Social

ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ ನಿಧನ

ಕಾಪು : ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ (74) ಅವರು ಜೂ.21 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಸಹೋದರರು, ಸಹೋದರಿಯನ್ನು ಮತ್ತು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.…

Read more

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನಲ್ಲಿ 2024ರ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಜೂನ್ 21, 2024 ರಂದು “ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ” ಎಂಬ ವಿಷಯದೊಂದಿಗೆ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ಇದನ್ನು ಯೋಗ ವಿಭಾಗ, ಇಂಟಿಗ್ರೇಟಿವ್ ಮೆಡಿಸಿನ್ ಮತ್ತು ರಿಸರ್ಚ್ ಸೆಂಟರ್…

Read more

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ : ವಿಶ್ವ ಯೋಗ ದಿನಾಚರಣೆ

ಉಡುಪಿ : ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ ಇಂದು ವಿಶ್ವ ಯೋಗ ದಿನಾಚರಣೆಯನ್ನು ಜಗನ್ನಾಥ ಸಭಾಭವನದಲ್ಲಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಜಯಕರ ಶೆಟ್ಟಿ ಇಂದ್ರಾಳಿ‌ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಲಿಸ್ ಯೋಗ ತರಬೇತಿ ಕೇಂದ್ರದ ತರಬೇತುದಾರರಾದ…

Read more

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯವಶ್ಯಕ : ಶಾಸಕ ಯಶ್ಪಾಲ್ ಸುವರ್ಣ

ಉಡುಪಿ : ‘ನಮಗಾಗಿ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗಾಭ್ಯಾಸ ಅತ್ಯಗತ್ಯ ಎಂದು ಉಡುಪಿ ಶಾಸಕ…

Read more

ವಿಶ್ವ ಯೋಗ ದಿನಾಚರಣೆ – “ಯೋಗೀಶ್ವರನೆಡೆಗೆ ಯೋಗ ನಡಿಗೆ” ಎಂಬ ವಿಶಿಷ್ಟ ಕಾರ್ಯಕ್ರಮ

ಉಡುಪಿ : ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ, ಶ್ರೀ ಕ್ಷೇತ್ರ ಧರ್ಮಸ್ಥಳದ ಸೌಖ್ಯವನ ವಿಶಿಷ್ಟವಾಗಿ ವಿಶ್ವ ಯೋಗ ದಿನವನ್ನು ಆಚರಿಸಿತು. ಉಡುಪಿ ಕ್ಲಾಕ್‌ಟವರ್ ನಿಂದ ಶ್ರೀ ಕೃಷ್ಣ ಮಠದವರೆಗೆ ನೂರಾರು ಜನ ಯೋಗ ನಡಿಗೆಯನ್ನು ಮಾಡಿದರು. ಯೋಗೀಶ್ವರನೆಡೆಗೆ ಯೋಗ ನಡಿಗೆ ಎಂಬ…

Read more

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಪುತ್ತಿಗೆ ಮಠ ಹಾಗೂ ಪತಂಜಲಿ ಯೋಗ ಪೀಠದಿಂದ ಯೋಗ ದಿನಾಚರಣೆ

ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀ ಪುತ್ತಿಗೆ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಪೀಠ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ…

Read more

ಕರಾವಳಿಯಲ್ಲಿ ಜೂ.24ರವರೆಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ : ಮುಂದಿನ ಐದು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ…

Read more

ಜೂನ್ 21 – 24 ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ

ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21 – 24ರವರೆಗೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ…

Read more

ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ : ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ಯಕ್ಷಮಂಗಳ ಪ್ರಶಸ್ತಿ; ಕಲ್ಚಾರ್ ಅವರ ಪೀಠಿಕಾ ಪ್ರಕರಣ ಗ್ರಂಥಕ್ಕೆ ಕೃತಿ ಪ್ರಶಸ್ತಿ

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ…

Read more

ಜೂನ್ 23ರಂದು ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗವು ಪ್ರತಿವರ್ಷ ನಡೆಸುತ್ತಾ ಬಂದ ತಾಳಮದ್ದಲೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 23.06.2024, ಭಾನುವಾರ ಅಪರಾಹ್ನ 3.00 ಗಂಟೆಗೆ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ & ರಿಸರ್ಚ್ ಸೆಂಟರ್‌ನ ಸಭಾಂಗಣದಲ್ಲಿ ಜರಗಲಿದೆ. ಮೂಡಬಿದ್ರೆ…

Read more