Udupi

ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ – ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳ ಸ್ಥಾಪನೆ

ಉಡುಪಿ : ಶೈಕ್ಷಣಿಕ ಜೀವನದ ಪ್ರಮುಖ ಘಟ್ಟಗಳಲ್ಲಿ ಎಸೆಸೆಲ್ಸಿ ಒಂದಾಗಿದ್ದು, ಇಂದಿನಿಂದ ಎಪ್ರಿಲ್ 4‌ರವರೆಗೆ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೊದಲ ದಿನವೇ ಪ್ರಥಮ ಭಾಷ ವಿಷಯ ಇದ್ದು, ಕನ್ನಡ ಮಾಧ್ಯಮದ ಬಹುತೇಕರಿಗೆ ಕನ್ನಡ ಪರೀಕ್ಷೆ…

Read more

ಮಹಿಳೆಗೆ ಕಟ್ಟಿ ಹಾಕಿ ಥಳಿತ ಪ್ರಕರಣ – ಮತ್ತಿಬ್ಬರ ಬಂಧನ, ಬೀಟ್ ಕಾನ್‌ಸ್ಟೇಬಲ್‌ಗಳ ಅಮಾನತು

ಮಲ್ಪೆ : ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣದ ತನಿಖೆ ಮುಂದುವರಿದಿದ್ದು, ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಲೀಲಾ ಮತ್ತು ಪಾರ್ವತಿ ಬಂಧಿತರು. ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿದ್ದು…

Read more

ಮಲ್ಪೆ ಘಟನೆ ದುರದೃಷ್ಟಕರ : ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಮಲ್ಪೆ ಬಂದರಿನಲ್ಲಿ ನಡೆದ ಘಟನೆ ತೀರ ದುರದೃಷ್ಟಕರವಾಗಿದ್ದು ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಮೀನುಗಾರಿಕೆ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮ ವಹಿಸಬೇಕಿದೆ ಎಂದು ಉಡುಪಿ ಯಶ್‌ಪಾಲ್ ಸುವರ್ಣ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶದ ಅತೀ…

Read more

ಮೈಕ್ರೋ-ಫೈನಾನ್ಸ್, ಲೇವಾದೇವಿ ಸಂಸ್ಥೆಗಳ ನೋಂದಣಿ ಕಡ್ಡಾಯ – ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್, ಸಾಲ ನೀಡಿಕೆ ಏಜನ್ಸಿ ಹಾಗೂ ಲೇವದೇವಿದಾರರು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ಪ್ರತಿ ಬಂಧಕ) ಆದೇಶ 2025 ನಿಯಮದನ್ವಯ ಜಿಲ್ಲಾ ನೋಂದಣಿ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು…

Read more

ಕೆ. ಸುರೇಂದ್ರ ಶೆಣೈ ಅವರಿಗೆ ಯಕ್ಷಗಾನ ಕಲಾರಾಧಕ ಪ್ರಶಸ್ತಿ

ಉಡುಪಿ : ಎರಡೂವರೆ ದಶಕ ಕಾಂತಾವರ, ಪುತ್ತೂರು, ಬಪ್ಪನಾಡು, ಸುಂಕದಕಟ್ಟೆ, ಸುರತ್ಕಲ್ ಮೇಳಗಳಲ್ಲಿ ಹಾಗು ದೀರ್ಘ ಕಾಲ ಹಲವು ಸಂಘಗಳಲ್ಲಿ ಕಲಾಸೇವೆಗೖದ ತೆಂಕುತಿಟ್ಟಿನ ಹಿರಿಯ ಭಾಗವತ ಕೆ. ಸುರೇಂದ್ರ ಶೆಣೈ ದಂಪತಿಯನ್ನು ಪುರಸ್ಕರಿಸುವ ಕಾರ್ಯಕ್ರಮ ಕೆರ್ವಾಶೆ ಮಹಾಲಿಂಗೇಶ್ವರ ದೇವಳದ ಆವರಣದಲ್ಲಿ ಜರಗಿತು.…

Read more

ಸ್ಪಂದಿಸದ ಸಂಬಂಧಿಕರು, ಆಶ್ರಯ ನೀಡಿದ ಹೊಸಬೆಳಕು

ಉಡುಪಿ : ನಿಟ್ಟೂರಿನಲ್ಲಿ ತಿಂಗಳ ಹಿಂದೆ ಮಲಮೂತ್ರಾದಿ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಕಮಲ ಶೆಟ್ಟಿ ಹಾಗೂ ಮಾನಸಿಕ ಅಸ್ವಸ್ಥ ಮಗ ಅನಿಲ್ ಶೆಟ್ಟಿಯವರನ್ನು ವಿಶು ಶೆಟ್ಟಿ ಅಂಬಲಪಾಡಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಇದೀಗ ವೃದ್ದ ತಾಯಿಯನ್ನು ಆಸ್ಪತ್ರೆಯಿಂದ…

Read more

ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿಯಿಂದ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ

ಉಡುಪಿ : ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಟೌನ್ ಹಾಲ್‌ನಲ್ಲಿ ಅದ್ದೂರಿ ಇಫ್ತಾರ್ ಸಮಾರಂಭವನ್ನು ಆಯೋಜಿಸಲಾಯಿತು. ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ವ್ಯಕ್ತಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು, ವಕೀಲರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ…

Read more

ನ್ಯಾಯಾಲಯಕ್ಕೆ ಹಾಜರಾಗದೆ 34 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಾರ್ಕಳ : ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು 34 ವರ್ಷ ಬಳಿಕ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ತೆಂಕ ಎಡಪದವಿನ ಲಿಯೋ ರೋಚ್ (64) ಎಂದು ಗುರುತಿಸಲಾಗಿದೆ.…

Read more

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಸೆಂಟರ್ ಫಾರ್ ಸ್ಟಡೀಸ್ ಆನ್ ಹೆಲ್ದಿ ಏಜಿಂಗ್ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಸಹಯೋಗದೊಂದಿಗೆ, 60 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ…

Read more

ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರಾತಿ – ಸಚಿವ ಪ್ರಿಯಾಂಕ್ ಖರ್ಗೆಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿ ಭಾಗದ ಯುವ ಜನತೆಯ ಬಹುದಶಕದ ಬೇಡಿಕೆಯಾಗಿರುವ ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಯೋಜನೆ ಮಂಜೂರು ಮಾಡುವಂತೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ…

Read more