Kundapura

ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ : ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ ಉಳಿಯುವಂತಾಗಬೇಕಾದರೆ ಶಾಲಾ-ಕಾಲೇಜುಗಳ ಪಠ್ಯಕ್ರಮದಲ್ಲಿಯೂ ಈ ಭಾಷೆಯನ್ನು ಅಳವಡಿಸುವಂತಾಗಬೇಕು ಮತ್ತು ಭಾಷೆಯನ್ನು ಬಳಸಿದಾಗ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿಗಳು ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ…

Read more

ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ

ಕೋಟ : ಕೋಟೇಶ್ವರ ಶ್ರೀ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ ಸಲ್ಲಿಸಲಾಯಿತು. ಇತ್ತೀಚಿಗೆ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ…

Read more

ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ. ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ…

Read more

ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

ಕುಂದಾಪುರ : ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಕುಂದಾಪುರದಲ್ಲಿ…

Read more

ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸದಸ್ಯತ್ವ ಅಭಿಯಾನ

ಬಾರ್ಕೂರು : ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸದಸ್ಯತ್ವ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು ಅವರ ಉಪಸ್ಥಿತಿಯಲ್ಲಿ ಇಂದು ಬಾರ್ಕೂರು ಸಂಕಮ್ಮತಾಯಿ ಸಭಾಭವನದಲ್ಲಿ “ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…

Read more

ಕಸ್ತೂರಿ ರಂಗನ್ ವರದಿಗೆ ವಿರೋಧ : ಚಿತ್ತೂರು ಗ್ರಾಪಂ ಸದಸ್ಯರಿಂದ ಉಪಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಕುಂದಾಪುರ : ಕಸ್ತೂರಿ ರಂಗನ್ ವರದಿ ವಿರೋಧಿಸಿ ಕುಂದಾಪುರ ತಾಲೂಕಿನ ಚಿತ್ತೂರು ಗ್ರಾಮ ಪಂಚಾಯತ್‌ನ ಎಲ್ಲ 8 ಸದಸ್ಯರು ಅ.21ರಂದು ನಡೆಯಲಿರುವ ವಿಧಾನ ಪರಿಷತ್‌ ಉಪಚುನಾವಣೆಯನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದಾರೆ. ಮತದಾನ ಬಹಿಷ್ಕರಿಸುವ ನಿರ್ಧಾರ ಮಾಡಿರುವ ಚಿತ್ತೂರು ಗ್ರಾಪಂ ಸದಸ್ಯರು, ವಿವಿಧ…

Read more

ರಸ್ತೆ ಅಪಘಾತ ತಡೆಗಟ್ಟಲು ಕಟ್ಟು ನಿಟ್ಟಿನ ನಿರ್ದೇಶನವನ್ನು ಜಾರಿಗೊಳಿಸಲು ಸಂಚಾರಿ ಠಾಣಾ ಪೊಲೀಸರಿಗೆ ಮನವಿ

ಕುಂದಾಪುರ : ಕುಂದಾಪುರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಟಿಪ್ಪರ್ ಹಾಗೂ ಲಾರಿಗಳು ಅತಿ ವೇಗ ಮತ್ತು ಅಜಾಗರುಕತೆಯಿಂದ ಚಲಿಸುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದ್ದು ಇದಕ್ಕೆ ಮೊನ್ನೆ ನಡೆದ ಕೋಟೇಶ್ವರದ ಪದವಿ ವಿದ್ಯಾರ್ಥಿಯ ಟಿಪ್ಪರ್ ಅಪಘಾತವೇ ಸಾಕ್ಷಿಯಾಗಿದ್ದು ಎಲ್ಲಾ ಚಾಲಕರಿಗೂ ನಗರ…

Read more

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟ : ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ : ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕತಿಕ, ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಪದವಿ ಪೂರ್ವ ಶಿಕ್ಷಣ…

Read more

ನಕಲಿ ವೀಸಾ ನೀಡಿ ಲಕ್ಷಾಂತರ ರೂ ವಂಚನೆ

ಕುಂದಾಪುರ : ಲಕ್ಷಾಂತರ ರೂ. ಹಣ ಪಡೆದು ನಕಲಿ ವೀಸಾ ನೀಡಿ ವಂಚಿಸಿರುವ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಮ್ಮಾಡಿ ಗ್ರಾಮದ ಜೋಸೆಫ್ ಡಿಸೋಜ ಎಂಬವರ ಮಗ ಪ್ರಜ್ವಲ್‌ ಡಿಸೋಜ ವಿದೇಶದಲ್ಲಿ ಉದ್ಯೋಗಕ್ಕೆ ಹೋಗುವ ನಿಟ್ಟಿನಲ್ಲಿ ರಾಬರ್ಟ್ ವಿಲ್ಸನ್…

Read more

ನಡೆದು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು; ಇಬ್ಬರು ಬಚಾವ್

ಕುಂದಾಪುರ : ಕಾಲೇಜು ಮುಗಿಸಿ ಇಬ್ಬರು ಸ್ನೇಹಿತರೊಂದಿಗೆ ಫುಟ್ಬಾತ್ ಇಂಟರ್‌ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಟಿಪ್ಪ‌ರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ…

Read more