Kapu

ಕಾಪು ಹಿಟ್ ಆ್ಯಂಡ್ ರನ್ ಪ್ರಕರಣ; ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸವಾರ; ಆರೋಪಿಯ ಬಂಧನ

ಕಾಪು : ಅತೀ‌ ವೇಗವಾಗಿ ಬಂದ ಥಾರ್ ಜೀಪ್ ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪು ನಿವಾಸಿ…

Read more

ತ್ರೈಮಾಸಿಕ ಕೆ.ಡಿ.ಪಿ ಸಭೆ : ಹಲವು ವಿಷಯಗಳ ಕುರಿತು ಚರ್ಚೆ

ಉಡುಪಿ : ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಉಡುಪಿ ತಾಲೂಕಿನ ಕಾಪು ಕ್ಷೇತ್ರದ 10 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ…

Read more

ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳು ಉಳಿಯಾರಗೋಳಿ ಕಾಪು ಇದರ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ; ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ : ಎಂ.ಆರ್.ಜಿ ಗ್ರೂಪ್ ಅಧ್ಯಕ್ಷರಾದ ಡಾ. ಬಂಜಾರ ಪ್ರಕಾಶ್ ಶೆಟ್ಟಿ, ಮಂಗಳೂರು ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಾಧಿಪತಿಗಳಾದ ಡಾ. ಎಂ ಶಾಂತಾರಾಮ್ ಶೆಟ್ಟಿ, ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್ ಬಲ್ಲಾಳ್, ಮಸ್ಕತ್ ಮಲ್ಟಿಟೆಚ್ ಗ್ರೂಪ್ ಸಂಸ್ಥಾಪಕರಾದ ದಿವಾಕರ್…

Read more

ವಾಟ್ಸಪ್‌ ವೀಡಿಯೋ ಮೂಲಕ ಬೆದರಿಸಿ ಲಕ್ಷಾಂತರ ರೂ. ವಂಚನೆ

ಶಿರ್ವ : ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಮಹಿಳೆಯೋರ್ವರಿಗೆ ಪಾರ್ಸೆಲ್‌ನಲ್ಲಿ ಡ್ರಗ್ಸ್‌ ಇದೆ ಎಂದು ಹೇಳಿ ಸ್ಕೈಫ್‌ ಆಫ್‌ ಕನೆಕ್ಟ್, ವಾಟ್ಸ್‌ ಆಪ್‌ ವೀಡಿಯೋ ಮೂಲಕ ಅರೆಸ್ಟ್‌ ಎಂದು ಬೆದರಿಸಿ ರೂ. 11,87,463 ಹಣವನ್ನು ಮೋಸದಿಂದ ವಂಚಿಸಿದ ಘಟನೆ ನಡೆದಿದೆ. ಪ್ರಮೀಳಾ…

Read more

ಬಿಳಿಯಾರು ಬಳಿ ಜುಗಾರಿ ಆಡುತ್ತಿದ್ದ 9 ಮಂದಿ ಬಂಧನ

ಶಿರ್ವ : ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬಿಳಿಯಾರು ಹಾಡಿ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಿರತರಾಗಿದ್ದ 9 ಮಂದಿಯನ್ನು ಶಿರ್ವ ಠಾಣೆಯ ಪಿಎಸ್‌ಐ ಅನಿಲ್‌ ಕುಮಾರ್‌ ಟಿ. ನಾಯ್ಕ್‌ (ತನಿಖೆ) ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಆರೋಪಿಗಳಾದ…

Read more

ಅದಮಾರು ಶಾಲಾ ವಿದ್ಯಾರ್ಥಿಗೆ ಅಟೋ ರಿಕ್ಷಾ ಢಿಕ್ಕಿ – ಕಾಲುಗಳಿಗೆ ಗಂಭೀರ ಗಾಯ; ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆ

ಪಡುಬಿದ್ರಿ : ಅಟೋ ರಿಕ್ಷಾ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅದಮಾರು ಪೂರ್ಣಪ್ರಜ್ಞಾ ಶಾಲಾ ಆಂಗ್ಲ ಮಾಧ್ಯಮ ವಿಭಾಗದ ಒಂದನೇ ತರಗತಿ ವಿದ್ಯಾರ್ಥಿಗೆ ರಿಕ್ಷಾ ಢಿಕ್ಕಿಹೊಡೆದ ಪರಿಣಾಮ ಎರಡೂ ಕಾಲಿಗೂ ಗಂಭೀರ ಗಾಯಗಳಾದ ಘಟನೆ ಶಾಲಾ ಆವರಣದಲ್ಲೇ ಸಂಭವಿಸಿದೆ. ಗಾಯಗೊಂಡ ಬಾಲಕ ಎರ್ಮಾಳು…

Read more

ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ. ಕೇಂದ್ರ ಸರಕಾರಕ್ಕೆ…

Read more

ಕೋಳಿ ಅಂಕಕ್ಕೆ ಖಾಕಿ ರೇಡ್ : ಏಳು ಮಂದಿ ಅಂದರ್

ಶಿರ್ವ : ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದ ಘಟನೆ ಮೂಡುಬೆಳ್ಳೆ ಗೂಡುದೊಟ್ಟು ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ವಿಜಯ್ ಪ್ರಕಾಶ್ ಕ್ವಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್ ಮೆಂಡೋನ್ಸ್‌, ಪ್ರಜ್ವಲ್ ಜೋಸೆಫ್‌ ಮಾರ್ಟೀಸ್, ಪ್ರದೀಪ್, ಸಂತೋಷ್, ಸುಜಿತ್ಯ…

Read more

ಕಸಾಪದಿಂದ ದೇವದಾಸ್ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಪುರಸ್ಕಾರ

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆಯ ರೂವಾರಿ, ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಪುರಸ್ಕಾರ…

Read more

ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷದ ವಿಡಿಯೋ ವೈರಲ್

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವೇಷಧಾರಿಗಳಿಬ್ಬರು ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷಧರಿಸಿದ್ದು, ಇದೀಗ ಈ ವೇಷ ಸಾಮಾಜಿಕ ಜಾಲತಾಣದಲ್ಲಿ ಭಾರೀ‌ ವೈರಲ್ ಆಗಿದೆ. ವಿಡಿಯೋ ತುಣುಕಿನಲ್ಲಿ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷ…

Read more