Udupi

ಟ್ರಾನ್ಸ್‌ಫಾರ್ಮರ್‌ನಿಂದ ಹಾರಿದ ಕಿಡಿ – ಮರಗಿಡಗಳು ಹೊತ್ತಿ ಉರಿದು ಅಪಾರ ಹಾನಿ

ಶಿರ್ವ : ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಿಂದ ಹಾರಿದ ಕಿಡಿಯಿಂದ ಕಾಡಿಕಂಬಳ ನಜರೆತ್‌ನಗರ-ಹಿಂದೂ ರುದ್ರಭೂಮಿ-ಶಿರ್ವ ಹಿಂದೂ ಪ.ಪೂ. ಕಾಲೇಜಿನ ಬಳಿಯ ಪ್ರದೇಶಕ್ಕೆ ಬೆಂಕಿ ತಗಲಿ ಮರಗಿಡಗಳು ಹೊತ್ತಿ ಉರಿದಿದ್ದು, ಅಪಾರ ಹಾನಿ ಸಂಭವಿಸಿದೆ. ರಸ್ತೆ ಬದಿಯಲ್ಲಿರುವ ವಿದ್ಯುತ್‌ ಟ್ರಾನ್ಸ್‌‌ಫಾರ್ಮ್‌‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ…

Read more

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ನೂತನ ವೆಬ್‌ಸೈಟ್ ಅನಾವರಣ

ಪೆರ್ಡೂರು : ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಸಂಭ್ರಮದಿಂದ ನಡೆಯುತ್ತಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ನೂತನ ವೆಬ್‌ಸೈಟ್ ಅನ್ನು ಮಣಿಪಾಲದ ಮಾಹೆಯ ಸಹಕುಲಾಧಿಪತಿಗಳಾದ ಡಾ.…

Read more

2025ರ ಕ್ಯೂಎಸ್ ಸಬ್ಜೆಕ್ಟ್ ಶ್ರೇಯಾಂಕದಲ್ಲಿ ಮಹತ್ವದ ಸಾಧನೆ – ಲೈಫ್ ಸೈನ್ಸಸ್ ಮತ್ತು ಮೆಡಿಸಿನ್ ವಿಭಾಗದಲ್ಲಿ 24 ಸ್ಥಾನಗಳ ಏರಿಕೆ ಕಂಡ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ (ಮಾಹೆ)

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ (ಮಾಹೆ) 2025ನೇ ಸಾಲಿನ ಕ್ವಾಕ್ವರೆಲ್ಲಿ ಸೈಮಂಡ್ಸ್ (ಕ್ಯೂಎಸ್) ವರ್ಲ್ಡ್ ಯುನಿವರ್ಸಿಟಿ ಶ್ರೇಯಾಂಕದಲ್ಲಿ ಉತ್ತಮ ಶ್ರೇಯಾಂಕಗಳನ್ನು ಗಳಿಸಿ ಮಹತ್ತರ ಸಾಧನೆ ಮಾಡಿದೆ. ಮಾಹೆ ಎಂಟು ಸೀಮಿತ ವಿಷಯಗಳಲ್ಲಿ ಮತ್ತು ಒಂದು ವಿಸ್ತಾರ ವಿಷಯದಲ್ಲಿ…

Read more

ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ : ಮಾ.16ರಂದು ಶ್ರೀಮನ್ಮಹಾರಥೋತ್ಸವ, ಮಾ.17ರಂದು ಆರಾಟೋತ್ಸವ

ಉಡುಪಿ : ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಮಾ.19ರವರೆಗೆ ಕ್ಷೇತ್ರದ ತಂತ್ರಿಗಳಾದ ಕೆ.ಜಿ. ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಪಿ.ಕೃಷ್ಣ ಅಡಿಗ ಅವರ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಮಾ.13ರಂದು ಧ್ವಜಾರೋಹಣ, ಅಗ್ನಿಜನನ,…

Read more

ಎರ್ನಾಕುಲಂ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲುಗಳು ಕುಂದಾಪುರದಲ್ಲಿ ನಿಲುಗಡೆ – ಸಂಸದ ಕೋಟ

ಉಡುಪಿ : ದೇಶದ ರಾಜಧಾನಿ ದೆಹಲಿಗೆ ಹಗಲು ವೇಳೆಯಲ್ಲಿ ಸಂಚರಿಸುವ ಪ್ರಯಾಣಿಕರಿಗಾಗಿ ಮತ್ತು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ ಬೇಕು ಎನ್ನುವುದು ಸಾರ್ವಜನಿಕರ ಮತ್ತು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ…

Read more

ಮಕ್ಕಳ ರಕ್ಷಣೆಗೆ ಇರುವ ಕಾಯ್ದೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು – ನ್ಯಾ. ಕಿರಣ್ ಎಸ್. ಗಂಗಣ್ಣನವರ್

ಉಡುಪಿ : ತಂದೆ, ತಾಯಿಗಳ ಮಧ್ಯೆ ವಿರಸ ಉಂಟಾದಾಗ ಮಕ್ಕಳಲ್ಲಿ ಅಸುರಕ್ಷಿತ ಭಾವನೆ ಉಂಟಾಗುತ್ತದೆ. ಇದು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇಂತಹ ಸನ್ನಿವೇಶದಲ್ಲಿ ಹಿರಿಯರು ಜಾಗರೂಕತೆ ವಹಿಸಬೇಕು ಎಂದು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ, ಜಿಲ್ಲಾ…

Read more

ಅಧಿಕಾರಿಗಳಿಗೆ ಮಾ.31ರೊಳಗೆ ಇಂದ್ರಾಳಿ ರೈಲ್ವೆ ಮೇಲ್ವೇತುವೆ ಪೂರ್ಣಗೊಳಿಸುವ ವಿಶ್ವಾಸ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾಕಷ್ಟು ಜನಾಕ್ರೋಶಕ್ಕೂ ಕಾರಣವಾಗಿರುವ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮಾರ್ಚ್ 31ರೊಳಗೆ ಪೂರ್ಣ ಗೊಳಿಸುವ ವಿಶ್ವಾಸವನ್ನು ರೈಲ್ವೆ ಇಂಜಿನಿಯರ್‌ಗಳು ಹಾಗೂ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ…

Read more

ತಡರಾತ್ರಿವರೆಗೆ ಧ್ವನಿವರ್ಧಕ ಬಳಕೆ; ಪ್ರಕರಣ ದಾಖಲು

ಉಡುಪಿ : ಬ್ರಹ್ಮಗಿರಿ ಲಯನ್ಸ್ ಭವನದ ಬಳಿ ರಾತ್ರಿ 10 ಗಂಟೆಯ ಅನಂತರವೂ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ನಡೆಸುತ್ತಿದ್ದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ನೆಮ್ಮದಿಗೆ ಭಂಗವಾಗುತ್ತಿರುವ ಬಗ್ಗೆ ಬಂದ ಮಾಹಿತಿಯನುಸಾರ ರಾತ್ರಿ 10.40ರ ಸುಮಾರಿಗೆ ಪೊಲೀಸರು…

Read more

ಮತ್ತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ – ಆರೋಪಿ ಇಸಾಕ್ ಕಾಲಿಗೆ ಪೊಲೀಸರಿಂದ ಗುಂಡೇಟು!

ಮಣಿಪಾಲ : ಇತ್ತೀಚೆಗಷ್ಟೇ ಮಣಿಪಾಲ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಇದಕ್ಕೂ‌ ಮುನ್ನ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಯತ್ನ‌ ನಡೆಸಿದ್ದ…

Read more

ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಸಿಲಿಂಡರ್‌ಗಳ ದುರುಪಯೋಗ : ಗ್ರಾಹಕ ದಕ್ಷತಾ ಕಲ್ಯಾಣ ಫೌಂಡೇಷನ್ ಆರೋಪ

ಉಡುಪಿ : ಉಡುಪಿ ಜಿಲ್ಲೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದುರ್ಬಳಕೆ ನಡೆಯುತಿದ್ದು, ಇದರಿಂದ ಸರಕಾರಕ್ಕೆ ಕೋಟ್ಯಾಂತರ ರೂ. ಜಿಎಸ್‌ಟಿ ಹಾಗೂ ಇತರ ರೂಪದ ನಷ್ಟ ಸಂಭವಿಸುತ್ತಿದೆ. ಅಲ್ಲದೇ ಗೃಹ ಬಳಕೆಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ವಾಣಿಜ್ಯ ಬಳಕೆಗೆ…

Read more