Byndoor

ಹಳಿ ಮೇಲೆ ಬಿದ್ದ ಮರ – ಲೋಕೊ ಪೈಲಟ್‌ಗಳ ತುರ್ತು ಕ್ರಮದಿಂದ ತಪ್ಪಿದ ದುರಂತ

ಉಡುಪಿ : ಲೋಕೊ ಪೈಲಟ್ಛ್ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು – ಉಡುಪಿ ನಿಲ್ದಾಣಗಳ ನಡುವೆ ಸಂಭವಿಸಿದೆ. ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ…

Read more

ಮರವಂತೆಯಲ್ಲಿ 14ನೆಯ ಶತಮಾನದ ಶಾಸನ ಅಧ್ಯಯನ

ಬೈಂದೂರು : ಮರವಂತೆಯ ಶ್ರೀ ಮಹಾರಾಜ ವರಾಹಸ್ವಾಮಿ ದೇವಾಲಯದಲ್ಲಿನ ಶಾಸನವನ್ನು ಉಪನ್ಯಾಸಕರಾದ ಗಣೇಶ್ ಪ್ರಸಾದ್ ಜಿ. ನಾಯಕ್ ಇವರ ಮಾಹಿತಿಯ ಮೇರೆಗೆ ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನಕ್ಕೆ ಒಳಪಡಿಸಿರುತ್ತಾರೆ. ಗ್ರಾನೈಟ್ ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಶಾಸನದ ಮೇಲ್ಭಾಗದಲ್ಲಿ ಶಿವಲಿಂಗ…

Read more

ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಬಸ್; ವಿದ್ಯಾರ್ಥಿಗಳಿಗೆ ಗಾಯ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಚರಂಡಿಗಿಳಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ದಳಿಮುರ್ಕ್ಕು ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಬಸ್ ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ…

Read more

ಸಮುದ್ರ ತೀರಕ್ಕೆ ಬಂದು ಚಿಕ್ಕಿ ತಿಂದು ಹೋದಂತಾದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಾಕೃತಿಕ ವಿಕೋಪ ವೀಕ್ಷಣೆ : ಯಶ್‌ಪಾಲ್ ಸುವರ್ಣ

ಉಡುಪಿ ಜಿಲ್ಲೆಯ ಜನತೆಯ ತೀವ್ರ ಆಕ್ರೋಶದ ಬಳಿಕ ಒಲ್ಲದ ಮನಸ್ಸಿನಿಂದ ಕಾಟಾಚಾರಕ್ಕೆ ಉಡುಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರವರು ಅಧಿಕಾರಿಗಳೊಡನೆ ನಡೆಸಿದ ಪ್ರಾಕೃತಿಕ ವಿಕೋಪದ ಹಾನಿ ವೀಕ್ಷಣೆ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದು ಚಿಕ್ಕಿ ತಿಂದಂತಾಗಿದೆ ಎಂದು ಉಡುಪಿ…

Read more

ಬೈಂದೂರು ಗುಡ್ಡ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ : ಸೂಕ್ತ ಮುಂಜಾಗರೂಕತಾ ಕ್ರಮಕ್ಕೆ ಸೂಚನೆ

ಬೈಂದೂರು : ಕಳೆದ ಹಲವು ದಿನಗಳಿಂದ ಬೈಂದೂರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಗೆ ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡ ಕಳೆದ ಒಂದು ವಾರದಿಂದ ಕುಸಿಯುತ್ತಿದ್ದು ಅಪಾರ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಸೇರಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ…

Read more

ಬೈಂದೂರಿನಲ್ಲಿ ವಿಪರೀತ ಮಳೆ ಮತ್ತು ನೆರೆ; ಹಲವಾರು ಎಕರೆ ಭತ್ತದ ಕೃಷಿ ನಾಶ

ಬೈಂದೂರು : ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮತ್ತು ನೆರೆಗೆ ತಾಲೂಕಿನ ಹಲವಾರು ಗ್ರಾಮಗಳ ತಗ್ಗುಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಕೆಲವು ಗ್ರಾಮಗಳಲ್ಲಿ ಹಲವಾರು ಎಕರೆ ಕೃಷಿ ಭೂಮಿ ಸಂಪೂರ್ಣ ಹಾಳಾಗಿದೆ. ಸೌಪರ್ಣಿಕ ನದಿ ನೀರಿನ ಪ್ರಮಾಣ ಅಪಾರ ಪ್ರಮಾಣದಲ್ಲಿ…

Read more

ಬೈಂದೂರು ಭಾಗದಲ್ಲಿ ತುಂಬಿ ಹರಿಯುತ್ತಿರುವ ನದಿಗಳಿಂದ ತೀರದ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಪರ್ಕ ಕಡಿತ

ಬೈಂದೂರು : ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಜಾರಿಯಾಗಿದೆ, ಧಾರಾಕಾರ ಮಳೆ ಹನಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೈಂದೂರು ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಮನೆಗಳಲ್ಲಿ ವಾಸಿಸುವ ಜನರಿಗೆ ಸಂಪರ್ಕ ಕಡಿತವಾಗಿದೆ. ನದಿಯ ಪ್ರವಾಹದಿಂದಾಗಿ ಜನರು ತೊಂದರೆಯನ್ನು ಎದುರಿಸುತ್ತಿದ್ದಾರೆ. ಉದ್ದಾಬೆಟ್ಟು,…

Read more

ಎಡೆಬಿಡದೆ ಸುರಿಯುತ್ತಿರುವ ಮಳೆ: ಹಲವು ಕುಟುಂಬಗಳ ಸ್ಥಳಾಂತರ, ಜನಜೀವನ ಅಸ್ತವ್ಯಸ್ತ

ಬ್ರಹ್ಮಾವರ/ಕುಂದಾಪುರ : ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಕ್ಷರಶಃ ಜನಜೀವನ ಅಸ್ತವ್ಯಸ್ತಗೊಂಡಿದೆ. ಕುಂದಾಪುರ, ಬ್ರಹ್ಮಾವರ ಮತ್ತು ಬೈಂದೂರು ತಾಲೂಕಿನಲ್ಲಿ ಮಳೆಯಿಂದ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಕುಂದಾಪುರ ತಾಲೂಕಿನ ಬೇಳೂರು ಗ್ರಾ.ಪಂ. ವ್ಯಾಪ್ತಿಯ ದೇಲಟ್ಟು ಬೈಲಾಡಿ, ತೆಂಕಬೆಟ್ಟು, ಗುಳ್ಳಾಡಿ, ಮೊಗೆಬೆಟ್ಟು…

Read more

ಯಡಮೊಗೆ ಹಾಗೂ ತೊಂಬಟ್ಟುವಿನಲ್ಲಿ ಕಾಲು ಸಂಕ ಉದ್ಘಾಟಿಸಿದ ಗಂಟಿಹೊಳೆ

ಬೈಂದೂರು : ಬೈಂದೂರು ತಾಲ್ಲೂಕಿನ ಯಡಮೊಗೆ ಹಾಗೂ ತೊಂಬಟ್ಟುವಿನಲ್ಲಿ ಕಾಲುಸಂಕವನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಇಂದು ಉದ್ಘಾಟಿಸಿದರು. ಸಮೃದ್ಧ ಬೈಂದೂರು ಪರಿಕಲ್ಪನೆಯಲ್ಲಿ ಬೆಂಗಳೂರಿನ ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ…

Read more

ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ಮಂಜೂರು

ಕುಂದಾಪುರ : ಕುಂದಾಪ್ರ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ…

Read more