Kundapura

ಕುಂದಾಪುರ ಸರ್ವಿಸ್ ರಸ್ತೆಯಲ್ಲಿ ಮರಣ ಕಂದಕ; ದ್ವಿಚಕ್ರ ಸವಾರರ ಪ್ರಾಣಕ್ಕೇ ಕಂಟಕ!

ಕುಂದಾಪುರ : ಸದ್ಯ ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದೆ. ಆದರೆ ಮಳೆಯ ಅವಾಂತರ ಮುಂದುವರೆದಿದೆ. ಕುಂದಾಪುರ ನಗರದ ಹಂಗಳೂರು – ಮೂರುಕೈ ಬಳಿಯ ಸರ್ವಿಸ್ ರಸ್ತೆಯಲ್ಲಿ ಸತತ ಸುರಿದ ಜಡಿ ಮಳೆಗೆ ಕಂದಕವೊಂದು ಸ್ರಷ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಸರತಿಯಂತೆ ಬಿದ್ದು ಗಾಯಗೊಳ್ಳುತ್ತಿದ್ದರೂ…

Read more

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಪುನರ್ವಸು ಮಳೆ ಅಬ್ಬರ; ಜನ, ಜಾನುವಾರುಗಳ ರಕ್ಷಣೆ

ಉಡುಪಿ : ಜಿಲ್ಲೆಯಲ್ಲಿ ನಿನ್ನೆ ಪ್ರಾರಂಭಗೊಂಡ ಮಳೆ ಮುಂದುವರೆದಿದ್ದು ಉಡುಪಿಯ ಹಲವೆಡೆ ಜನ ಜಾನುವಾರುಗಳನ್ನು ಅಗ್ನಿಶಾಮಕ ದಳ ರಕ್ಷಣೆ ಮಾಡಿದೆ. ಮುಖ್ಯವಾಗಿ ತಗ್ಗುಪ್ರದೇಶಗಳಾದ ಬೈಲಕೆರೆ, ಕಲ್ಸಂಕ ಮಠದಬೆಟ್ಟುವಿನ ಬಹುಭಾಗ ಜಲಾವೃತಗೊಂಡಿವೆ. ಗುಂಡಿಬೈಲುವಿನಲ್ಲಿ ನೆರೆ ನೀರು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದ್ದ ಅಗ್ನಿಶಾಮಕ…

Read more

ಯಕ್ಷಗಾನ ಕಲಾರಂಗದ 54ನೆಯ ಮನೆಯ ಉದ್ಘಾಟನೆ

ಕುಂದಾಪುರ : ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು. ಉಳಿದ ಸಂಘಟನೆಗಳಿಗೆ ಮಾದರಿಯಾಗುವಂತೆ, ಸಮಾಜಮುಖಿಯಾಗಿ 50 ವರ್ಷಗಳನ್ನು ಉತ್ತರಿಸಿದ್ದು, ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ, ಎಂದು ಪೇಜಾವರ…

Read more

ವಿಶ್ವ ಪ್ರಸಿದ್ಧ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರಿಂದ ಹುಚ್ಚಾಟ, ಪೊಲೀಸರಿಂದ ಸುರಕ್ಷತೆಯ ಪಾಠ

ಕುಂದಾಪುರ : ಉಡುಪಿ ಜಿಲ್ಲೆಯ ವಿಶ್ವ ಪ್ರಸಿದ್ಧ ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟವು ತೀವ್ರತೆ ಪಡೆದುಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ದವಾಗಿದ್ದು, ಪ್ರವಾಸಿಗರು ಬೀಚ್ ಸೆಕ್ಯೂರಿಟಿ ಮಾತಿಗೂ ಬೆಲೆ ಕೊಡದೆ ಸಮುದ್ರಕ್ಕೆ ಇಳಿಯುತ್ತಿದ್ದಾರೆ. ಗಂಗೊಳ್ಳಿ ಠಾಣೆಯ…

Read more

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ

ಗಂಗೊಳ್ಳಿ : ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ…

Read more

ವ್ಯಾಪಕ ಮಳೆ : ಇಂದು ಬೈಂದೂರು, ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಭಾರೀ ವರ್ಷಧಾರೆ ಆಗುತ್ತಿದ್ದು, ನೆರೆ ಭೀತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ…

Read more

ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್; ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಪರಿಹಾರಕ್ಕೆ ಸುವರ್ಣಾವಕಾಶ

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ನಿರ್ದೇಶನದ ಮೇರೆಗೆ ಇದೇ ಜುಲೈ 13ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು…

Read more

ಭಾರಿ ಮಳೆಗೆ ಬೈಂದೂರಿನ ಹಲವೆಡೆ ನೆರೆ; ನಾವುಂದ, ಸಾಲ್ಬುಡ, ಬಡಾಕೆರೆ ಭಾಗದ ಜನರಿಗೆ ಜಲ ದಿಗ್ಭಂಧನ

ಕುಂದಾಪುರ : ಪ್ರತಿ ವರ್ಷ ಮಳೆಗಾಲ ಬಂದರೆ ನಮಗೆ ಸಮಸ್ಯೆ ತಪ್ಪಿದ್ದಲ್ಲ. ಮಳೆಗಾಲದಲ್ಲಿ ಇಲ್ಲಿನ ನೂರಕ್ಕೂ ಅಧಿಕ‌ ಮನೆಯವರಿಗೆ ತಲೆನೋವು ಕಟ್ಟಿಟ್ಟಬುತ್ತಿ. ಹೆಚ್ಚುಕಮ್ಮಿ ನಾಲ್ಕೈದು ದಿನವಾದರೂ ಮನೆ ಬಿಟ್ಟು ಹೊರಬಾರಲಾಗದ ದುಸ್ಥಿತಿ. ಹಿಡಿ ಉಪ್ಪು, ದಿನಸಿ, ತರಕಾರಿ ತರಬೇಕಾದರೂ ಕೂಡ ದೋಣಿ…

Read more

ಜಿಲ್ಲೆಯಲ್ಲಿ ಗಾಳಿ, ಮಳೆ ಹಾನಿ – ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ ಹೆಬ್ಬಾಳಕರ್

ಉಡುಪಿ : ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸದ್ಯದ ಪರಿಸ್ಥಿತಿಯ…

Read more

ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿ; ಕೋಟ್ಯಂತರ ರೂ.ನಷ್ಟ

ಕುಂದಾಪುರ : ಪಶ್ಚಿಮಘಟ್ಟದ ತಪ್ಪಲಿನ ಪ್ರದೇಶವಾದ ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿಗೆ ಅಪಾರ ಪ್ರಮಾಣದ ಕೃಷಿ, ಮನೆ, ದನದ ಕೊಟ್ಟಿಗೆಗಳು, ನೂರಾರು ವಿದ್ಯುತ್ ಕಂಬಗಳಿಗೆ ಹಾನಿಯಾಗಿಯಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

Read more