Protest

ಸ್ಪೀಕರ್ ಯು.ಟಿ.ಖಾದರ್ ಮೇಲಿನ ಆಕ್ರೋಶ; ತಪ್ಪಾಗಿ ಗ್ರಹಿಸಿದ ಡಿವೈಎಫ್ಐ ಕಾರ್ಯಕರ್ತರಿಂದ ಕೇಂದ್ರ ಸಚಿವರ ಕಾರಿಗೆ ಮುತ್ತಿಗೆ

ಉಳ್ಳಾಲ : ರಸ್ತೆಹೊಂಡಕ್ಕೆ ಸ್ಕೂಟರ್ ಬಿದ್ದು ರಸ್ತೆಗೆಸೆಯಲ್ಪಟ್ಟ ಸಹಸವಾರೆ ಮೇಲೆಯೇ ಟ್ಯಾಂಕರ್‌ ಹರಿದು ಆಕೆ ಮೃತಪಟ್ಟ ಹಿನ್ನೆಲೆಯಲ್ಲಿ ರಸ್ತೆತಡೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರು ಸ್ಪೀಕರ್ ಯು.ಟಿ.ಖಾದರ್ ಅವರ ಕಾರು ಎಂದು ಕೇಂದ್ರ ಸಚಿವ ಶ್ರೀಪಾದ ಯಸ್ಸೋ ನಾಯಕ್ ಅವರ ಕಾರಿಗೆ ಮುತ್ತಿಗೆ…

Read more

ಉಳಾಯಿಬೆಟ್ಟು ಕಿರುಸೇತುವೆ ಬದಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಬೇಡಿಕೆ : ನ.13ರಂದು ಸಾರ್ವಜನಿಕ ಪ್ರತಿಭಟನೆ..!

ಮಂಗಳೂರು : ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾಲೆ ಮೇಲ್ಮನೆಯಲ್ಲಿರುವ, ಸದ್ಯ ಶಿಥಿಲಗೊಂಡಿದೆ ಎಂದು, ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವ ಉಳಾಯಿಬೆಟ್ಟುವಿನ ಕಿರು ಸೇತುವೆಗೆ ಪರ್ಯಾಯವಾಗಿ ಅಲ್ಲೇ ಪಕ್ಕದಲ್ಲಿ ತಾತ್ಕಾಲಿಕ ಮಣ್ಣಿನ ರಸ್ತೆ ನಿರ್ಮಿಸಲು ಸಾರ್ವಜನಿಕರು ನಿಶ್ಚಯಿಸಿರುತ್ತಾರೆ. ಆದರೆ ಉಳಾಯಿಬೆಟ್ಟು-ಪೆರ್ಮಂಕಿ-ಮಲ್ಲೂರು…

Read more

ಪೇಜಾವರ ಶ್ರೀಗಳ ಬಗ್ಗೆ ಅವಹೇಳಕಾರಿ ಹೇಳಿಕೆ; ಬಿ.ಕೆ. ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಖಂಡನೆ

ಉಡುಪಿ : ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕುರಿತು ಅವಹೇಳಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಉಡುಪಿ ಜಿಲ್ಲಾ ಸಮಸ್ತ ವಿಪ್ರ ಭಾಂದವರು ಖಂಡನೆ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ…

Read more

ಹುಲಿವೇಷ ಕುಣಿತಕ್ಕೆ ಆಗುತ್ತಿರುವ ಅಪಪ್ರಚಾರ ಖಂಡಿಸಿ ಬೃಹತ್ ಪಾದಯಾತ್ರೆ; ಅಪಪ್ರಚಾರ ಖಂಡಿಸಿದ ನೂರಾರು ಹುಲಿವೇಷಧಾರಿಗಳು

ಉಡುಪಿ : ಉಡುಪಿ ಶೈಲಿಯ ಹುಲಿವೇಷ ಕುಣಿತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಹುಲಿ ಕುಣಿತವನ್ನು ಉಳಿಸುವ ನಿಟ್ಟಿನಲ್ಲಿ ಉಡುಪಿಯ ಸಮಾನಮನಸ್ಕ ತಂಡಗಳ ಸಂಯೋಜನೆಯಲ್ಲಿ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಯಿತು. ಜೋಡುಕಟ್ಟೆಯಿಂದ ಕೃಷ್ಣಮಠದವರೆಗೆ ನಡೆದ ಬಹೃತ್ ಪಾದಯಾತ್ರೆಯಲ್ಲಿ…

Read more

ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಹಿಂದಿರುಗಿಸುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ಪ್ರತಿಭಟನೆ

ಕಳೆದ ಕೆಲವು ವರ್ಷಗಳಿಂದ ಅನಧಿಕೃತವಾಗಿ ಅನೇಕ ವಿದ್ಯಾರ್ಥಿಗಳ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿಯನ್ನು ತಡೆಹಿಡಿದು ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದ ಅಚಲಾಡಿಯಲ್ಲಿರುವ ಇ.ಸಿ.ಆರ್ ಕಾಲೇಜಿನ ಗೇಟಿನ ಎದುರು ಶೋಷಿತ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪ್ರಾಂಶುಪಾಲರು ಬಂದು ಸಮಸ್ಯೆಗಳನ್ನು ಆಲಿಸುವಂತೆ ಪಟ್ಟು…

Read more

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಉಡುಪಿ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ನೇತೃತ್ವದಲ್ಲಿ 11 ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆದು ಬಳಿಕ ಅಪರ ಜಿಲ್ಲಾಧಿಕಾರಿ ಮಮತಾದೇವಿ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ…

Read more

ಹೋಂಸ್ಟೇ ರೆಸಾರ್ಟ್‌ ಗಳಿಂದ ಊರಿನ ಪರಂಪರೆಗೆ ಧಕ್ಕೆ – ಪಡುಕರೆ ಭಜನಾಮಂದಿರಗಳ ಒಕ್ಕೊರಲ ಅಭಿಪ್ರಾಯ

ಮಲ್ಪೆ : ಕಳೆದ ನಾಲ್ಕೈದು ವರ್ಷಗಳಿಂದ ಹೋಂಸ್ಟೇ ರೆಸಾರ್ಟ್‌‌ಗಳಿಂದ, ಅದರಿಂದ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳಿಂದ, ಊರಿನ ಪರಂಪರೆಗೆ, ಭಜನಾ ಮಂದಿರಗಳ ಪಾವಿತ್ರ್ಯತೆಗೆ ಸತತ ಧಕ್ಕೆಯಾಗುತ್ತಿರುವುದನ್ನು ಕಂಡು ಕಳೆದ ನಾಲ್ಕೈದು ವರ್ಷಗಳಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಕೊಟ್ಟು ಕೊಟ್ಟೂ ಸುಸ್ತಾದ ಊರಿನ ನಾಗರಿಕರು…

Read more

ಮಂಗಳೂರಿನಲ್ಲಿ ಕಾಫಿ ಬೆಳೆಗಾರರ ಪ್ರತಿಭಟನೆ

ಮಂಗಳೂರು : ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ಎಲ್ಲ ಸಹ ಸಂಘಟನೆಗಳ ಸಹಕಾರದಿಂದ ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಪ್ರತಿಭಟನಾ ಸಭೆಯು ನಗರದ ಕ್ಲಾಕ್ ಟವರ್ ಎದುರು ಗುರುವಾರ ನಡೆಯಿತು. ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರು…

Read more

ಪಂಚಾಯತ್‌ರಾಜ್ ಇಲಾಖೆಯ ಆಡಳಿತ ಸ್ಥಗಿತ : ಮುಖ್ಯಮಂತ್ರಿಗಳ ಮಧ್ಯಪ್ರವೇಶಕ್ಕೆ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ಕರ್ನಾಟಕ ರಾಜ್ಯದ ಸರಿ ಸುಮಾರು 6,000‌ದಷ್ಟು ಗ್ರಾಮ ಪಂಚಾಯತಿಗಳ ಆಡಳಿತ ವ್ಯವಸ್ಥೆ ಸಿಬ್ಬಂದಿಗಳ ಮುಷ್ಕರದಿಂದಾಗಿ ಸ್ಥಗಿತ ಆಗಿದೆ. ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ನೀರು ಸರಬರಾಜು ಸಿಬ್ಬಂದಿಗಳು, ಸ್ವಚ್ಛತಾ ಕಾರ್ಯಕರ್ತರ ಸಹಿತ ಇಡೀ ಪಂಚಾಯತಿಯ ಕಾರ್ಯಾಂಗ…

Read more

ಮರಳು ಮಾಫಿಯಾ ವಿರುದ್ದ ಪ್ರತಿಭಟನೆ ನಡೆಸಿದ್ದಕ್ಕೆ ಹಲ್ಲೆ : ಇಬ್ಬರ ಬಂಧನ

ಮಂಗಳೂರು : ಮರಳು ಮಾಫಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಆಲ್ವಿನ್ ಜೆರೋಮ್ ಡಿಸೋಜಾ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ, ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅತಾವುಲ್ಲಾ (40) ಮತ್ತು ಮಂಗಳೂರಿನ ಮಾರ್ನಮಿಕಟ್ಟೆಯ…

Read more