Special

ರಾಜಾಂಗಣದಲ್ಲಿ ಕೈಮಗ್ಗ ಮೇಳಕ್ಕೆ ಪುತ್ತಿಗೆ ಶ್ರೀಪಾದರಿಂದ ಚಾಲನೆ

ಉಡುಪಿ : ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ವತಿಯಿಂದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಕೈಮಗ್ಗ ಸೀರೆಗಳ ಮೌಲ್ಯವರ್ಧನೆ ಮತ್ತು ಉನ್ನತೀಕರಣಕ್ಕಾಗಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ…

Read more

ಎರಡನೇ ಬಾರಿ ಕಮಲಶಿಲೆಯ ದುರ್ಗಾಪರಮೇಶ್ವರಿಯ ಪಾದ ತೊಳೆದ ಕುಬ್ಜಾ ನದಿ

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ. ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದ…

Read more

ಅಮೇರಿಕಾದಲ್ಲಿ ಪ್ರತಿವರ್ಷ ಜುಲೈ 27ರಂದು “ಯಕ್ಷಗಾನ ಡೇ” ಎಂದು ಘೋಷಣೆ

ಉಡುಪಿ : ಅಮೆರಿಕಾದಲ್ಲಿ ಪುತ್ತಿಗೆ ಶ್ರೀಪಾದರ ಅಪೇಕ್ಷೆಯಂತೆ ಪಟ್ಲ ಸತೀಶ್ ಶೆಟ್ಟಿಯವರ ನಾಯಕತ್ವದಲ್ಲಿ ಯಕ್ಷಧ್ರುವ ಫೌಂಡೇಶನ್ ಕಲಾತಂಡದ ಕಲಾವಿದರು ಪುತ್ತಿಗೆ ಮಠದ ಪ್ರಥಮ ದೇವಾಲಯ‌ವೆಂದು ಪ್ರಖ್ಯಾತವಾದ ಫೀನಿಕ್ಸ್‌ನಲ್ಲಿರುವ ಶ್ರೀವೆಂಕಟ ಕೃಷ್ಣ ಕ್ಷೇತ್ರದಲ್ಲಿ ದೇವೀ ಮಾಹಾತ್ಮೆ ಯಕ್ಷಗಾನ ಪ್ರದರ್ಶನ‌ವನ್ನು ಕಿಕ್ಕಿರಿದ ಸಭಾಂಗಣದಲ್ಲಿ ನಡೆಸಿಕೊಟ್ಟರು.…

Read more

ಹಿರಿಯಡಕದಲ್ಲಿ ಫಿಸಿಯೋಥೆರಪಿ ಘಟಕ ಉದ್ಘಾಟನೆ

ಹಿರಿಯಡಕ : ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರವು ಹಿರಿಯಡ್ಕದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಮಣಿಪಾಲ ಮಾಹೆಯ ಎಮ್.ಸಿ.ಹೆಚ್.ಪಿ. ಡಾ. ಅರುಣ್ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಎಂಡೋಸಲ್ಫಾನ್ ಸೇರಿದಂತೆ ದೈಹಿಕ ಅಂಗವಿಕಲತೆ ಇರುವ ಎಲ್ಲಾ ದಿವ್ಯಾಂಗರು…

Read more

ನಾಲ್ಕು ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ಸಂಗಮ – ಬಾಗಿನ ಅರ್ಪಣೆ

ಮಂಗಳೂರು : ನಾಲ್ಕು ವರ್ಷಗಳ ಬಳಿಕ ಕರಾವಳಿಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯು ಮಂಗಳವಾರ ರಾತ್ರಿ ಸಂಗಮವಾಗಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡೂ ಪವಿತ್ರ ನದಿಗಳು ಸಂಗಮವಾಯಿತು. ನದಿಗಳೆರಡರ ಸಂಗಮವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತ ಸಂದೋಹ…

Read more

ವಿದ್ಯಾರ್ಥಿನಿಗೆ ಎದೆನೋವು – ಬಸ್ಸನ್ನೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಚಾಲಕ ನಿರ್ವಾಹಕ

ಮಂಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್ ಚಾಲಕ ಮತ್ತು‌ ನಿರ್ವಾಹಕ ಬಸ್ ಅನ್ನು ನಿಗದಿತ ರೂಟ್‌ನಲ್ಲಿ ಎಲ್ಲಿಯೂ ನಿಲ್ಲಿಸದೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಘಟನೆ ಮಂಗಳವಾರ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ…

Read more

ವಯನಾಡು ದುರಂತ : ನೆರವಿಗೆ ಉಡುಪಿ ಬಿಷಪ್ ಮನವಿ

ಉಡುಪಿ : ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಕಳವಳ ವ್ಯಕ್ತಪಡಿಸಿದ್ದು, ದುರಂತದಲ್ಲಿ ನಿರಾಶ್ರಿತರಾದವರ ನೆರವಿಗೆ ಧರ್ಮಪ್ರಾಂತ್ಯ ಎಲ್ಲಾ ರೀತಿಯ ಸಹಕಾರ ನೀಡಲು ಬಯಸಿದೆ…

Read more

“ಕಲಾಂತರಂಗ 2023-24” ಬಿಡುಗಡೆ

ಯಕ್ಷಗಾನ ಕಲಾರಂಗದ ಒಂದು ವರ್ಷದ ಸಮಗ್ರ ಚಟುವಟಿಕೆಯ ವಿವರಗಳನ್ನು ಒಳಗೊಂಡ ಮುನ್ನೂರು ಪುಟಗಳ ಸಚಿತ್ರ ”ಕಲಾಂತರಂಗ 2023-24″ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆಯವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ್ ರಾವ್ ಮತ್ತು ಕಾರ್ಯದರ್ಶಿ…

Read more

ಅಂಧ, ಮಾನಸಿಕ ಅಸ್ವಸ್ಥ ಯುವಕನಿಗೆ ಆಶ್ರಯ ನೀಡಿದ ಹೊಸಬೆಳಕು ಆಶ್ರಮ

ಉಡುಪಿ : ಅಂಧ ಹಾಗೂ ಮಾನಸಿಕ ಅಸ್ವಸ್ಥ ಯುವಕನಿಗೆ ಕಾರ್ಕಳ ಬೈಲೂರಿನ ರಂಗನಪಲ್ಕೆಯ ಹೊಸಬೆಳಕು ಆಶ್ರಮ ಆಶ್ರಯ ನೀಡಿ ಮಾನವೀಯತೆ ಮೆರೆದಿದೆ. ಯುವಕ ರಾಜೇಶ್ (27) ಹೊರ ರಾಜ್ಯದವನಾಗಿದ್ದು, ದೃಷ್ಟಿ ಹೀನನಾಗಿದ್ದು ಜೊತೆಗೆ ಮಾನಸಿಕ ಅಸ್ವಸ್ಥತೆಗೆ ಜಾರಿದ್ದ. ಈತ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ…

Read more

ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಉಡುಪಿ : ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಅಗಸ್ಟ್ 2024ರ ಮಾಹೆಯಲ್ಲಿ ಶೇ.50 ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು. ಓದುಗರು ಆನ್‌ಲೈನ್ http://www.kuvempubhashabharathi.karnataka.gov.in ಮೂಲಕ ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read more