಡಲಾಗಿರುವ ಭತ್ತದ ತಳಿಗಳಾದ ಸಹ್ಯಾದ್ರಿ ಬ್ರಹ್ಮ, ಸಹ್ಯಾದ್ರಿ ಪಂಚಮುಖಿ, ಸಹ್ಯಾದ್ರಿ ಸಪ್ತಮಿ, ಕಜೆ 25-9 ಹಾಗೂ ಕೇಂದ್ರದಲ್ಲಿ ಪ್ರಸ್ತುತ ಪ್ರಯೋಗಗಳಲ್ಲಿ ತೊಡಗಿಸಲಾಗಿರುವ ಇತರ ಭತ್ತದ ತಳಿಗಳನ್ನು ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿರುತ್ತದೆ. ಇದೇ ಸಂದರ್ಭದಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದಿಂದ ಬಿಡುಗಡೆ ಮಾಡಿರುವಂತಹ ಕೃಷಿ ಯಂತ್ರೋಪಕರಣಗಳಾದ ಸುಧಾರಿತ ಕೊನೋ ವೀಡರ್, ಛತ್ತದಲ್ಲಿ ಕಳೆ ತೆಗೆಯುವ ಯಂತ್ರ, ಪವರ್ ಟಿಲ್ಲರ್ ಚಾಲಿತ ಮಣ್ಣು ದಬ್ಬುವ ಯಂತ್ರ ಹಾಗೂ ಕಾಡು ಪ್ರಾಣಿಗಳ ಹಾವಳಿ ಕುರಿತು ಮಾಲಿಕರನ್ನು ಎಚ್ಚರಿಸುವ ಸ್ವಯಂ ಚಾಲಿತ ವ್ಯವಸ್ಥೆ ಮುಂತಾದ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯ ಮಾಡಿಕೊಡಲಾಗುವುದು. ಈ ಕೃಷಿಮೇಳದ ವಿಶೇಷ ಆಕರ್ಷಣೆಗಳೆಂದರೆ ಕೃಷಿಯಲ್ಲಿ ಡೋನ್ ಬಳಕೆಯ ಪ್ರಾತ್ಯಕ್ಷಿಕೆ, ಸಿಓ-4, 5 ಮತ್ತು ಸಿಓಎಫ್ಎಸ್.-29, 31 ಹಾಗೂ ಸೂಪರ್ ನೇಪಿಯರ್ ಮೇವಿನ ಬೆಳೆಗಳ ಪ್ರಾತ್ಯಕ್ಷಿಕೆ, ತೆಂಗಿನಲ್ಲಿ ಬಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ, ತೋಟಗಾರಿಕೆ ಬೆಳೆಗಳಲ್ಲಿ ಕಸಿಕಟ್ಟುವಿಕೆ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರಗೊಬ್ಬರ, ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಕೋಳಿ ಮತ್ತು ಬಾತುಕೋಳಿ ಸಾಕಾಣಿಕೆಗಳ ಪ್ರಾತ್ಯಕ್ಷಿಕೆ, ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ, ಜೈವಿಕ ಅನಿಲ ಉತ್ಪಾದನಾ ಘಟಕಗಳು, ಅಲಂಕಾರಿಕೆ ಮತ್ತು ಹೂವಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಆಕರ್ಷಕ ಕೃಷಿ ವಸ್ತು ಪ್ರದರ್ಶನಗಳೂ ಇರುತ್ತವೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಎಂ. ಶಂಕರ್, ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲಕ್ಷಣ್ ಇದ್ದರು.
ಕಾರ್ಕಳ : ತೀವ್ರವಾದ ಅನಾರೋಗ್ಯದಿಂದ ಬಳಲುತ್ತಿರುವ ಬಾಲಕಿಯ ಮನೆಗೆ ಹೋಗಿ ಆಧಾರ್ ಅಪ್ಡೇಟ್ ಮಾಡಿಕೊಟ್ಟು ಕಾರ್ಕಳ ಅಂಚೆ ಇಲಾಖೆ ಸಿಬ್ಬಂದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮರ್ಣೆ ಗ್ರಾಮದ ಎಣ್ಣೆಹೊಳೆಯ ಡೊಂಬರಪಲ್ಕೆ ನಿವಾಸಿ ದಿನೇಶ್ ಮತ್ತು ಉಷಾ ದಂಪತಿಯ 10 ವರ್ಷದ ಪುತ್ರಿ ತೃಷಾ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ತಾಯಿಯೂ ತೀವ್ರವಾದ ಕಾಯಿಲೆಯಿಂದ ಬಳಲುತ್ತಿದ್ದು, ತೀರಾ ಬಡ ಕುಟುಂಬದವರಾದ ಇವರ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮತ್ತು ವಿಳಾಸ ತಿದ್ದುಪಡಿ ಮಾಡಬೇಕಾಗಿತ್ತು.
ಚಿಕಿತ್ಸೆಗೆ ಅಗತ್ಯವಿದ್ದ ಕೆಲವು ಸೌಲಭ್ಯಗಳನ್ನು ಪಡೆದುಕೊಳ್ಳಲು ಈ ಕುಟುಂಬಕ್ಕೆ ಆಧಾರ್ ಅನಿವಾರ್ಯವಾಗಿತ್ತು. ಆದರೆ ಆಧಾರ್ ಅಪ್ಡೇಟ್ಗಾಗಿ ಅಂಚೆ ಕಚೇರಿಗೆ ಮಗಳನ್ನು ಕರೆದುಕೊಂಡು ಬರುವ ಸ್ಥಿತಿಯಲ್ಲಿ ದಿನೇಶ್ ಅವರು ಇರಲಿಲ್ಲ. ಈ ವಿಚಾರವನ್ನು ಕಾರ್ಕಳ ಪ್ರಧಾನ ಅಂಚೆ ಕಚೇರಿಗೆ ತಿಳಿಸಿ ಮನೆಗೆ ಹೋಗಿ ಆಧಾರ್ ಅಪ್ಡೇಟ್ ಮಾಡಿಸಿಕೊಡಲು ಮನವಿ ಮಾಡಿದ್ದರು.
ಇವರ ಮನವಿಗೆ ಸ್ಪಂದಿಸಿ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ತಂಡ ಕಂಪ್ಯೂಟರ್ ಸಿಸ್ಟಮ್ ಮತ್ತಿತರ ಪರಿಕರಗಳ ಸಮೇತ ದುರ್ಗಮ ಪ್ರದೇಶದಲ್ಲಿದ್ದ ದಿನೇಶ್ ಅವರ ಮನೆಗೆ ಹೋಗಿ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮತ್ತು ವಿಳಾಸ ತಿದ್ದುಪಡಿಯನ್ನು ಮಾಡಿಕೊಟ್ಟಿದೆ. ಈ ಕುಟುಂಬ ಅಂಚೆ ಇಲಾಖೆಯ ಕ್ಷಿಪ್ರ ಸ್ಪಂದನೆಗೆ ಧನ್ಯವಾದ ಹೇಳಿದೆ.
ಸಂಸದ ಕೋಟ ಮೆಚ್ಚುಗೆ :
ಕಾರ್ಕಳ ಪ್ರಧಾನ ಅಂಚೆ ಕಚೇರಿಯ ಸಿಬ್ಬಂದಿಯ ಕಾಳಜಿಯುತ ಸೇವೆಗೆ ಮೆಚ್ಚುಗೆ ಸೂಚಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸರಕಾರಿ ಕೆಲಸ ಜನರ ಸೇವೆ ನೀಡಲು ಸಿಕ್ಕಿದ ಅವಕಾಶ ಎಂದು ಅರಿತು ಕಾರ್ಕಳ ಅಂಚೆ ಸಿಬ್ಬಂದಿ ಕೆಲಸ ಮಾಡಿಕೊಟ್ಟಿದ್ದಾರೆ. ಇದಕ್ಕೆ ಭಗವಂತನ ಅನುಗ್ರಹ ಮತ್ತು ಜನರ ಆಶೀರ್ವಾದ ಇರುತ್ತದೆ. ಸ್ವತಹ ಆಸಕ್ತಿ ವಹಿಸಿ ಬಡ ಕುಟಂಬದ ಆಧಾರ್ ಅಪ್ಡೇಟ್ ಮಾಡಿಕೊಟ್ಟ ಅಂಚೆ ಸಿಬ್ಬಂದಿಗೆ ಅಭಿನಂದನೆಗಳು ಎಂದು ಎಂದು ಬರೆದಿದ್ದಾರೆ.
ಉಡುಪಿ : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಅವರ ಹೋರಾಟದ ಮನೋಭಾವ, ಆತ್ಮವಿಶ್ವಾಸ, ಶೌರ್ಯ, ಪರಾಕ್ರಮಗಳ ವ್ಯಕ್ತಿತ್ವ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ, 200 ವರ್ಷ ಪೂರೈಸಿರುವ ಹಿನ್ನೆಲೆ, ರಾಜ್ಯ ಸರ್ಕಾರವು ಕಿತ್ತೂರು ಉತ್ಸವ -2024 ರ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಆಯೋಜಿಸಿದ್ದು, ರಥವು ರಾಜ್ಯದಾದ್ಯಂತ ಸಂಚರಿಸುವ ಮೂಲಕ ರಾಣಿ ಚೆನ್ನಮ್ಮರ ಸಂದೇಶ, ಸಾಹಸಗಾಥೆಯ ಬಗ್ಗೆ ಸಮಾಜಕ್ಕೆ ತಿಳಿಸುವ ಮೂಲಕ ಅರಿವು ಮೂಡಿಸಲಾಗಿದೆ ಎಂದರು.
ಮಹಿಳೆ ಮನಸ್ಸು ಮಾಡಿದರೇ ಯಾವ ಸಾಧನೆಯನ್ನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಸೂಕ್ತ ನಿದರ್ಶನ ಕಿತ್ತೂರು ರಾಣಿ ಚೆನ್ನಮ್ಮ. ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಜೀವನ ನಡೆಸಿದ ಚೆನ್ನಮ್ಮರ ಆದರ್ಶಗಳನ್ನು ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅದನ್ನು ಪಾಲಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ರಾಣಿ ಚೆನ್ನಮ್ಮರ ದಿಟ್ಟತನ ಹಾಗೂ ಸ್ವಾಭಿಮಾನದ ಪ್ರತೀಕವಾದ ಜೀವನಶೈಲಿಯನ್ನು ಮಹಿಳೆಯರು ಸ್ಪೂರ್ತಿಯಾಗಿರಿಸಿಕೊಂಡು, ಆಧುನಿಕ ಸಮಾಜದಲ್ಲಿ ಪ್ರತಿನಿತ್ಯ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಬಾಲ್ಯದಿಂದಲೇ ಧೀರ ಮಹಿಳೆಯಾಗಿ ರೂಪುಗೊಂಡಿದ್ದ ಇವರು ಪುರುಷರಿಗೆ ಸರಿಸಮಾನವಾದ ಕತ್ತಿವರಸೆ, ಕುದುರೆ ಸವಾರಿ ಮುಂತಾದ ಕೌಶಲ್ಯಗಳನ್ನು ಮೈಗೂಡಿಸಿಕೊಂಡಿದ್ದರು. ಚೆನ್ನಮ್ಮಳು ತನ್ನ ಸಂಸ್ಥಾನ ಹಾಗೂ ಸ್ವಾತಂತ್ರ್ಯ ಉಳಿಸಿಕೊಳ್ಳಲು ನಡೆಸಿದ ಹೋರಾಟ, ತ್ಯಾಗ ಇಂದಿಗೂ ಜನಮಾನಸದಲ್ಲಿ ಅಚ್ಛಳಿಯದೇ ಉಳಿದಿದೆ ಎಂದರು. ರಾಣಿ ಚೆನ್ನಮ್ಮನವರ ಪರಾಕ್ರಮ, ಕೆಚ್ಚದೆಯ ಯುದ್ಧಕಲೆ ಹಾಗೂ ಜೀವಿತ ಕಾಲದುದ್ದಕ್ಕೂ ಹಂಗಿನ ಜೀವನಕ್ಕೆ ಆಸೆ ಪಡದೆ ಜೀವನ ನಡೆಸಿದ ರೀತಿ ಸದಾ ಸ್ಮರಣೀಯ. ಸ್ವಾತಂತ್ರö್ಯ ಹೋರಾಟದಲ್ಲಿ ಮುಖ್ಯ ವಾಹಿನಿಯಲ್ಲಿ ನಿಂತು ಬ್ರಿಟಿಷರ ವಿರುದ್ಧ ನಿರ್ಭೀತಿಯಿಂದ ಹೋರಾಡಿದ ಚೆನ್ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಕ.ಸಾ.ಪ ದ ಮನೋಹರ್ ಹಾಗೂ ನರಸಿಂಹಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಪ್ರಭಾಕರ ಪೂಜಾರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿದರೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಸಿದ್ದಬಸಯ್ಯ ಸ್ಯಾಮಿ ಚಿಕ್ಕಮಠ ವಂದಿಸಿದರು.
ಬಡ ಮತ್ತು ಮಧ್ಯಮ ವರ್ಗದ ಜನತೆಯನ್ನು ಗ್ಯಾರಂಟಿಗಳ ಜಾಲಕ್ಕೆ ಸಿಲುಕಿಸಿ ವಾಮ ಮಾರ್ಗದಿಂದ ಅಧಿಕಾರಕ್ಕೇರಿದ ಕಾಂಗ್ರೆಸ್ ಇದೀಗ ಜನತೆಯನ್ನು ವಂಚಿಸಿ ಲಕ್ಷಾಂತರ ಬಿಪಿಎಲ್ ಕಾರ್ಡ್ಗಳ ರದ್ದತಿಗೆ ತೀರ್ಮಾನ ಕೈಗೊಂಡಿರುವುದು ರಾಜ್ಯ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಸುಮಾರು 30ರಿಂದ 40 ಸಾವಿರ ಕುಟುಂಬಗಳು ಸೇರಿದಂತೆ ರಾಜ್ಯಾದ್ಯಂತ ಸುಮಾರು 12 ಲಕ್ಷ ಕುಟುಂಬಗಳ ಮೇಲೆ ಬಿಪಿಎಲ್ ಕಾರ್ಡ್ ರದ್ಧತಿಯ ಕರಿ ನೆರಳು ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಪ್ರಕ್ರಿಯೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅನ್ನ ಯೋಜನೆಯಡಿ ಪ್ರತೀ ಕುಟುಂಬಕ್ಕೆ ವಿತರಿಸುತ್ತಿರುವ 5 ಕೆಜಿ ಅಕ್ಕಿ ಹಾಗೂ ಇತರ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಪಡೆಯದಂತೆ ರಾಜ್ಯ ಸರಕಾರ ತಡೆಯೊಡ್ದಲು ನಡೆಸುತ್ತಿರುವ ಹುನ್ನಾರದಂತಿದೆ.
ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಗ್ಯಾರಂಟಿಗಳನ್ನೂ ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಫಲವಾಗಿ, ನಿಷ್ಕ್ರಿಯವಾಗಿರುವ ಸರಕಾರ ಕೇವಲ ಹಗರಣಗಳ ಗೋಜಲಿನಲ್ಲಿ ಮುಳುಗಿರುವುದು ಶೋಚನೀಯ.
ಮುಡಾ ಹಗರಣದ ತನಿಖೆಯಿಂದ ತೀವ್ರ ಮುಖಭಂಗ ಅನುಭವಿಸುತ್ತಿರುವ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಲು ವಿವಿಧ ರೀತಿಯ ಕಸರತ್ತುಗಳನ್ನು ನಡೆಸುತ್ತಿರುವುದು ಜಗಜ್ಜಾಹೀರಾಗಿದೆ. ಈ ಸರಕಾರ ಸಂಪೂರ್ಣವಾಗಿ ಜನತೆಯ ವಿಶ್ವಾಸವನ್ನು ಕಳೆದುಕೊಂಡಿದೆ.
ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಸಹಿತ ವಿವಿಧ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿದ್ದರಾಮಯ್ಯ ಸಂಪುಟದ ಸದಸ್ಯರುಗಳ ಹೆಸರು ಮುನ್ನೆಲೆಗೆ ಬರುತ್ತಿದ್ದು, ಜನರ ತೆರಿಗೆ ಹಣದ ದುರ್ಬಳಕೆ ಮತ್ತು ದುರಾಡಳಿತದಿಂದ ರಾಜ್ಯದ ಬೊಕ್ಕಸವನ್ನು ಬರಿದಾಗಿಸಿರುವ ಕಾಂಗ್ರೆಸ್ ಸರಕಾರಕ್ಕೆ ನಾಡಿನ ಜನತೆ ಹಿಡಿಶಾಪ ಹಾಕುತ್ತಿರುವುದು ವಾಸ್ತವ.
ಈ ಹಿನ್ನೆಲೆಯಲ್ಲಿ ಹಣವಿಲ್ಲದೇ ಪರದಾಡುತ್ತಿರುವ ರಾಜ್ಯ ಸರಕಾರ, ತನ್ನ ಹುಳುಕನ್ನು ಮುಚ್ಚಿಡಲು ಅಮಾಯಕ ಜನತೆಯನ್ನು ಬಲಿಪಶು ಮಾಡುವುದು ನ್ಯಾಯ ಸಮ್ಮತವಲ್ಲ. ಸರಕಾರ ತಕ್ಷಣ ಬಿಪಿಎಲ್ ಕಾರ್ಡ್ ರದ್ದತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಯಥಾ ಸ್ಥಿತಿಯನ್ನು ಕಾಯ್ದುಕೊಳ್ಳಬೇಕು. ತಪ್ಪಿದಲ್ಲಿ ನೊಂದ ಬಿಪಿಎಲ್ ಪಡಿತರ ಚೀಟಿದಾರರ ಪರ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಮಂಗಳೂರು ವಿವಿಯ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ಸಂಸದ ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿ, ಸರ್ಕಾರ ತಕ್ಷಣ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ.
ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ವಿಭಾಗದ 2024-25ನೇ ಸಾಲಿನ ಪ್ರವೇಶ ಶುಲ್ಕವನ್ನು 22,410ರೂ. ಏರಿಸುವ ಮೂಲಕ ತುಳು ಭಾಷೆ ಅಧ್ಯಯನ ಮಾಡಬಯಸುವವರಿಗೆ ಆರ್ಥಿಕ ಹೊರೆ ಹೊರಿಸಲಾಗಿದೆ. ಆರಂಭದಲ್ಲಿ ತುಳು ಎಂಎ ಕೋರ್ಸ್ಗೆ 15 ಸಾವಿರ ರೂ. ಪ್ರವೇಶ ಶುಲ್ಕವಿತ್ತು. ಇದೀಗ 3ವರ್ಷದ ಬಳಿಕ 22,410 ರೂ.ಗೆ ಶುಲ್ಕ ಏರಿಕೆ ಮಾಡಿರುವುದರಿಂದ ತುಳು ಎಂಎ ಅಧ್ಯಯನಕ್ಕೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ತುಳು ಎಂಎ ವಿಭಾಗಕ್ಕೆ ಕನಿಷ್ಠ 15ವಿದ್ಯಾರ್ಥಿಗಳು ಪ್ರವೇಶ ಪಡೆದರೆ ಮಾತ್ರ ವಿವಿಯು ತುಳು ಸ್ನಾತಕೋತ್ತರ ವಿಭಾಗವನ್ನು ಮುಂದುವರಿಸುವುದಕ್ಕೆ ಸಾಧ್ಯ. ಇಂಥಹ ಪರಿಸ್ಥಿತಿಯಲ್ಲಿ ಶುಲ್ಕ ಏರಿಕೆ ಮಾಡಿದರೆ ತುಳು ಎಂಎ ಅಧ್ಯಯನಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಕುಸಿಯುವ ಆತಂಕವಿದೆ. ಆದ್ದರಿಂದ, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿಗಳು ಯಶಸ್ವಿಯಾಗಿ ಮುಂದುವರಿಯಬೇಕಾದರೆ, ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕವನ್ನು ಈ ಮೊದಲಿನಂತೆ ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಚಿವ ಡಾ.ಎಂ.ಸಿ ಸುಧಾಕರ್ ಅವರಿಗೆ ಬರೆದಿರುವ ಪತ್ರದಲ್ಲಿ ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.
ವಿವಿ ಕುಲಪತಿ ಪ್ರೊ. ಧರ್ಮ ಅವರಿಗೂ ಮನವಿ
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರೂ ತುಳು ಎಂಎ ಅಧ್ಯಯನ ಕೋರ್ಸ್ನ ಪ್ರವೇಶ ಶುಲ್ಕ ಕಡಿತಗೊಳಿಸುವುದಕ್ಕೆ ಸಂಬಂಧಪಟ್ಟ ಇಲಾಖೆ ಮೂಲಕ ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳನ್ನು ನಡೆಸಬೇಕು. ಈ ಮೂಲಕ, ತುಳು ಭಾಷೆ ಅಧ್ಯಯನಕ್ಕೆ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುದರೊಂದಿಗೆ ತುಳುಭಾಷೆಯ ಪ್ರೋತ್ಸಾಹಕ್ಕೆ ಕೈಜೋಡಿಸಬೇಕೆಂದು ಸಂಸದ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ.
ಉಡುಪಿ : ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲು ಬಾಯಿ ಜ್ವರ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮನವಿ ಮಾಡಿದ್ದಾರೆ.
ಬ್ರಹ್ಮಾವರ ಸಮೀಪದ ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕಾಲುಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅ.21ರಿಂದ ನ20ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಉಡುಪಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗೊಂದಲಗಳು ಶೀಘ್ರ ಸುಖಾಂತ್ಯ ಕಾಣಲಿದೆ. ಅಲ್ಲಿ ಎನ್ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಕೇಳಿದಾಗ, ಈ ಕ್ಷಣದವರೆಗೆ ಅವರು ನಮ್ಮ ಪಕ್ಷದಲ್ಲೇ ಇದ್ದಾರೆ ಎಂಬ ಮಾಹಿತಿ ಇದೆ. ಆದರೆ ಮುಂದಿನ ಬೆಳವಣಿಗೆ ಗೊತ್ತಿಲ್ಲ. ಅವರು ಈ ಹಿಂದೆ ಬಿಜೆಪಿಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದವರು.ಕುಮಾರಸ್ವಾಮಿ ಅವರು ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಹೀಗಾಗಿ ಸಹಜವಾಗಿಯೇ ಚೆನ್ನಪಟ್ಟಣ ಸೂಕ್ಷ್ಮ ಕ್ಷೇತ್ರ. ಅಲ್ಲಿ ಏನೇ ಗೊಂದಲಗಳಿದ್ದರೂ ನಮ್ಮ ವರಿಷ್ಠರು ಅದಕ್ಕೆ ಪರಿಹಾರ ಸೂಚಿಸಲಿದ್ದಾರೆ. ಆ ಕ್ಷೇತ್ರದಲ್ಲಿ ಎನ್ಡಿಎ ಗೆಲ್ಲಲೇಬೇಕಿದೆ ಎಂದು ಹೇಳಿದ್ದಾರೆ.
ಮಂಗಳೂರು : ಡ್ರಗ್ಸ್ ದಂಧೆಗೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಎಂಎಲ್ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಿದ್ದರೂ ಅವರು ಜಾಮೀನು ಪಡೆದು ಹೊರಗೆ ಬಂದು ಮತ್ತೆ ಅದೇ ಕೆಲಸ ಮಾಡುತ್ತಾರೆ. ಡ್ರಗ್ಸ್ ದಂಧೆಗೆ ಬಹಳ ಸಣ್ಣ ಕೇಸ್ಗಳು ಇರುವುದರಿಂದ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಪೊಲೀಸರು ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಜಾರಿಯಾಗಬೇಕಾದರೆ ಕಾನೂನಿನಲ್ಲಿ ತಿದ್ದುಪಡಿ ಮಾಡಿದ್ದಲ್ಲಿ ಮಾತ್ರ ಸಾಧ್ಯ ಎಂದು ಹೇಳಿದರು.
ಅವಿಭಜಿತ ದ.ಕ.ಜಿಲ್ಲೆಯಲ್ಲಿನ ಡ್ರಗ್ಸ್ ದಂಧೆಗೆ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಗೃಹಮಂತ್ರಿ, ಐಜಿ, ಪೊಲೀಸ್ ಕಮಿಷನರ್ಗೆ ಪತ್ರ ಬರೆದಿದ್ದೆ. ಡ್ರಗ್ಸ್ ದಂಧೆಯ ಕರಾಳತೆ ಎಷ್ಟರಮಟ್ಟಿಗೆ ಹೋಗಿದೆ ಎಂದರೆ ಇಲ್ಲಿನ ಕಾಲೇಜುಗಳಲ್ಲಿ ಅಡ್ಮಿಷನ್ ಸಂಖ್ಯೆ ಕುಂಠಿತಗೊಳ್ಳುತ್ತಿದೆ. ಡ್ರಗ್ಸ್ ದಂಧೆಯನ್ನು ಡಿಜಿಯವರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಮಂಗಳೂರು-ಕೇರಳ ನಡುವಿನ ರೈಲು ಮಾರ್ಗದ ಹಳಿಗಳ ಮೇಲೆ ತೊಕ್ಕೊಟ್ಟು ಬಳಿ ಆಗಂತುಕರು ಹಲವು ಕಲ್ಲುಗಳನ್ನಿಟ್ಟು ರೈಲು ಬೀಳಿಸಲು ನಡೆಸಿರುವ ಷಡ್ಯಂತ್ರವು ತೀವ್ರ ಕಳವಳಕಾರಿಯಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ರವರು ಆಗ್ರಹಿಸಿದರು.
ಹಳಿಗಳ ಮೇಲಿಟ್ಟಿದ್ದ ಕಲ್ಲುಗಳ ಮೇಲೆಯೇ ರೈಲು ಸಾಗಿದ ರಭಸಕ್ಕೆ ದೊಡ್ಡ ಪ್ರಮಾಣದ ಕಂಪನವುಂಟಾಗಿ ಸ್ಥಳೀಯ ನಿವಾಸಿಗಳಿಗೆ ರೈಲು ಬಿದ್ದ ಅನುಭವವಾಗಿದೆ. ಕೂಡಲೇ ಪರಿಶೀಲನೆ ಮಾಡಿದಾಗ ಹಳಿಯ ಮೇಲೆ ಸುರಿದಿದ್ದ ಹಲವು ಕಲ್ಲುಗಳು ಪುಡಿ ಪುಡಿಯಾಗಿ ಬಿದ್ದಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಒಂದಷ್ಟು ತಿಂಗಳುಗಳ ಹಿಂದೆ ಪಕ್ಕದ ಕಾಸರಗೋಡಿನ ಅಲ್ಲಲ್ಲಿ, ಹಳಿ ಮೇಲೆ ಕಲ್ಲು, ಕಬ್ಬಿಣದ ಸರಳು, ಕಾಂಕ್ರೀಟ್ ತುಂಡುಗಳನ್ನಿರಿಸಿ ರೈಲು ಹಳಿ ತಪ್ಪಿಸುವ ವಿಧ್ವಂಸಕ ಕೃತ್ಯ ನಡೆಸಲಾಗಿತ್ತು. ಇದೀಗ ಮಂಗಳೂರಿನಲ್ಲೂ ಇಂತಹ ದುಷ್ಕೃತ್ಯ ಆರಂಭವಾಗಿದ್ದು ಸ್ಥಳೀಯವಾಗಿ ಆತಂಕಕಾರಿ ವಾತಾವರಣ ಸೃಷ್ಟಿಯಾಗಿದೆ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.
ಇತ್ತೀಚಿಗಷ್ಟೇ ಪಾಕ್ ಪ್ರೇರಿತ ಉಗ್ರ ಸಂಘಟನೆಗಳು ಭಾರತದಾದ್ಯಂತ ರೈಲುಗಳನ್ನು ಹಳಿ ತಪ್ಪಿಸುವ ಬೆದರಿಕೆ ಹಾಕಿರುವುದು, ದೇಶದ ಹಲವಡೆ ರೈಲು ಹಳಿ ತಪ್ಪಿಸುವ ಯತ್ನಗಳು ನಡೆದಿರುವುದು, ರಾಜ್ಯದ ಅಲ್ಲಲ್ಲಿ ಉಗ್ರರ ಸ್ಲೀಪರ್ ಸೆಲ್ಗಳು ಕಾರ್ಯಾಚರಣೆ ನಡೆಸುತ್ತಿರುವುದು, ಅದಕ್ಕೆ ಪೂರಕವಾಗಿ ಕರಾವಳಿ ಹಾಗೂ ರಾಜ್ಯದಲ್ಲಿ ಪಾಕ್-ಬಾಂಗ್ಲಾ ಅಕ್ರಮ ನುಸುಳುಕೋರರು ಸಿಕ್ಕಿ ಬಿದ್ದಿರುವುದು ಎಲ್ಲವೂ ಒಂದಕ್ಕೊಂದು ತಾಳೆಯಾಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಇದನ್ನೂ ಸಹ ತನ್ನ ಎಂದಿನ ಶೈಲಿಯಲ್ಲಿ “ಇದು ಯಾರೋ ತಮಾಷೆಗೆ ಮಾಡಿದ್ದು, ಇದೊಂದು ಸಣ್ಣ ಘಟನೆ”, ಎಂದೆಲ್ಲ ಹಗುರವಾಗಿ ತೆಗೆದುಕೊಳ್ಳದೇ ಎಲ್ಲಾ ಆಯಾಮಗಳಲ್ಲೂ ಗಂಭೀರವಾಗಿ ತನಿಖೆ ನಡೆಸಿ ವಿಧ್ವಂಸಕ ಕೃತ್ಯಕ್ಕೆ ಯತ್ನಿಸಿದವರ ಹೆಡೆಮುರಿ ಕಟ್ಟಬೇಕೆಂದು ಶಾಸಕರು ಆಗ್ರಹಿಸಿದರು.
Maax News covers major news and events of Udupi district. This channel provides detailed reports on the political, social, economic, and cultural life of Udupi district.
Maax News, equipped with the most sophisticated studio in Udupi, assures people comprehensive news coverage.