Problems

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಕೋಟ ಸಭೆ

ಉಡುಪಿ : ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು,…

Read more

ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಭೂಕುಸಿತಕ್ಕೆ ಧರಾಶಾಹಿಯಾದ ಮನೆಯ ಬಾವಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪದ ಒಂದು ಮನೆಯ ಬಾವಿ ಕುಸಿದ್ದಿದ್ದು, ಬಾವಿ ಕುಸಿಯುವ ವಿಡಿಯೋ ಇದೀಗ ವೈರಲ್‌ಗೊಂಡಿದೆ. ಸ್ಥಳೀಯ ನಿವಾಸಿ ವಸಂತಿ ಶೆಟ್ಟಿ ಎಂಬುವರಿಗೆ…

Read more

ಅಪಾಯದಲ್ಲಿರುವ ಮನೆಗಳು : ನಿವಾಸಿಗಳ ಸ್ಥಳಾಂತರಕ್ಕೆ ಡಿಸಿ ಸೂಚನೆ

ಮಂಗಳೂರು : ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ…

Read more

ಅಂಗನವಾಡಿಗೆ ನುಗ್ಗಿದ ಮಳೆನೀರು : ಶಾಸಕರ ಭೇಟಿ, ಪಂಚಾಯತ್ ಅಧಿಕಾರಿಗಳ ತರಾಟೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ಇಲ್ಲಿನ ಪಟ್ಟಣ ಪಂಚಾಯತ್ ನಿರ್ಲಕ್ಷ್ಯದಿಂದಾಗಿ ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ಕೃತಕ ನೆರೆ ನೀರು ನುಗ್ಗಿದೆ. ವಿಷಯ ತಿಳಿದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

Read more

ಮಳೆ ನಿಂತರೂ ನಿಲ್ಲದ ನೆರೆಹಾವಳಿ; ಮನೆ, ವಸತಿಗೃಹ, ಗರಡಿಗೆ ನುಗ್ಗಿದ ನೀರು – ಉಡುಪಿಯ ಹಲವೆಡೆ ಕೃತಕ ನೆರೆ

ಉಡುಪಿ : ಕಳೆದ 24 ಗಂಟೆ ಸುರಿದ ಭಾರೀ ಮಳೆಗೆ ಉಡುಪಿಯ ಹಲವೆಡೆ ಕೃತಕ ನೆರೆ ಉಂಟಾಗಿದೆ. ನಗರದ ಹಲವೆಡೆ ಕೃತಕ ನೆರೆಯ ಪರಿಣಾಮ ಮನೆಗಳು, ವಸತಿಗೃಹ ಮತ್ತು ಗರಡಿಗೆ ನೀರು ನುಗ್ಗಿದೆ. ನಗರದ ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದ್ದು,…

Read more

ಇಂದ್ರಾಣಿ ಒಡಲಲ್ಲಿ ಅಪಾರ ತ್ಯಾಜ್ಯ

ಇಂದ್ರಾಣಿ ಕಾಲುವೆಗೆ ಜನರು ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದು, ಪ್ಲಾಸ್ಟಿಕ್ ಬಾಟಲಿ, ಬಟ್ಟೆ ವೈದ್ಯಕೀಯ ತ್ಯಾಜ್ಯ ಸಹಿತ ಮೊದಲಾದ ತ್ಯಾಜ್ಯಗಳು ಅಪಾರ `ಪ್ರಮಾಣದಲ್ಲಿ ಶೇಖರಣೆಗೊಂಡಿದೆ. ಕೊಡಂಕೂರಿನಲ್ಲಿ ಇಂದ್ರಾಣಿ ನದಿಗೆ ಅಳವಡಿಸಿದ ಟ್ರ್ಯಾಶ್ ಬ್ಯಾರಿಯಲ್‌ನಲ್ಲಿ ಸಾಕಷ್ಟು ಪ್ರಮಾಣದ ತ್ಯಾಜ್ಯ ಶೇಖರಣೆಗೊಂಡಿದೆ. ಎಲ್ಲ ತ್ಯಾಜ್ಯವನ್ನು…

Read more

ಕಂಪೌಂಡ್ ಕುಸಿದು ಮನೆಗೆ ಹಾನಿ – ಮಣ್ಣಿನಡಿ ಸಿಲುಕಿದ ಮಕ್ಕಳು; ಮದನಿನಗರ ದುರಂತದ ಬೆನ್ನಲ್ಲೇ ಮತ್ತೊಂದು ಘಟನೆ

ಪುತ್ತೂರು : ದ.ಕ.ಜಿಲ್ಲೆಯ ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ ಪುತ್ತೂರಿನಲ್ಲಿ ಮನೆ ಮೇಲೆಯೇ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಪುತ್ತೂರಿನ ಬನ್ನೂರು…

Read more

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಂಸದ ಕೋಟ – ಹೆದ್ದಾರಿ ಕಾಮಗಾರಿಗೆ ವೇಗ ನೀಡುವಂತೆ ಮನವಿ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.ಉಡುಪಿ ಜಿಲ್ಲೆಯ ಸಂತೆಕಟ್ಟೆ ಕಲ್ಯಾಣಪುರದ ಸುರಂಗ ಮಾರ್ಗ, ಇಂದ್ರಾಳಿಯ ಮೇಲ್ಸೇತುವೆ, ಮಲ್ಪೆ ಭೂಸ್ವಾಧೀನದ ವಿಳಂಬ ಮತ್ತು ನೆನೆಗುದ್ದಿಗೆ…

Read more

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ವರುಣನ ಅಬ್ಬರ : ಕರಾವಳಿಗೆ ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ…

Read more

ಭಾರಿ ಮಳೆ ಹಿನ್ನೆಲೆ – ದ.ಕ ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ‌ ನಾಳೆ (ಗುರುವಾರ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ…

Read more