ಉಡುಪಿ : ರಾಜ್ಯ ಸರಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ, ತುಷ್ಟೀಕರಣ ನೀತಿ ಹಾಗೂ ಪ್ರಸಕ್ತ ವಿದ್ಯಮಾನಗಳ ಕುರಿತು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಅವರ ಪತ್ರಿಕಾ ಗೋಷ್ಠಿಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಬಿಜೆಪಿ ಸದಸ್ಯತಾ ಅಭಿಯಾನ-2024ರ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲೇಶ್ ಶೆಟ್ಟಿ, ಸಹ ಸಂಯೋಜಕ ಶಂಕರ ಅಂಕದಕಟ್ಟೆ ಉಪಸ್ಥಿತರಿದ್ದರು.

 
			        


 
			         
                        
 
                        
 
                         
                        















 
                        
 
                        
 
                        
 
                         
                        
 
                        