Udupi

ಮನೆಯಲ್ಲಿ ಅಗ್ನಿ ಅವಘಡ – ಬಾರ್ ಮಾಲಕ ಸಾವು, ಪತ್ನಿ ಗಂಭೀರ

ಉಡುಪಿ : ನಗರದ ಬಾರ್‌ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ…

Read more

ಭಾರತ್ ಸ್ಕೌಟ್ ಮತ್ತು ಗೈಡ್ಸ್  ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರಾಗಿ ಶ್ರೀ ಇಂದ್ರಾಳಿ ಜಯಕರ್ ಶೆಟ್ಟಿ ಪದಗ್ರಹಣ

ಉಡುಪಿ : ಮಾನ್ಯ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಇವರ ಮಾರ್ಗದರ್ಶನ‌ದಿಂದ ಜಿಲ್ಲಾ ಮುಖ್ಯ ಆಯುಕ್ತರಾಗಿ (D.C.C.) ನೂತನವಾಗಿ ಶ್ರೀ ಇಂದ್ರಾಳಿ ಜಯಕರ್ ಶೆಟ್ಟಿರವರ ಪದಗ್ರಹಣ ಕಾರ್ಯಕ್ರಮವು, ಆದಿತ್ಯವಾರದಂದು ಡಾ|ವಿ.ಎಸ್. ಆಚಾರ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಹಾಗೂ ಶಿಬಿರ ಕೇಂದ್ರ,…

Read more

ಜುಲೈ 15ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಉಡುಪಿ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಜು.16 ರಿಂದ 18ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ…

Read more

“ಗುಲಾಬಿ ಹೂ” ಪ್ರತಿಭಟನೆ; “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋಣ”

ಕಾರ್ಕಳ : ಜಿಲ್ಲಾಡಳಿತದ ವತಿಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಪುರಸಭೆ ಸದಸ್ಯ ಶುಭದ ರಾವ್ ಅವರ ಜತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಡಿವೈಎಸ್ಪಿ ಅರವಿಂದ ಕಲಗುಜ್ಜಿ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡ…

Read more

ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡಜರಿತ; ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಹೆಬ್ರಿ : ಭಾರೀ ಮಳೆಗೆ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಇಂದು ಗುಡ್ಡಜರಿದು ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಘಾಟಿಯಲ್ಲಿ ವಾಹನ ಸಂಚಾರ ಕೆಲಹೊತ್ತು ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ರಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ರಸ್ತೆ…

Read more

ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ದೈವದ ಮೊರೆ ಹೋದ ಪಾಕಿಸ್ತಾನ ಮೂಲದ ಕುಟುಂಬ

ಉಡುಪಿ : ಉಡುಪಿಯ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಪಾಕಿಸ್ತಾನ ಮೂಲದ ಕುಟುಂಬವೊಂದು ಇಂದು ಆಗಮಿಸಿ ಪೂಜೆ ಸಲ್ಲಿಸಿದೆ. ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ ವಲಸೆ ಬಂದಿದ್ದ ಕುಟುಂಬ ಇದಾಗಿದೆ. ಯೂಟ್ಯೂಬ್‌ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ…

Read more

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪಡುಬಿದ್ರಿ : ಮೂರು ದಶಕಗಳ ಹಿಂದಿನ ಪ್ರಕರಣವೊಂದರ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಶೀರ್‌ ಅಹಮ್ಮದ್‌ ಎಂಬಾತನನ್ನು ಮಂಗಳೂರಿನ ವೆಲೆನ್ಶಿಯಾ ಬಳಿ ಪಡುಬಿದ್ರಿ ಪೊಲೀಸರು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಜುಲೈ 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.…

Read more

ಕಾರ್ಕಳ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹವಲ್ದಾರಬೆಟ್ಟು ಆಯ್ಕೆ

ಕಾರ್ಕಳ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಲಪಾಡ್, ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ ಇವರ ಶಿಫಾರಸ್ಸಿನ ಮೇರೆಗೆ ಶಶಿಧರ ಹವಲ್ದಾರಬೆಟ್ಟು ಅವರನ್ನು ಕಾರ್ಕಳ ನಗರ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ…

Read more

ಮಂಗಳೂರು MSPTCಗೆ ಸಚಿವೆ ಹೆಬ್ಬಾಳ್ಕರ್ ದಿಢೀರ್ ಭೇಟಿ; ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸೂಚನೆ

ಮಂಗಳೂರು : ಮಂಗಳೂರು ಹೊರವಲಯದ ಮೂಡುಶೆಡ್ಡೆ-ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ)ಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ…

Read more

ಅಯೋಧ್ಯೆಯಲ್ಲಿ ಪೇಜಾವರ ಮಠದಿಂದ ಸಾಮೂಹಿಕ ಬ್ರಹ್ಮೋಪದೇಶ

ಉಡುಪಿ : ಅಯೋಧ್ಯೆಯ ಶ್ರೀ ರಾಮಮಂದಿರದ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಗುರುವಾರ ಅಯೋಧ್ಯೆಯಲ್ಲಿ 25 ಬ್ರಾಹ್ಮಣ ಬಾಲಕರಿಗೆ ಸಾಮೂಹಿಕ ಬ್ರಹ್ಮೋಪದೇಶ ನೆರವೇರಿತು. ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ಕಡುಬಡತನದಲ್ಲಿರುವ ಕುಟುಂಬಗಳ 80ಕ್ಕೂ…

Read more