Problems

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ : ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಭರವಸೆ

ಉಡುಪಿ: ಉಡುಪಿಗೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ನಗರದ ಇಂದ್ರಾಳಿ ರೈಲ್ವೆ ಸೇತುವೆ ಅಪೂರ್ಣ ಕಾಮಗಾರಿಯ ವೀಕ್ಷಣೆ ನಡೆಸಿದರು. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಿಜೆಪಿ ಮುಖಂಡರು ಸಾಥ್ ನೀಡಿದರು. ಕಾಮಗಾರಿ…

Read more

ತಾಲೂಕುಮಟ್ಟದ ಜನಸ್ಪಂದನ – ಒಟ್ಟು 54 ಅರ್ಜಿಗಳು ಸ್ವೀಕೃತ

ಉಡುಪಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಇಂದು ಬನ್ನಂಜೆಯಲ್ಲಿರುವ ಬಿಲ್ಲವ ಸೇವಾ ಸಂಘದ ನಾರಾಯಣ ಗುರು ಸಭಾಂಗಣದಲ್ಲಿ ಉಡುಪಿ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಸಭೆಯಲ್ಲಿ ಒಟ್ಟು 54 ಅರ್ಜಿಗಳು ಸ್ವೀಕೃತವಾದವು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ-19, ನಗರಸಭೆಯ-14,…

Read more

ವಿದ್ಯಾರ್ಥಿಗಳಿಂದ ಪ್ರತಿಭಟನೆ : ಹೆಬ್ರಿ ತಾಲೂಕಿಗೆ ಸರಕಾರಿ ಬಸ್ ಕಲ್ಪಿಸುವಂತೆ ಒತ್ತಾಯ

ಉಡುಪಿ : ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್‌ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹೆಬ್ರಿ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್‌ ಸೇವೆಗಳ ಸಮಸ್ಯೆ ಇದೆ. ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ…

Read more

ವಿವಿಧ ಬೇಡಿಕೆ ಮುಂದಿಟ್ಟು ಸಿಐಟಿಯುನಿಂದ ಪ್ರತಿಭಟನೆ, ಮನವಿ ಸಲ್ಲಿಕೆ

ಉಡುಪಿ : ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆ, ಬೀಡಿ ಕಾರ್ಮಿಕರು, ರಿಕ್ಷಾಚಾಲಕರು ಮತ್ತು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಳಿಕ ಅಪರ…

Read more

ಕಡಲಬ್ಬರಕ್ಕೆ ಮನೆ ಸಮುದ್ರಪಾಲು

ಉಳ್ಳಾಲ : ಉಚ್ಚಿಲ ಬಟ್ಟಪ್ಪಾಡಿ ಸಮುದ್ರತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ. ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ…

Read more

ಆಗುಂಬೆ ಘಾಟಿ : ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಆಗುಂಬೆ : ನಿರಂತರ ಮಳೆಯ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ…

Read more

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಂಸದ ಕೋಟ ಸಭೆ

ಉಡುಪಿ : ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು,…

Read more

ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಭೂಕುಸಿತಕ್ಕೆ ಧರಾಶಾಹಿಯಾದ ಮನೆಯ ಬಾವಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪದ ಒಂದು ಮನೆಯ ಬಾವಿ ಕುಸಿದ್ದಿದ್ದು, ಬಾವಿ ಕುಸಿಯುವ ವಿಡಿಯೋ ಇದೀಗ ವೈರಲ್‌ಗೊಂಡಿದೆ. ಸ್ಥಳೀಯ ನಿವಾಸಿ ವಸಂತಿ ಶೆಟ್ಟಿ ಎಂಬುವರಿಗೆ…

Read more

ಅಪಾಯದಲ್ಲಿರುವ ಮನೆಗಳು : ನಿವಾಸಿಗಳ ಸ್ಥಳಾಂತರಕ್ಕೆ ಡಿಸಿ ಸೂಚನೆ

ಮಂಗಳೂರು : ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ…

Read more

ಅಂಗನವಾಡಿಗೆ ನುಗ್ಗಿದ ಮಳೆನೀರು : ಶಾಸಕರ ಭೇಟಿ, ಪಂಚಾಯತ್ ಅಧಿಕಾರಿಗಳ ತರಾಟೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ಇಲ್ಲಿನ ಪಟ್ಟಣ ಪಂಚಾಯತ್ ನಿರ್ಲಕ್ಷ್ಯದಿಂದಾಗಿ ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ಕೃತಕ ನೆರೆ ನೀರು ನುಗ್ಗಿದೆ. ವಿಷಯ ತಿಳಿದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

Read more