Udupi

ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದದ್ದೇ ರೋಚಕ

ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು‌ ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.…

Read more

ಕೊರಗರ ಅಹೋರಾತ್ರಿ ಧರಣಿ ಸತ್ಯಾಗ್ರಹ 6ನೇ ದಿನಕ್ಕೆ; ‘ಉಸ್ತುವಾರಿ ಸಚಿವೆ ಸ್ಥಳಕ್ಕೆ ಬರಬೇಕು’

ಉಡುಪಿ : ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ…

Read more

ಶಿರೂರು ಗುಡ್ಡ ಕುಸಿತ ಪ್ರಕರಣ – ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡಕ್ಕೆ ಬುಲಾವ್

ಉಡುಪಿ : ಉತ್ತರಕನ್ನಡದ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕನ ಹುಡುಕಾಟಕ್ಕಾಗಿ ಮುಳುಗುತಜ್ಞ ಆಪದ್ಭಾಂಧವ ಈಶ್ವ‌ರ್ ಮಲ್ಪೆ ಮತ್ತು ತಂಡ ಶಿರೂರಿಗೆ ತೆರಳಲಿದೆ. ಶಿರೂರು ದುರಂತದಲ್ಲಿ ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ…

Read more

ರಾಜ್ಯ ಸರಕಾರದ ದಿವಾಳಿತನ, ಹಗರಣಗಳನ್ನು ಮರೆಮಾಚಲು ಯತ್ನಿಸುತ್ತಿರುವ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ನಡೆ ಖಂಡನೀಯ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಕೊನೆಯ ಚುನಾವಣೆ ಎಂದು ಡಂಗುರ ಸಾರುತ್ತಾ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸತತ ಎರಡು ಬಾರಿ ಜನತೆಯಿಂದ ತಿರಸ್ಕರಿಸಲ್ಪಟ್ಟು, ಗೌರವಯುತವಾಗಿ ರಾಜಕೀಯ ನಿವೃತ್ತಿ ಪಡೆಯುವ ಬದಲು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ದಿವಾಳಿತನ ಮತ್ತು ಹಗರಣಗಳನ್ನು ಮರೆಮಾಚುವ ದುರುದ್ದೇಶದಿಂದ ಕ್ಷುಲ್ಲಕ…

Read more

ಉಡುಪಿ ನಗರಸಭೆ ವತಿಯಿಂದ ಕಾರ್ಯಾಚರಣೆ : ನಿಷೇಧಿತ ಪ್ಲಾಸ್ಟಿಕ್ ವಶ

ಉಡುಪಿ : ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆಯ ವತಿಯಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದ್ದು, ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ಮಾರ್ಕೆಟಿಂಗ್ ಉದ್ದಿಮೆಯೊಂದರಲ್ಲಿ 415 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಅನ್ನು ಮಂಗಳವಾರ ವಶಕ್ಕೆ ಪಡೆದು…

Read more

ಭಾರೀ ಗಾಳಿಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ : ಮನೆ ಹಾಗೂ 2 ರಿಕ್ಷಾಗಳಿಗೆ ಹಾನಿ : ಲಕ್ಷಾಂತರ ರೂ. ನಷ್ಟ

ಉಡುಪಿ : ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಿಂದ ಮನೆಯ ಮೇಲೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ಆಟೋ ರಿಕ್ಷಾ ಜಖಂಗೊಂಡ ಘಟನೆ ಜು. 26ರಂದು ಶುಕ್ರವಾರ ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಸಂಭವಿಸಿದೆ. ಶುಕ್ರವಾರ ನಸುಕಿನ ವೇಳೆ 2…

Read more

‘ಶ್ರೀಕೃಷ್ಣ ಮಾಸೋತ್ಸವ’ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯುವ ಶ್ರೀಕೃಷ್ಣ ಮಾಸೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ರಾಜಾಂಗಣದಲ್ಲಿ ನಡೆಯಿತು. ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡುತ್ತಾ, ಈ ಬಾರಿ ಉಡುಪಿಯ ಪ್ರಸಿದ್ಧ ಹಬ್ಬವಾದ…

Read more

ಅಪ್ರಾಪ್ತೆಗೆ ಮದುವೆ – ಪತಿ, ಹೆತ್ತವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕಾಪು : ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿ ಮಗುವಿನ ಜನ್ಮಕ್ಕೆ ಕಾರಣನಾದ ಪತಿ ಮತ್ತು ಆತನ ಮನೆಯವರ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಚಾಂದನಿ ಕಾತೂನ್‌ ದೂರುದಾರ ಮಹಿಳೆ. ಆಕೆ ಪತಿ ಇಮ್ತಿಯಾಜ್‌ ದೇವನ್‌ ಹಾಗೂ…

Read more

ಪ್ಯಾರಿಸ್ ಒಲಿಂಪಿಕ್ಸ್ – ಭಾರತದ ಕ್ರೀಡಾಪಟುಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಕೆ

ಉಡುಪಿ : ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಇಂದಿನಿಂದ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲಿ, ಹೆಚ್ಚು ಪದಕಗಳನ್ನು ಜಯಿಸುವಂತಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶುಭಕೋರಿದ್ದಾರೆ. ಜುಲೈ 26 ರಿಂದ ಆಗಸ್ಟ್…

Read more

ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ಮರ: ತಪ್ಪಿದ ಅನಾಹುತ

ಹೆಬ್ರಿ : ಹೆಬ್ರಿ ತಾಲೂಕಿನ ಕುಚ್ಚೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಳಂಜೆ ಎಂಬಲ್ಲಿ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಬಸ್ಸಿನ ಮೇಲೆ ಮರ ಬಿದ್ದು ಬಸ್ಸಿನ ಮುಂದುಗಡೆಯ ಗಾಜು ಸಂಪೂರ್ಣ ಒಡೆದು ಹೋಗಿ ಚಾಲಕನಿಗೆ ತರಚಿದ ಗಾಯಗಳಾಗಿವೆ. ವಿದ್ಯುತ್ ಕಂಬ ತುಂಡಾಗಿದೆ.…

Read more