Police

ಮತಾಂಧ ಶಕ್ತಿಗಳ ಓಲೈಕೆಗಾಗಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ಕಾಂಗ್ರೆಸ್ ಸರಕಾರ : ಯಶ್‌ಪಾಲ್ ಸುವರ್ಣ

ಉಡುಪಿ : ಲೋಕಸಭೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್ ಗಾಂಧಿ ಹೇಳಿಕೆಯನ್ನು ಪ್ರತಿಭಟನೆಯಲ್ಲಿ ಖಂಡಿಸಿದ ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ…

Read more

ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ – ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್‌

ಮಂಗಳೂರು: ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಮೇಲೆ ಕಾವೂರು ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ…

Read more

ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಮಣಿಪಾಲ : ಇಲ್ಲಿಗೆ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು. ತಂದೆ ಕೆ.ಎಸ್‌. ಮಹೇಶ್‌ ಅವರಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಚಿಕಿತ್ಸೆ ನಡೆಯುತ್ತಿತ್ತು.…

Read more

ಮಹಜರು ವೇಳೆ ಚಡ್ಡಿಗ್ಯಾಂಗ್ ಆರೋಪಿಗಳು ಪರಾರಿಗೆ ಯತ್ನ – ಇಬ್ಬರಿಗೆ ಗುಂಡೇಟು

ಮಂಗಳೂರು : ಸ್ಥಳ ಮಹಜರು ನಡೆಸಲು ಚಡ್ಡಿಗ್ಯಾಂಗ್‌ನ ಆರೋಪಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಪರಾರಿಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿರುವ ಘಟನೆ ನಗರದ ಮುಲ್ಕಿ ಸಮೀಪದ ಪಡು ಪಣಂಬೂರು ಬಳಿ ನಡೆದಿದೆ. ಮಂಗಳವಾರ ನಸುಕಿನ ವೇಳೆ ಚಡ್ಡಿಗ್ಯಾಂಗ್‌ನ ನಾಲ್ವರಿದ್ದ ತಂಡ ಮಂಗಳೂರಿನ…

Read more

ವೃದ್ಧದಂಪತಿಯ ಹಲ್ಲೆಗೈದು ದರೋಡೆ – ಘಟನೆ ನಡೆದು 5ಗಂಟೆಯೊಳಗೆ ಚಡ್ಡಿಗ್ಯಾಂಗ್‌ನ ನಾಲ್ವರು ಅಂದರ್

ಮಂಗಳೂರು : ನಗರದ ಕೋಟೆಕಣಿಯ ಮನೆಯೊಂದಕ್ಕೆ ಕಿಟಕಿ ಸರಳು ಕತ್ತರಿಸಿ ನುಗ್ಗಿ ವೃದ್ಧದಂಪತಿಯನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಕಾರು, ಚಿನ್ನಾಭರಣ ದರೋಡೆಗೈದು ಪರಾರಿಯಾಗಿದ್ದ ಚಡ್ಡಿಗ್ಯಾಂಗ್‌ ಅನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿ ಕಂಬಿ ಹಿಂದೆ ಕಳುಹಿಸಿದೆ. ಮಧ್ಯಪ್ರದೇಶ ರಾಜ್ಯ ಮೂಲದ…

Read more

ಕದ್ರಿ ದೇವಸ್ಥಾನದಲ್ಲಿ ದಾಂಧಲೆ ನಡೆಸಿದ ಯುವಕ – ಅಣ್ಣಪ್ಪ ದೈವದ ಕಡ್ತಲೆ ಹಿಡಿದು ಹುಚ್ಚಾಟ

ಮಂಗಳೂರು : ನಗರದ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀಮಂಜುನಾಥ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಯುವಕನೋರ್ವನು ದಾಂಧಲೆ ನಡೆಸಿದ್ದಲ್ಲದೆ, ಅಣ್ಣಪ್ಪ ದೈವದ ಕಡ್ತಲೆ ಹಿಡಿದು ಹುಚ್ಚಾಟ ನಡೆಸಿದ್ದಾನೆ. ಮೊದಲಿಗೆ ಈತ ಬೈಕ್ ಚಲಾಯಿಸಿಕೊಂಡು ನೇರವಾಗಿ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದಾನೆ. ಬಳಿಕ ದೇವಸ್ಥಾನದೊಳಗೆ…

Read more

ಕರಾವಳಿಯಲ್ಲಿ ‘ಚಡ್ಡಿಗ್ಯಾಂಗ್’ ಕಳ್ಳರ ತಂಡ ಸಕ್ರಿಯ – ಸಾರ್ವಜನಿಕರೇ ಎಚ್ಚರ..!

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ‘ಚಡ್ಡಿ ಗ್ಯಾಂಗ್’ ಎಂಬ ಹೈದರಾಬಾದ್, ಮಧ್ಯಪ್ರದೇಶ, ರಾಜಸ್ಥಾನ ಮೂಲದ ಕಳ್ಳರ ತಂಡವೊಂದು ಸಕ್ರಿಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರವಾಗಿರಬೇಕೆಂದು ಪೊಲೀಸ್ ಇಲಾಖೆ ತಿಳಿಸಿದೆ. ಶನಿವಾರ ರಾತ್ರಿ ಮಂಗಳೂರಿನ ಕೋಡಿಕಲ್‌ನಲ್ಲಿ ನಡೆದ ಮನೆಯೊಂದಕ್ಕೆ…

Read more

ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದು ತಂದೆ ಆತ್ಮಹತ್ಯೆಗೆ ಶರಣು!

ಉದ್ಯಾವರ : ವೈಯುಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ/ಮಾಲಕ ಮಹೇಶ್ ಪಾಲನ್ (35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಇಂದು ಬೆಳಿಗ್ಗೆ…

Read more

ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾ| ಕುಮಾರಧಾರಾ ನದಿಯಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ ಮಾಡಲಾಗಿದೆ. ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಎಂಬ ವ್ಯಕ್ತಿ ತುಂಬಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ ಇಳಿದಿದ್ದರು, ಈ…

Read more

ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ಬೈಕ್ ನಡುವಿನ ಅಪಘಾತಕ್ಕೆ ಸವಾರ ಬಲಿ

ಬಂಟ್ವಾಳ : ರಾ.ಹೆ.75ರ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರವಿವಾರ ನಡೆದಿದೆ. ದ್ವಿಚಕ್ರ ವಾಹನ ಸವಾರ ಬೆಂಜನಪದವು ನಿವಾಸಿ ನಯನ್ ಕುಮಾರ್ ಮೃತಪಟ್ಟ ದುರ್ಧೈವಿ. ಕಡೆಗೋಳಿ ಭಾಗದಿಂದ…

Read more