ಉಡುಪಿ : ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳಾ ಪ್ರಯಾಣಿಕರನ್ನು ತನ್ನ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಿಸಿದ RPF ಮಹಿಳಾ ಸಿಬ್ಬಂದಿ ಅಪರ್ಣಾರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ರವರು ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು. ತುರ್ತು ಸಂದರ್ಭದಲ್ಲಿ ಸಮಯೋಚಿತ ಕಾರ್ಯದ ಮೂಲಕ ಮಹಿಳೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಅಪರ್ಣಾರವರಿಗೆ ಅಭಿನಂದನೆ ಸಲ್ಲಿಸಿದರು.
Special
ಕೃಷ್ಣಮಠದಲ್ಲಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ ಪರ್ಯಾಯ ಪುತ್ತಿಗೆ ಶ್ರೀ
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆಮಠ ಶ್ರೀಕೃಷ್ಣ ಮಠ, ಉಡುಪಿ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಕೃಷ್ಣಮಠದ ಮುಖ್ಯ ದ್ವಾರದ ಬಳಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಪರ್ಯಾಯ ಶ್ರೀ ಪುತ್ತಿಗೆ ಸುಸುಗುಣೇಂದ್ರ ತೀರ್ಥ ಶ್ರೀಪಾದರು ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದರು. ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರ ಸಭಾ ಸದಸ್ಯೆ ಮಾನಸ ಪೈ, ಮಠದ ದಿವಾನರಾದ ನಾಗರಾಜ ಆಚಾರ್ಯ, ರಮಣ ಆಚಾರ್ಯ, ಹಾಗೂ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಪ್ರಭಾರಿಗಳವರಾದ ವೆಂಕಟೇಶ್ ಮೆಹಂದಲೆ, ಜಗದೀಶ ಕುಮಾರ್, ಲೀಲಾ ಆರ್ ಅಮೀನ್, ಹರಿಪ್ರಸಾದ ಕೆ, ನಾಗರಾಜ್ ಶೇಟ್, ಡಿ.ಟಿ.ಅಮೀನ್, ಗಿರೀಶ್, ಶ್ರೀಪತಿ ಭಟ್, ಲಕ್ಷ್ಮೀ ಸುವರ್ಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಉಡುಪಿ : ದುಶ್ಚಟ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಡಾ. ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮ ಜನಜಾಗೃತಿಯ ಮೂಲಕ ಸಮಾಜದಲ್ಲಿ ಮುಖ್ಯವಾಗಿ ದುರ್ಬಲ ವರ್ಗದಲ್ಲಿ ದುಶ್ಚಟಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು. ಇದಕ್ಕಾಗಿ ಸಮಾಜದ ಗಣ್ಯರ ಸಹಭಾಗಿತ್ವವುಳ್ಳ ರಾಜ್ಯ ಮಟ್ಟದ ಜನಜಾಗೃತಿ ವೇದಿಕೆಯನ್ನು ಸ್ಥಾಪಿಸಲಾಗಿದೆ.
ಕಳೆದ 21 ವರ್ಷಗಳಿಂದ ಉಡುಪಿ ಜಿಲ್ಲೆಯಾದ್ಯಂತ ಮದ್ಯಪಾನ, ದುಶ್ಚಟ, ಮಾದಕ ವಸ್ತುಗಳ ವಿರುದ್ಧ ಆಂದೋಲನ ಜಾಗೃತಿ, ಮನಪರಿವರ್ತನೆ ಮಾಡುವ ಜನಜಾಗೃತಿ ಕಾರ್ಯಕ್ರಮವು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಉಡುಪಿ ಜಿಲ್ಲೆಯ ವತಿಯಿಂದ ನಡೆಯುತ್ತಿದೆ. ಇದರ ಭಾಗವಾಗಿ ಇಂದು ಬೃಹತ್ ಜನಜಾಗೃತಿ ಜಾಥಾ ನಡೆಯಿತು.
ಉಡುಪಿಯ ಜೋಡುಕಟ್ಟೆಯಿಂದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ನೂರಾರು ಜನರು ಜಾಥಾದಲ್ಲಿ ಜಾಗೃತಿ ಫಲಕಗಳನ್ನು ಹಿಡಿದು ಪ್ರಮುಖ ರಸ್ತೆ ಮೂಲಕ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಆಕರ್ಷಕ ಟ್ಯಾಬ್ಲೋಗಳು ಗಮನ ಸೆಳೆದವು. ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಗಳು, ಡಾ.ಡಿ.ವೀರೇಂದ್ರ ಹೆಗ್ಗಡೆ ಸಹಿತ ಗಣ್ಯರು ಭಾಗವಹಿಸಲಿದ್ದಾರೆ.
ಉಡುಪಿ : ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಯ ಊರಿಗೆ ಬರಲು ಟಿಕೆಟ್ ಸಿಗದೇ ಸಮಸ್ಯೆಗೆ ಸಿಲುಕಿದ್ದ ನಾಗರಿಕರಿಗೆ ಶುಭ ಸುದ್ದಿ ಬಂದಿದೆ.
ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ಅಕ್ಟೋಬರ್ 10 ಹಾಗೂ ಅಕ್ಟೋಬರ್ 12ರಂದು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ.
ಕುಂದಾಪುರ ರೈಲು ಹಿತರಕ್ಷಣ ಸಮಿತಿಯ ಗಣೇಶ್ ಪುತ್ರನ್ ಅವರು ಬಸ್ ಮತ್ತು ಈಗಿರುವ ರೈಲುಗಳ ಟಿಕೆಟ್ ಸಂಪೂರ್ಣ ಖಾಲಿಯಾದ ಬಗ್ಗೆ ಸಂಸದರ ಗಮನ ಸೆಳೆದಿದ್ದರು. ಬಸ್ ಟಿಕೆಟ್ ದರ ಏರಿಕೆಯೂ ಆಗಿದೆ. ಇದಕ್ಕೆ ತತ್ಕ್ಷಣವೇ ಸ್ಪಂದಿಸಿದ ಸಂಸದರು ರೈಲ್ವೇ ಇಲಾಖೆಗೆ ನವರಾತ್ರಿ ವಿಶೇಷ ರೈಲುಗಳ ಪ್ರಯಾಣಕ್ಕೆ ಸೂಚನೆ ನೀಡಿದ್ದರು.
ಮೈಸೂರಿನಿಂದ ಮೆಜೆಸ್ಟಿಕ್ ಮಾರ್ಗವಾಗಿ ಒಂದು ರೈಲು ಮತ್ತೊಂದು ರೈಲು ಯಶವಂತಪುರದಿಂದ ಹೊರಡಲಿದೆ. ಈ ಬಗ್ಗೆ ಸಂಸದರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟನೆ ನೀಡಿದ್ದಾರೆ.
ಉಡುಪಿ : ಬೆಳ್ಳೆ ಗ್ರಾಮ ಪಂಚಾಯಿತಿಯ ನೆಲ್ಲಿಕಟ್ಟೆಯಲ್ಲಿ ಸಾಹಸ್ ಸಂಸ್ಥೆ ಮತ್ತು ಎಚ್ಸಿಎಲ್ ಫೌಂಡೇಶನ್ ಸಹಯೋಗದಲ್ಲಿ ಸಾರ್ವಜನಿಕರು ಕಸ ಎಸೆಯುತ್ತಿದ್ದ ಜಾಗವನ್ನು ಇದೀಗ ಸೆಲ್ಫೀ ಕಾರ್ನರ್ ಆಗಿ ಪರಿವರ್ತಿಸುವ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಲಾಗಿದೆ.
ಈ ಸೆಲ್ಫೀ ಪಾಯಿಂಟ್ನ್ನು ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಿವ್ಯಾ ವಿ. ಆಚಾರ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಶಿಧರ್ ವಾಗ್ಳೆ, ಸದಸ್ಯರಾದ ರಾಜೇಂದ್ರ ಶೆಟ್ಟಿ, ಗುರುರಾಜ್ ಭಟ್, ರಂಜನಿ ಹೆಗ್ಡೆ, ಸಾಹಸ್ ಸಂಸ್ಥೆಯ ಮೇಲ್ವಿಚಾರಕಿ ವಿಶಾಲ, ಸ್ವಯಂ ಸೇವಕರಾದ ಶೋಧನ್, ಅವಿನಾಶ್, ಸಾತ್ವಿಕ್, ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಲೆಕ್ಕಸಹಾಯಕ ಸದಾನಂದ ಪೂಜಾರಿ, ಎಸ್ಎಲ್ಆರ್ಎಂ ಮೇಲ್ವಿಚಾರಕಿ ಧನಲಕ್ಷ್ಮೀ ಮತ್ತು ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಇಲ್ಲಿ ಪ್ರವಾಸಿಗರಿಗೆ ಸೆಲ್ಫೀ ತೆಗೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
ಸಾಹಸ್ ಸಂಸ್ಥೆಯ ವಿಶಾಲ ಮತ್ತು ಸ್ವಯಂ ಸೇವಕರನ್ನು ಗ್ರಾಮ ಪಂಚಾಯಿತಿ ಪರವಾಗಿ ಗೌರವಿಸಲಾಯಿತು.
ಮಳುಗು ತಜ್ಞ ಈಶ್ವರ್ ಮಲ್ಪೆಗೆ ಪುತ್ತಿಲ ಪರಿವಾರದಿಂದ 1 ಲಕ್ಷ ರೂ. ನೆರವು ಹಸ್ತಾಂತರ
ಉಡುಪಿ : ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ ಆಪಧ್ಬಾಂದವ, ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.
ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ ಮನೆಯ ಪರಿಸ್ಥಿತಿಯನ್ನು ಲೆಕ್ಕಿಸದೆ ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿ ಜೀವದ ಹಂಗು ತೊರೆದು ಉಚಿತವಾಗಿ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆಯವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಉತ್ತರ ಕನ್ನಡ ಜಿಲ್ಲೆಯ ಶೀರೂರು ಗುಡ್ಡ ಕುಸಿತದ ರಕ್ಷಣಾ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಮನವಿಯ ಮೇರೆಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ನಾಪತ್ತೆಯಾಗಿದ್ದ ಚಾಲಕ ಅರ್ಜುನ್ ಲಾರಿಯನ್ನು ಗುರುತಿಸುವಲ್ಲಿಯೂ ಈಶ್ವರ್ ಮಲ್ಪೆ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕೊನೆಗೆ ಅವರನ್ನು ಅಧಿಕಾರಿಗಳು ಮತ್ತು ಸರ್ಕಾರ ಕಡೆಗಣನೆ ಮಾಡಿರುವುದು ಸಮಾಜದಲ್ಲಿ ತೀವ್ರ ಬೇಸರವನ್ನು ಉಂಟುಮಾಡಿದೆ.
ಮನೆಯಲ್ಲಿ ಬಡತನವಿದ್ದರೂ ಮಾನವೀಯತೆಯಲ್ಲಿ ಆಗರ್ಭ ಶ್ರೀಮಂತರಾಗಿರುವ ಈಶ್ವರ್ ಮಲ್ಪೆಯವರ ಸೇವೆ ಇನ್ನಷ್ಟು ಬೇಕೆಂಬ ಹಂಬಲದಿಂದ ಪ್ರತಿಯೊಬ್ಬನೂ ಈಶ್ವರ್ ಮಲ್ಪೆಯವರಿಗೆ ಬೆಂಬಲವಾಗಿ ನಿಲ್ಲಬೇಕೆಂದು ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ ಹೇಳಿದರು.
Department of Student Affairs, MAHE, Hosts Gender Champion Awareness Workshop 3.0
Manipal : The Department of Student Affairs, MAHE, successfully organized the Gender Champion Awareness Workshop 3.0 at the KMC Interact Hall. The workshop brought together student gender champions and nodal faculty members from various MAHE institutions for an insightful and empowering session focused on gender sensitivity and inclusivity across campuses.

Dr. Raviraja N S, Chief Operating Officer (COO) of MAHE, graced the event as the Chief Guest. In his address, he emphasized the vital role that gender champions play in promoting a culture of equality and respect on university campuses. He highlighted the need for constant efforts to ensure that gender sensitivity is ingrained in academic environments.
Ms. Saraswathy, Director of Finance, was the Guest of Honour. She shared her perspectives on the importance of fostering gender equality within academic institutions, noting that it is crucial for the holistic development of both students and staff. Her insights added a valuable financial and administrative viewpoint to the discussions on gender inclusivity.
The workshop commenced with a warm welcome by Dr. Geetha Maiya, Director of Student Affairs, MAHE, who set the tone for a productive day of learning, dialogue, and collaboration. Dr. Rayan Mathias, Senior Counselor, served as the emcee for the event, ensuring a smooth flow of activities throughout the day. The event concluded with a vote of thanks from Dr. Aravind Pandey, Deputy Director (Health Science), who expressed sincere gratitude to all those who contributed to the workshop’s success.
Key attendees included Prof. Roshan David and Dr. Rashmi Yogesh Pai, Deputy Directors (Technical), as well as Dr. Nithin, Deputy Director from the Mangalore Campus, who played pivotal roles during the workshop’s inauguration. The event was further enriched by contributions from the team of student counselors at the Department of Student Affairs, MAHE, and esteemed faculty from KMC, MAHE Manipal, Manipal Centre for Humanities, and Manipal Centre for European Studies, who served as resource persons for the sessions.
The Gender Champion Awareness Workshop 3.0 provided an excellent platform to deepen participants’ understanding of gender-related issues. It also empowered students to take the lead in promoting gender sensitization initiatives across the university, ensuring that MAHE continues to be a space of inclusivity and equal opportunity for all.

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮಕ್ಕೆ ಪೂರಕವಾಗುವ ಚಟುವಟಿಕೆಗಳನ್ನು ಕೈಗೊಳ್ಳುವ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳತ್ತ ಪ್ರವಾಸಿಗರು ಆಕರ್ಷಿತರಾಗುವಂತೆ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಬೇಕು ಎಂದರು.
ಹೊಸ ಬೀಚಿನ ಅಭಿವೃದ್ಧಿಯ ದೃಷ್ಠಿಕೋನದೊಂದಿಗೆ ಕೋಡಿ ಕನ್ಯಾನ ಬೀಚಿನಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ ಮಳೆಗಾಲದ ನಂತರ ಹೆಚ್ಚು ತ್ಯಾಜ್ಯಗಳು ಕಡಲತೀರದ ಬಳಿ ಸೇರಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್ಗೆ ಆಗಮಿಸುವುದರಿಂದ ಬೀಚ್ಗಳ ಸ್ವಚ್ಛತೆಗೆ ಪ್ರತಿಯೊಬ್ಬರೂ ಮೊದಲ ಆದ್ಯತೆ ನೀಡಿ, ಜಲಚರಗಳ ರಕ್ಷಣೆಗೆ ಮುಂದಾಗಬೇಕು. ಜೊತೆಗೆ ಪರಿಸರ ಸ್ಚಚ್ಛವಾಗಿ ಇರಿಸಿಕೊಳ್ಳುವುದರಿಂದ ನಮ್ಮ ಆರೋಗ್ಯವೂ ಸಹ ಉತ್ತಮವಾಗಿರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಅಬಕಾರಿ ಕಮೀಷನರ್ ಬಿಂದುಶ್ರೀ, ಪಿ.ಡಿ.ಓ, ಪಿ.ಪಿ.ಸಿ ಸಂಧ್ಯಾ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಮಾಹೆಯ ಉಪನ್ಯಾಸಕರುಗಳು ಹಾಗೂ ಸಿಬ್ಬಂದಿಗಳು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು, ಕರಾವಳಿ ಪ್ರವಾಸೋದ್ಯಮ ಅಸೋಸಿಯೇಷನ್ ಅಧ್ಯಕ್ಷ ಮನೋಹರ್ ಶೆಟ್ಟಿ, ಕೋಟ ಪಂಚವರ್ಣ ಯುವಕ ಮಂಡಲದ ಸದಸ್ಯರುಗಳು, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ : ಇನ್ನೊಂದು ಧರ್ಮದ ಧರ್ಮಗ್ರಂಥಗಳನ್ನು ಓದಿಕೊಂಡು ಅವರ ಆಚಾರ ವಿಚಾರಗಳು ಮತ್ತು ಭೋಧನೆಗಳನ್ನು ತಿಳಿದುಕೊಂಡಾಗ ಅದರ ಜನರ ಬಗ್ಗೆ ಗೌರವ ಪ್ರೀತಿ ಮತ್ತು ವಿಶ್ವಾಸ ಹುಟ್ಟುತ್ತದೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ ಹೇಳಿದರು.
ಅವರು ಚರ್ಚಿನ ಸಭಾಂಗಣದಲ್ಲಿ ಜಮಾತೆ-ಇಸ್ಲಾಮಿ-ಹಿಂದ್ ಇದರ ಮಲ್ಪೆ ಘಟಕದ ನೇತೃತ್ವದಲ್ಲಿ ಪ್ರವಾದಿ ಸಂದೇಶ ಅಭಿಯಾನದ ಪ್ರಯುಕ್ತ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜಗತ್ತಿನ ಎಲ್ಲಾ ಧರ್ಮಗಳು ಮಾನವೀಯತೆ, ಸಾಮರಸ್ಯದ ಬದುಕಿನ ಭೋಧನೆ ಮಾಡುತ್ತವೆ. ಪ್ರವಾದಿ ಮಹಮ್ಮದ್ ಪೈಗಂಬರ್ ಭೋಧಿಸಿದ ದಯೆ, ಕ್ಷಮೆ, ನ್ಯಾಯ ಹಾಗೂ ಸಮಾನತೆ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ಮಾನವ ದ್ವೀಪದಲ್ಲಿ ಬದುಕುತ್ತಿಲ್ಲ, ಬದಲಾಗಿ ಒಂದು ಸಮುದಾಯದಲ್ಲಿ ಬದುಕುತ್ತಿದ್ದೇವೆ. ಆದುದರಿಂದ ನಮಗೆ ಸಮುದಾಯದ ಅಗತ್ಯವಿದೆ, ಹಂಚಿ ಬದುಕುವ ಅಗತ್ಯವಿದೆ. ನಾವು ಪ್ರತಿಯೊಬ್ಬರು ಗೋಡೆಯಲ್ಲಿರುವ ಒಂದು ಇಟ್ಟಿಗೆಯ ಹಾಗೆ. ಒಂದೊಂದು ಇಟ್ಟಿಗೆಯ ಜೋಡಣೆಯಿಂದ ಒಂದು ಗೋಡೆ ನಿಲ್ಲುತ್ತದೆ. ಜೊತೆಯಾಗಿ ನಿಂತರೆ ಯಾವ ಪಂಥಾಹ್ವಾನಗಳನ್ನು ಗೆಲ್ಲಬಹುದು. ಸಮಾಜದಲ್ಲಿ ಇಂದು ಸತ್ಯ, ವಿಶ್ವಾಸ ಮತ್ತು ಸಹಿಷ್ಣುತೆ ಮಾಯವಾಗಿದ್ದು ಅದನ್ನು ಉಳಿಸುವತ್ತ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.
ಹಿಂದೂ ಧರ್ಮದ ಪರವಾಗಿ ಮಾತನಾಡಿದ ತೊಟ್ಟಂ ಸಮನ್ವಯ ಸರ್ವ ಧರ್ಮ ಸಮಿತಿ ಇದರ ಅಧ್ಯಕ್ಷರಾದ ರಮೇಶ್ ತಿಂಗಳಾಯ ಕೂಡಿ ಬಾಳುವುದು ನಮ್ಮ ಪೂರ್ವಜರು ನಮಗೆ ಹಾಕಿಕೊಟ್ಟ ಸಂಸ್ಕೃತಿಯಾಗಿದೆ. ಇಂದು ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದಾಗಿ ಪರಸ್ಪರ ಅಪನಂಬಿಕೆಗಳು ಹುಟ್ಟಿವೆ. ಇದರಿಂದ ಸಮಾಜದಲ್ಲಿ ಕಲುಷಿತ ವಾತಾವರಣ ತುಂಬಿದ್ದು ಸರ್ವ ಧರ್ಮಿಯರು ಒಟ್ಟಾಗಿ ಸೇರಿದಾಗ ಸಹಬಾಳ್ವೆಯ ಸಂದೇಶ ಸಾರಿದಂತಾಗುತ್ತದೆ ಎಂದರು.
ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ಇದರ ಅಧ್ಯಕ್ಷರಾದ ಜನಾಬ್ ಇಸಾಕ್ ಪುತ್ತೂರು ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಯೊಂದು ಧರ್ಮಗ್ರಂಥಗಳು ಇನ್ನೊಬ್ಬರಿಗೆ ನೋವಾಗದಂತೆ ವರ್ತಿಸುವ ಸಂದೇಶವನ್ನು ಸಾರಿದ್ದು ಅದರಂತೆ ಸಮಾಜದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ಪರಸ್ಪರ ಸ್ನೇಹ ಸಂಬಂಧಗಳನ್ನು ಗಟ್ಟಿಗೊಳಿಸುವ ಕೆಲಸಗಳು ನಡೆಯಬೇಕು ಎಂದರು.
ಸಮನ್ವಯ ಸರ್ವಧರ್ಮ ಸಮಿತಿಯ ಕಾರ್ಯದರ್ಶಿ ಲೆಸ್ಲಿ ಅರೋಝಾ, ಮಲ್ಪೆ ಸಿಎಸ್ಐ ಚರ್ಚಿನ ಪಾಸ್ಟರ್ ವಂ|ಎಡ್ವಿನ್ ಸೋನ್ಸ್, ಅಂಬೇಡ್ಕರ್ ಯುವ ಸೇನೆ ಅಧ್ಯಕ್ಷರಾದ ಗಣೇಶ್ ನೆರ್ಗಿ ಉಪಸ್ಥಿತರಿದ್ದರು.
ಮಲ್ಪೆ ಅಬುಬಕ್ಕರ್ ಜಾಮೀಯಾ ಮಸೀದಿ ಇಮಾಮ್ ಮೌಲಾನಾ ಇಮ್ರಾನುಲ್ಲಾ ಖಾನ್ ಮನ್ಸೂರಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆ ಇದರ ಅಧ್ಯಕ್ಷರಾದ ಜನಾಬ್ ಬಿ ಸಿರಾಜ್ ಅಹ್ಮದ್ ಧನ್ಯವಾದವಿತ್ತರು. ಜಿ ಶುಐಬ್ ಮಲ್ಪೆ ಕಾರ್ಯಕ್ರಮ ನಿರೂಪಿಸಿದರು.
ಲೋಕಕಲ್ಯಾಣಾರ್ಥ ಪೇಜಾವರ ಶ್ರೀ ನೇತೃತ್ವದಲ್ಲಿ ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಮಹಾಯಾಗ ಸಂಪನ್ನ
ಉಡುಪಿ : ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರ ನೇತೃತ್ವದಲ್ಲಿ ಅಯೋಧ್ಯೆಯ ರಾಮದೇವರ ಸನ್ನಿಧಿಯಲ್ಲಿ ರಾಮ ತಾರಕ ಯಜ್ಞ ಸಪ್ತಾಹ ಸಂಪನ್ನವಾಗಿದೆ.
ಪಿತೃಪಕ್ಷದ ಸಂದರ್ಭದಲ್ಲಿ ಲೋಕಕಲ್ಯಾಣದ ಸಂಕಲ್ಪವನ್ನಿಟ್ಟುಕೊಂಡು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಈ ಮಹಾಯಾಗ ನಡೆಸಲಾಗಿತ್ತು. ವೈದಿಕರ ಮುಖೇನ ನಡೆಸಿದ ರಾಮತಾರಕ ಯಜ್ಞ ಸಪ್ತಾಹವು ಗುರುವಾರ ನವಮೀ ತಿಥಿ ಪುನರ್ವಸು ನಕ್ಷತ್ರದ ದಿನದಂದೇ ಸಂಪನ್ನಗೊಂಡಿದೆ ಎಂದು ರಾಮಮಂದಿರ ಟ್ರಸ್ಟ್ ವಿಶ್ವಸ್ತರಾದ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಗುರುವಾರ ಅಯೋಧ್ಯೆ ರಾಮಮಂದಿರದ ಯಾಗಶಾಲೆಯಲ್ಲಿ ಒಂದು ವಾರ ನಡೆದ ರಾಮತಾರಕ ಯಜ್ಞ ಪೂರ್ಣಾಹುತಿಯ ನಂತರ ಈ ಸಂದೇಶ ನೀಡಿದ್ದಾರೆ.
ಪೂರ್ಣಾಹುತಿ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿಹಿಂಪ ರಾಷ್ಟ್ರೀಯ ಮುಖಂಡ ಗೋಪಾಲ್ ಜಿ,ಮಂದಿರದ ಅರ್ಚಕ ಪ್ರಮುಖರು, ಶ್ರೀಗಳ ಆಪ್ತ ಕೃಷ್ಣಮೂರ್ತಿ ಭಟ್, ಮೊದಲಾದವರಿದ್ದರು. ಕ್ಷೇತ್ರದಲ್ಲಿ ರಾಮ ದೇವರ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಪೇಜಾವರ ಸ್ವಾಮೀಜಿ ನೇತೃತ್ವದಲ್ಲಿ ವೈದಿಕ ಕಾರ್ಯಗಳು ನಡೆದಿದ್ದವು. ಈಗಲೂ ಕರಾವಳಿಯ ವೈದಿಕರ ಮೂಲಕ ಯಾಗ ಯಜ್ಞಗಳು ಮುಂದುವರೆದಿರುವುದು ವಿಶೇಷ.