Problems

ಉಡುಪಿ ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆ

ಉಡುಪಿ : ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು ಕರಾವಳಿ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ರೆಡ್ ಅಲರ್ಟ್‌ ಘೋಷಣೆ ಮಾಡಿದೆ. ನಿನ್ನೆಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಇಂದು ಕೂಡ ಮುಂದುವರೆದಿದೆ.…

Read more

ದ.ಕ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ‌ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ…

Read more

ಜುಲೈ 15ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಉಡುಪಿ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಜು.16 ರಿಂದ 18ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ…

Read more

ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡಜರಿತ; ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಹೆಬ್ರಿ : ಭಾರೀ ಮಳೆಗೆ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಇಂದು ಗುಡ್ಡಜರಿದು ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಘಾಟಿಯಲ್ಲಿ ವಾಹನ ಸಂಚಾರ ಕೆಲಹೊತ್ತು ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ರಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ರಸ್ತೆ…

Read more

ರಾಷ್ಟ್ರೀಯ ಹೆದ್ದಾರಿ ಸಂಚಾರ ದಟ್ಟಣೆ: ತ್ವರಿತ ಪರಿಹಾರಕ್ಕೆ ಯು.ಟಿ. ಖಾದರ್ ಸೂಚನೆ

ಮಂಗಳೂರು : ನಗರದ ನಂತೂರು, ಪಂಪ್‌ವೆಲ್ ಸಹಿತ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಶನಿವಾರ ನಂತೂರು ವೃತ್ತದಲ್ಲಿ ದಿನವಿಡೀ ಸಂಚಾರ ದಟ್ಟಣೆ ಉಂಟಾಗಿ…

Read more

ಯಡಮೊಗೆ ಹಾಗೂ ತೊಂಬಟ್ಟುವಿನಲ್ಲಿ ಕಾಲು ಸಂಕ ಉದ್ಘಾಟಿಸಿದ ಗಂಟಿಹೊಳೆ

ಬೈಂದೂರು : ಬೈಂದೂರು ತಾಲ್ಲೂಕಿನ ಯಡಮೊಗೆ ಹಾಗೂ ತೊಂಬಟ್ಟುವಿನಲ್ಲಿ ಕಾಲುಸಂಕವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಇಂದು ಉದ್ಘಾಟಿಸಿದರು. ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಬೆಂಗಳೂರಿನ ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ…

Read more

ಹೆಮ್ಮಾಡಿ ಬಳಿ ಗಾಳಿ ಮಳೆಗೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ಜಖಂ; ಶಾಲಾ ಬಸ್ ಹಾದುಹೋದ ತಕ್ಷಣ ಘಟನೆ, ತಪ್ಪಿದ ಭಾರೀ ಅನಾಹುತ

ಕುಂದಾಪುರ : ಇಲ್ಲಿಗೆ ಸಮೀಪದ ಹೆಮ್ಮಾಡಿ ಸಂತೋಷ್ ನಗರ ರಸ್ತೆಯಲ್ಲಿ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ಜಖಂಗೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ನೆಲಕ್ಕುರುಳಿ ಹಲವು ವಿದ್ಯುತ್ ಕಂಬಗಳು ತುಂಡಾಗಿ ರಸ್ತೆಯಲ್ಲಿ ಬಿದಿದ್ದು…

Read more

ಪ್ರಾಕೃತಿಕ ವಿಕೋಪ ಹಾನಿ : ಜಿಲ್ಲೆಗೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಸುರಿದ ಭಾರೀ ಗಾಳಿ ಮಳೆಯಿಂದ ಹಲವಾರು ಪ್ರದೇಶಗಳು ಜಲಾವೃತಗೊಂಡು ಮನೆ, ಆಸ್ತಿ ಪಾಸ್ತಿ ನಷ್ಟವಾಗಿ ಸರಿ ಸುಮಾರು 50 ಕೋಟಿಯಷ್ಟು ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿರುವ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಕೃತಿ…

Read more

ಅತ್ತೂರು ಚರ್ಚಿನ ಅಕ್ರಮ ಸ್ವಾಗತ ಗೋಪುರ ತೆರವಿಗೆ ಆಗ್ರಹ; ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ : ಹಿಂದೂ ಹಿತರಕ್ಷಣಾ ವೇದಿಕೆ ಎಚ್ಚರಿಕೆ

ಕಾರ್ಕಳ : ಕಾರ್ಕಳ ತಾಲೂಕಿನ ಅತ್ತೂರು ಗ್ರಾಮದಲ್ಲಿರುವ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅತ್ತೂರು ಸಂತ ಲಾರೆನ್ಸರ ಚರ್ಚ್ ಮಂಡಳಿಯವರು ಅಕ್ರಮವಾಗಿ ಭಾರಿ ಗಾತ್ರದ ಸ್ವಾಗತ ಗೋಪುರವನ್ನು ಕಟ್ಟಿದ್ದು, ಇದು ಸರ್ವೋಚ್ಚ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದು…

Read more

ಪೆರ್ಡೂರು ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು : ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯ, ಪೆರ್ಡೂರು ಇಲ್ಲಿಗೆ ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ…

Read more