Kundapura

ವಿಮಾ ಪರಿಹಾರ ನೀಡದ ಇನ್ಶುರೆನ್ಸ್‌ ಕಂಪೆನಿ; ಸಂಪೂರ್ಣ ಮೊತ್ತ ಬಡ್ಡಿ ಜತೆ ನೀಡುವಂತೆ ಆದೇಶ

ಉಡುಪಿ : ಗೃಹ ನಿರ್ಮಾಣ ಸಾಲದ ಸಂದರ್ಭದಲ್ಲಿ ಮಾಡಿದ ‘ಸಾಲ ರಕ್ಷಣ ವಿಮಾ ಯೋಜನೆ’ ಅಡಿಯಲ್ಲಿ ವಿಮಾ ಪರಿಹಾರ ನೀಡದ ಇನ್ಶುರೆನ್ಸ್‌ ಕಂಪೆನಿಗೆ ಸಾಲದ ಸಂಪೂರ್ಣ ಮೊತ್ತವನ್ನು ಬಡ್ಡಿಯೊಂದಿಗೆ ಬ್ಯಾಂಕಿಗೆ ನೀಡಲು ಉಡುಪಿ ಗ್ರಾಹಕ ಆಯೋಗ ಆದೇಶಿಸಿದೆ. ಕುಂದಾಪುರ ತಾಲೂಕು ನೂಜಾಡಿಯ…

Read more

ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಯುವಕರು; ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕುಂದಾಪುರ : ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಈ ಘಟನೆ ನಡೆದಿದೆ. ಗುರುವಾರ ಬೆಳಿಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ…

Read more

ಕೋಟ ವರುಣತೀರ್ಥ ಕೆರೆ ನವೀಕರಣ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲನೆ

ಕೋಟ : ಕೋಟದ ವರುಣತೀರ್ಥ ಕೆರೆ ನವೀಕರಣಗೊಳ್ಳುವ ಕೊನೆಯ ಹಂತದಲ್ಲಿದ್ದು ಈ ಹಿನ್ನಲ್ಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆರೆಯ ಪೂರ್ವ ದಿಕ್ಕಿನಲ್ಲಿರುವ ರಸ್ತೆ ನೀರನ್ನು…

Read more

37 ಮರಳು ಬ್ಲಾಕ್‌ಗಳಲ್ಲಿ ಮರಳು ತೆರವುಗೊಳಿಸಲು ಆಶಯ ಪತ್ರ ವಿತರಣೆ : ಸಿಇಓ ಬಾಯಲ್

ಉಡುಪಿ : ಜಿಲ್ಲೆಯ ಹಳ್ಳ ತೊರೆ ಮತ್ತು ಕೆರೆಗಳಲ್ಲಿ ಗುರುತಿಸಿರುವ ಮರಳು ಬ್ಲಾಕ್‌ಗಳಲ್ಲಿ ಮರಳು ತೆರವುಗೊಳಿಸುವ ಕುರಿತು ಈಗಾಗಲೇ ಆಶಯ ಪತ್ರ ನೀಡಲಾಗಿದೆ. ಇನ್ನುಳಿದ ಕೆಲವು ಪ್ರದೇಶಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಹೂಳೆತ್ತುವ ಸಂಬಂಧ ಕ್ರಮ…

Read more

ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕುಂದಾಪುರ : ಆನಗಳ್ಳಿ ಗ್ರಾಮದ ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಸುಮಾರು 65-70 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ವಾರಸುದಾರರು ಪತ್ತೆಯಾಗದ ಹಿನ್ನೆಲೆ ಮೃತ ಶರೀರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣ ಘಟಕದಲ್ಲಿ ಇರಿಸಲಾಗಿದೆ. ಈ ವ್ಯಕ್ತಿಯು…

Read more

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು

ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್‌ ಬಳಿಯ ನಿವಾಸಿ ಅರುಣ್‌ (34)…

Read more

ರಾ.ಹೆ.66ರಲ್ಲಿ ಸರ್ವಿಸ್‌ ರಸ್ತೆ ನಿರ್ಮಿಸಲು ವಾರದೊಳಗೆ ಡಿಪಿಆರ್‌ : ವಿ.ಪಿ.ಬ್ರಹ್ಮಣಕರ್‌

ಉಡುಪಿ : ಬ್ರಹ್ಮಾವರ ಮೇಲ್ಸೇತುವೆ, ಹೆಜಮಾಡಿ ಹಾಗೂ ಕುಂದಾಪುರ‌ದವರೆಗಿನ ಸರ್ವಿಸ್‌ ರಸ್ತೆಯ ಯೋಜನಾ ವರದಿಯನ್ನು ತಯಾರಿಸಿ ವಾರದೊಳಗೆ ಕೇಂದ್ರಕ್ಕೆ ಕಳುಹಿಸಿ ಕೊಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿ.ಪಿ. ಬ್ರಹ್ಮಣಕರ್‌ ತಿಳಿಸಿದ್ದಾರೆ. ಬ್ರಹ್ಮಾವರವೂ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 66‌ರಲ್ಲಿ ನಿರಂತರ…

Read more

ಅಕ್ರಮ ಮರಳು ಸಾಗಾಟ ಪತ್ತೆ; 9 ಸಾವಿರ ರೂ. ಮೌಲ್ಯದ 3 ಯುನಿಟ್‌ ಮರಳು ಸಹಿತ ಟಿಪ್ಪರ್‌ ವಶ

ಕುಂದಾಪುರ : ಜಪ್ತಿ ಗಾಲವೇಶ್ವರ ದೇವಸ್ಥಾನದ ರಸ್ತೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಟಿಪ್ಪರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಠಾಣೆ ಎಸ್‌ಐ ಭೀಮಾಶಂಕರ ಸಿನ್ನೂರ, ಟಿಪ್ಪರ್‌ ವಾಹನ ನಿಲ್ಲಿಸಲು ಸೂಚಿಸಿದಾಗ ಟಿಪ್ಪರ್‌ ಚಾಲಕ ನಿಲ್ಲಿಸದೇ ಇಂಬಾಳಿ ಕ್ರಾಸ್‌ಗೆ ತೆಗೆದುಕೊಂಡು ಹೋಗಿದ್ದ. ಅಡ್ಡಗಟ್ಟಿ ನಿಲ್ಲಿಸಿದಾಗ…

Read more

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ 196 ಬಿಎಸ್‌ಎನ್‌ಎಲ್‌ ಟವರ್‌ಗಳ ಪೈಕಿ 73ರಲ್ಲಿ ಬ್ಯಾಟರಿ ಬ್ಯಾಕಪ್ ಇಲ್ಲ ಎಂಬ ಮಾಹಿತಿಯನ್ನು ಬಿಎಸ್‌ಎನ್‌ಎಲ್ ಅಧಿಕಾರಿಗಳು ಕುಂದಾಪುರ ತಾಪಂ ಸಭಾಂಗಣ‌ದಲ್ಲಿ ನಡೆದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟವನ್ನು ಉತ್ತಮಗೊಳಿಸುವಿಕೆ…

Read more

ಕೋಟದಲ್ಲಿ ಎರಡು ದಿನಗಳ ಯಕ್ಷ ತ್ರಿವಳಿ ಮಕ್ಕಳ ಯಕ್ಷೋತ್ಸವ ಉದ್ಘಾಟನೆ

ಉಡುಪಿ : ಯಕ್ಷಗಾನ ಕಲೆಯ ಬೆಳವಣಿಗೆಗೆ ವಿವಿಧ ಕಾರ್ಯಾಗಾರಗಳ ಮೂಲಕ ಪ್ರೋತ್ಸಾಹ ನೀಡುತ್ತಿರುವ ಯಕ್ಷಗಾನ ಅಕಾಡೆಮಿ ಅಭಿನಂದನಾರ್ಹ. ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆ ಸರಕಾರದಿಂದ ಸಿಗುವ ಸರಕಾರಿ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.…

Read more