ಉಡುಪಿ : ತೆಂಕನಿಡಿಯೂರು ಸರಕಾರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ರೋಶನ್ ಶೆಟ್ಟಿ ಅವರನ್ನು ಜಿಲ್ಲೆಯ ಗೃಹ ರಕ್ಷಕ ದಳ ಗೌರವ ಸಮಾದೇಷ್ಟರನ್ನಾಗಿ ರಾಜ್ಯ ಸರಕಾರ ನೇಮಿಸಿದೆ.
ಇವರು ಜಿಲ್ಲಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಉಡುಪಿ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ “ಕೃಷಿ ಮೇಳ-2024” ಅನ್ನು ಇದೇ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಧನಂಜಯ ಬಿ. ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅ.26ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಆನಂದ ಸಿ. ಕುಂದರ್ ಕೃಷಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್, ಕೃಷಿ ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ. ಗುರುಮೂರ್ತಿ, ಸಂಶೋಧನಾ ನಿರ್ದೇಶಕ ಡಾ. ಬಿ.ಎಂ. ದುಶ್ಯಂತ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಮೊದಲ ದಿನ ಮಧ್ಯಾಹ್ನ 2 ಗಂಟೆಯಿಂದ ಅಡಿಕೆ ಆಧಾರಿತ ಕೃಷಿ” ಮತ್ತು “ಜೇನು ಕೃಷಿ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಎರಡನೇ ದಿನ ಬೆಳಿಗ್ಗೆ 10ಗಂಟೆಗೆ “ವಿಕಸಿತ ಕೃಷಿಯಲ್ಲಿ ಕೃಷಿ ಮತ್ತು ಪಶು ಸಖಿಯರು” ಮತ್ತು ಮಧ್ಯಾಹ್ನ 2 ಗಂಟೆಗೆ “ಅಡಿಕೆ ಮತ್ತು ಹಲಸಿನಲ್ಲಿ ಮೌಲ್ಯವರ್ಧನೆ” ಎಂಬ ವಿಷಯದ ಕುರಿತ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಕೃಷಿ ಮೇಳದಲ್ಲಿ 200ಕ್ಕೂ ಅಧಿಕ ಮಳಿಗೆಗಳಿದ್ದು, ಅದರಲ್ಲಿ ವಿವಿಧ ಇಲಾಖೆ, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ಅಭಿವೃದ್ಧಿ ಪಡಿಸಿರುವ ಕೃಷಿ ತಂತ್ರಜ್ಞಾನಗಳ ಮತ್ತು ಕೃಷಿ ಪರಿಕರಗಳ ವಸ್ತು ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಪ್ರಧಾನ ಸಂಶೋಧಕ ಡಾ. ಕೆ.ವಿ. ಸುಧೀರ್ ಕಾಮತ್ ಮಾತನಾಡಿ, ಈ ವರ್ಷದ ಕೃಷಿಮೇಳದಲ್ಲಿ ಕೃಷಿಕರಿಗಾಗಿ ನಮ್ಮ ಕೇಂದ್ರದಿಂದ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆ ಮಾಡಲಾಗಿರುವ ಭತ್ತದ ತಳಿಗಳಾದ ಸಹ್ಯಾದ್ರಿ ಬ್ರಹ್ಮ, ಸಹ್ಯಾದ್ರಿ ಪಂಚಮುಖಿ, ಸಹ್ಯಾದ್ರಿ ಸಪ್ತಮಿ, ಕಜೆ 25-9 ಹಾಗೂ ಕೇಂದ್ರದಲ್ಲಿ ಪ್ರಸ್ತುತ ಪ್ರಯೋಗಗಳಲ್ಲಿ ತೊಡಗಿಸಲಾಗಿರುವ ಇತರ ಭತ್ತದ ತಳಿಗಳನ್ನು ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿರುತ್ತದೆ. ಇದೇ ಸಂದರ್ಭದಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದಿಂದ ಬಿಡುಗಡೆ ಮಾಡಿರುವಂತಹ ಕೃಷಿ ಯಂತ್ರೋಪಕರಣಗಳಾದ ಸುಧಾರಿತ ಕೊನೋ ವೀಡರ್, ಛತ್ತದಲ್ಲಿ ಕಳೆ ತೆಗೆಯುವ ಯಂತ್ರ, ಪವರ್ ಟಿಲ್ಲರ್ ಚಾಲಿತ ಮಣ್ಣು ದಬ್ಬುವ ಯಂತ್ರ ಹಾಗೂ ಕಾಡು ಪ್ರಾಣಿಗಳ ಹಾವಳಿ ಕುರಿತು ಮಾಲಿಕರನ್ನು ಎಚ್ಚರಿಸುವ ಸ್ವಯಂ ಚಾಲಿತ ವ್ಯವಸ್ಥೆ ಮುಂತಾದ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯ ಮಾಡಿಕೊಡಲಾಗುವುದು. ಈ ಕೃಷಿಮೇಳದ ವಿಶೇಷ ಆಕರ್ಷಣೆಗಳೆಂದರೆ ಕೃಷಿಯಲ್ಲಿ ಡೋನ್ ಬಳಕೆಯ ಪ್ರಾತ್ಯಕ್ಷಿಕೆ, ಸಿಓ-4, 5 ಮತ್ತು ಸಿಓಎಫ್ಎಸ್.-29, 31 ಹಾಗೂ ಸೂಪರ್ ನೇಪಿಯರ್ ಮೇವಿನ ಬೆಳೆಗಳ ಪ್ರಾತ್ಯಕ್ಷಿಕೆ, ತೆಂಗಿನಲ್ಲಿ ಬಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ, ತೋಟಗಾರಿಕೆ ಬೆಳೆಗಳಲ್ಲಿ ಕಸಿಕಟ್ಟುವಿಕೆ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರಗೊಬ್ಬರ, ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಕೋಳಿ ಮತ್ತು ಬಾತುಕೋಳಿ ಸಾಕಾಣಿಕೆಗಳ ಪ್ರಾತ್ಯಕ್ಷಿಕೆ, ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ, ಜೈವಿಕ ಅನಿಲ ಉತ್ಪಾದನಾ ಘಟಕಗಳು, ಅಲಂಕಾರಿಕೆ ಮತ್ತು ಹೂವಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಆಕರ್ಷಕ ಕೃಷಿ ವಸ್ತು ಪ್ರದರ್ಶನಗಳೂ ಇರುತ್ತವೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಎಂ. ಶಂಕರ್, ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲಕ್ಷಣ್ ಇದ್ದರು.
ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ “ಕೃಷಿ ಮೇಳ-2024” ಅನ್ನು ಇದೇ ಅ. 26 ಮತ್ತು 27ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಧನಂಜಯ ಬಿ. ತಿಳಿಸಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅ.26ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕೃಷಿ ಮೇಳವನ್ನು ಉದ್ಘಾಟಿಸಲಿದ್ದಾರೆ. ಉದ್ಯಮಿ ಆನಂದ ಸಿ. ಕುಂದರ್ ಕೃಷಿ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್. ಸಿ. ಜಗದೀಶ್, ಕೃಷಿ ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ. ಗುರುಮೂರ್ತಿ, ಸಂಶೋಧನಾ ನಿರ್ದೇಶಕ ಡಾ. ಬಿ.ಎಂ. ದುಶ್ಯಂತ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಮೊದಲ ದಿನ ಮಧ್ಯಾಹ್ನ 2 ಗಂಟೆಯಿಂದ ಅಡಿಕೆ ಆಧಾರಿತ ಕೃಷಿ” ಮತ್ತು “ಜೇನು ಕೃಷಿ” ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಎರಡನೇ ದಿನ ಬೆಳಿಗ್ಗೆ 10ಗಂಟೆಗೆ “ವಿಕಸಿತ ಕೃಷಿಯಲ್ಲಿ ಕೃಷಿ ಮತ್ತು ಪಶು ಸಖಿಯರು” ಮತ್ತು ಮಧ್ಯಾಹ್ನ 2 ಗಂಟೆಗೆ “ಅಡಿಕೆ ಮತ್ತು ಹಲಸಿನಲ್ಲಿ ಮೌಲ್ಯವರ್ಧನೆ” ಎಂಬ ವಿಷಯದ ಕುರಿತ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಕೃಷಿ ಮೇಳದಲ್ಲಿ 200ಕ್ಕೂ ಅಧಿಕ ಮಳಿಗೆಗಳಿದ್ದು, ಅದರಲ್ಲಿ ವಿವಿಧ ಇಲಾಖೆ, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ಅಭಿವೃದ್ಧಿ ಪಡಿಸಿರುವ ಕೃಷಿ ತಂತ್ರಜ್ಞಾನಗಳ ಮತ್ತು ಕೃಷಿ ಪರಿಕರಗಳ ವಸ್ತು ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಪ್ರಧಾನ ಸಂಶೋಧಕ ಡಾ. ಕೆ.ವಿ. ಸುಧೀರ್ ಕಾಮತ್ ಮಾತನಾಡಿ, ಈ ವರ್ಷದ ಕೃಷಿಮೇಳದಲ್ಲಿ ಕೃಷಿಕರಿಗಾಗಿ ನಮ್ಮ ಕೇಂದ್ರದಿಂದ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆ ಮಾಡಲಾಗಿರುವ ಭತ್ತದ ತಳಿಗಳಾದ ಸಹ್ಯಾದ್ರಿ ಬ್ರಹ್ಮ, ಸಹ್ಯಾದ್ರಿ ಪಂಚಮುಖಿ, ಸಹ್ಯಾದ್ರಿ ಸಪ್ತಮಿ, ಕಜೆ 25-9 ಹಾಗೂ ಕೇಂದ್ರದಲ್ಲಿ ಪ್ರಸ್ತುತ ಪ್ರಯೋಗಗಳಲ್ಲಿ ತೊಡಗಿಸಲಾಗಿರುವ ಇತರ ಭತ್ತದ ತಳಿಗಳನ್ನು ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿರುತ್ತದೆ. ಇದೇ ಸಂದರ್ಭದಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದಿಂದ ಬಿಡುಗಡೆ ಮಾಡಿರುವಂತಹ ಕೃಷಿ ಯಂತ್ರೋಪಕರಣಗಳಾದ ಸುಧಾರಿತ ಕೊನೋ ವೀಡರ್, ಛತ್ತದಲ್ಲಿ ಕಳೆ ತೆಗೆಯುವ ಯಂತ್ರ, ಪವರ್ ಟಿಲ್ಲರ್ ಚಾಲಿತ ಮಣ್ಣು ದಬ್ಬುವ ಯಂತ್ರ ಹಾಗೂ ಕಾಡು ಪ್ರಾಣಿಗಳ ಹಾವಳಿ ಕುರಿತು ಮಾಲಿಕರನ್ನು ಎಚ್ಚರಿಸುವ ಸ್ವಯಂ ಚಾಲಿತ ವ್ಯವಸ್ಥೆ ಮುಂತಾದ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಪರಿಚಯ ಮಾಡಿಕೊಡಲಾಗುವುದು. ಈ ಕೃಷಿಮೇಳದ ವಿಶೇಷ ಆಕರ್ಷಣೆಗಳೆಂದರೆ ಕೃಷಿಯಲ್ಲಿ ಡೋನ್ ಬಳಕೆಯ ಪ್ರಾತ್ಯಕ್ಷಿಕೆ, ಸಿಓ-4, 5 ಮತ್ತು ಸಿಓಎಫ್ಎಸ್.-29, 31 ಹಾಗೂ ಸೂಪರ್ ನೇಪಿಯರ್ ಮೇವಿನ ಬೆಳೆಗಳ ಪ್ರಾತ್ಯಕ್ಷಿಕೆ, ತೆಂಗಿನಲ್ಲಿ ಬಹುಬೆಳೆ ಯೋಜನೆ ಮತ್ತು ಪೋಷಕಾಂಶಗಳ ನಿರ್ವಹಣೆ, ತೋಟಗಾರಿಕೆ ಬೆಳೆಗಳಲ್ಲಿ ಕಸಿಕಟ್ಟುವಿಕೆ, ಸಾವಯವ ಗೊಬ್ಬರ, ಕಾಂಪೋಸ್ಟ್, ಎರಗೊಬ್ಬರ, ಅಜೋಲ್ಲಾ ಗೊಬ್ಬರ ತಯಾರಿಕೆಯ ಪ್ರಾತ್ಯಕ್ಷಿಕೆ, ಹೈನುಗಾರಿಕೆ, ಮೀನುಗಾರಿಕೆ, ಆಡು, ಕೋಳಿ ಮತ್ತು ಬಾತುಕೋಳಿ ಸಾಕಾಣಿಕೆಗಳ ಪ್ರಾತ್ಯಕ್ಷಿಕೆ, ಮೌಲ್ಯಾಧಾರಿತ ಆಹಾರ ಉತ್ಪನ್ನಗಳು ಮತ್ತು ಪ್ರಾತ್ಯಕ್ಷಿಕೆ, ಜೈವಿಕ ಅನಿಲ ಉತ್ಪಾದನಾ ಘಟಕಗಳು, ಅಲಂಕಾರಿಕೆ ಮತ್ತು ಹೂವಿನ ಗಿಡಗಳ ಪ್ರದರ್ಶನ ಮತ್ತು ಮಾರಾಟ, ಆಕರ್ಷಕ ಕೃಷಿ ವಸ್ತು ಪ್ರದರ್ಶನಗಳೂ ಇರುತ್ತವೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಎಂ. ಶಂಕರ್, ಬ್ರಹ್ಮಾವರ ಡಿಪ್ಲೋಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಲಕ್ಷಣ್ ಇದ್ದರು.
ಕಾರ್ಕಳ : ತೀವ್ರವಾದ ಅನಾರೋಗ್ಯದಿಂದ ಬಳಲುತ್ತಿರುವ ಬಾಲಕಿಯ ಮನೆಗೆ ಹೋಗಿ ಆಧಾರ್ ಅಪ್ಡೇಟ್ ಮಾಡಿಕೊಟ್ಟು ಕಾರ್ಕಳ ಅಂಚೆ ಇಲಾಖೆ ಸಿಬ್ಬಂದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮರ್ಣೆ ಗ್ರಾಮದ ಎಣ್ಣೆಹೊಳೆಯ ಡೊಂಬರಪಲ್ಕೆ ನಿವಾಸಿ ದಿನೇಶ್ ಮತ್ತು ಉಷಾ ದಂಪತಿಯ 10 ವರ್ಷದ ಪುತ್ರಿ ತೃಷಾ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ತಾಯಿಯೂ ತೀವ್ರವಾದ ಕಾಯಿಲೆಯಿಂದ ಬಳಲುತ್ತಿದ್ದು, ತೀರಾ ಬಡ ಕುಟುಂಬದವರಾದ ಇವರ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮತ್ತು ವಿಳಾಸ ತಿದ್ದುಪಡಿ ಮಾಡಬೇಕಾಗಿತ್ತು.
ಚಿಕಿತ್ಸೆಗೆ ಅಗತ್ಯವಿದ್ದ ಕೆಲವು ಸೌಲಭ್ಯಗಳನ್ನು ಪಡೆದುಕೊಳ್ಳಲು ಈ ಕುಟುಂಬಕ್ಕೆ ಆಧಾರ್ ಅನಿವಾರ್ಯವಾಗಿತ್ತು. ಆದರೆ ಆಧಾರ್ ಅಪ್ಡೇಟ್ಗಾಗಿ ಅಂಚೆ ಕಚೇರಿಗೆ ಮಗಳನ್ನು ಕರೆದುಕೊಂಡು ಬರುವ ಸ್ಥಿತಿಯಲ್ಲಿ ದಿನೇಶ್ ಅವರು ಇರಲಿಲ್ಲ. ಈ ವಿಚಾರವನ್ನು ಕಾರ್ಕಳ ಪ್ರಧಾನ ಅಂಚೆ ಕಚೇರಿಗೆ ತಿಳಿಸಿ ಮನೆಗೆ ಹೋಗಿ ಆಧಾರ್ ಅಪ್ಡೇಟ್ ಮಾಡಿಸಿಕೊಡಲು ಮನವಿ ಮಾಡಿದ್ದರು.
ಇವರ ಮನವಿಗೆ ಸ್ಪಂದಿಸಿ ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ತಂಡ ಕಂಪ್ಯೂಟರ್ ಸಿಸ್ಟಮ್ ಮತ್ತಿತರ ಪರಿಕರಗಳ ಸಮೇತ ದುರ್ಗಮ ಪ್ರದೇಶದಲ್ಲಿದ್ದ ದಿನೇಶ್ ಅವರ ಮನೆಗೆ ಹೋಗಿ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮತ್ತು ವಿಳಾಸ ತಿದ್ದುಪಡಿಯನ್ನು ಮಾಡಿಕೊಟ್ಟಿದೆ. ಈ ಕುಟುಂಬ ಅಂಚೆ ಇಲಾಖೆಯ ಕ್ಷಿಪ್ರ ಸ್ಪಂದನೆಗೆ ಧನ್ಯವಾದ ಹೇಳಿದೆ.
ಸಂಸದ ಕೋಟ ಮೆಚ್ಚುಗೆ :
ಕಾರ್ಕಳ ಪ್ರಧಾನ ಅಂಚೆ ಕಚೇರಿಯ ಸಿಬ್ಬಂದಿಯ ಕಾಳಜಿಯುತ ಸೇವೆಗೆ ಮೆಚ್ಚುಗೆ ಸೂಚಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸರಕಾರಿ ಕೆಲಸ ಜನರ ಸೇವೆ ನೀಡಲು ಸಿಕ್ಕಿದ ಅವಕಾಶ ಎಂದು ಅರಿತು ಕಾರ್ಕಳ ಅಂಚೆ ಸಿಬ್ಬಂದಿ ಕೆಲಸ ಮಾಡಿಕೊಟ್ಟಿದ್ದಾರೆ. ಇದಕ್ಕೆ ಭಗವಂತನ ಅನುಗ್ರಹ ಮತ್ತು ಜನರ ಆಶೀರ್ವಾದ ಇರುತ್ತದೆ. ಸ್ವತಹ ಆಸಕ್ತಿ ವಹಿಸಿ ಬಡ ಕುಟಂಬದ ಆಧಾರ್ ಅಪ್ಡೇಟ್ ಮಾಡಿಕೊಟ್ಟ ಅಂಚೆ ಸಿಬ್ಬಂದಿಗೆ ಅಭಿನಂದನೆಗಳು ಎಂದು ಎಂದು ಬರೆದಿದ್ದಾರೆ.
ಕುಂದಾಪುರ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪಿಸ್ತೂಲ್ ತೋರಿಸಿ, ಮಾರಕಾಯುಧಗಳ ಜೊತೆಗೆ ಸಿನಿಮೀಯ ರೀತಿಯಲ್ಲಿ ಬಂದ ತಂಡವನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.
ಮನೆಯ ಸಮೀಪ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ಮಾರಕಾಯುಧಗಳಿಂದ ಬಂದ ದುಷ್ಕರ್ಮಿಗಳ ತಂಡವೊಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣ ಇತ್ತೀಚೆಗೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಚಿನ್ ಆಲೂರು, ಶರತ್ ದೇವಾಡಿಗ ಆಲೂರು, ವಿಶ್ವನಾಥ ಪಡುಕೋಣೆ, ರೋಶನ್ ಫೆರ್ನಾಂಡೀಸ್, ಪ್ರದೀಪ್ ಪಡುಕೋಣೆ, ಕಾರ್ತಿಕ್ ಪೂಜಾರಿ, ಪ್ರಕಾಶ್ ಮೊಗವೀರ, ಕೀರ್ತಿಕ್ ಪೂಜಾರಿ, ಗಣೇಶ್ ಪೂಜಾರಿ, ವಿಶಾಲ್, ಗೌತಮ್, ಸಂತೋಷ್ ನಾಡ, ಮಹೇಂದ್ರ, ಜಗದೀಶ್ ಮೊಗವೀರ, ಸಂತೋಷ್ ಹಡವು, ಅಂಕಿತ್ ಪೂಜಾರಿ, ಶಿವರಾಜ್, ಸಾಧನ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.
ಆರೋಪಿಗಳಲ್ಲಿ ಇಬ್ಬರು ಸಂಘರ್ಷಕ್ಕೊಳಗಾದ ಬಾಲಕರು ಸೇರಿದಂತೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 1 ಏರ್ ಪಿಸ್ತೂಲ್, 4 ಬೈಕ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಳೆದ ಐದು ದಿನಗಳ ಹಿಂದೆ ಪಡುಕೋಣೆ ನಿವಾಸಿ ಶ್ರೀಕಾಂತ ಪೂಜಾರಿ ಹಡವು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಹೋಗುವ ಕ್ರಾಸ್ ಬಳಿ ಸಂಜೆ ಮಾತನಾಡುತ್ತಾ ನಿಂತುಕೊಂಡಿದ್ದ ವೇಳೆ ಆರೋಪಿಗಳು ಏಕಾಏಕಿ ಮಾರಕಾಯುಧಗಳಿಂದ ಬಂದು ಹಲ್ಲೆಗೆ ಯತ್ನಿಸಿದ್ದಾರೆ. ಆರೋಪಿಗಳ ತಂಡ ಪಿಸ್ತೂಲ್, ಕಬ್ಬಿಣದ ಪೈಪ್ಗೆ ತುದಿಯಲಿ ಹಲ್ಲುಗಳುಳ್ಳ ಚಕ್ರ ಇರುವ ಆಯುಧ, ಕಬ್ಬಿಣದ ರಾಡ್, ಮರದ ಸೊಂಟೆ ಇತ್ಯಾದಿ ಮಾರಕಾಯುಧಗಳನ್ನು ಹಿಡಿದು ಮಾರಕಾಯುಧಗಳನ್ನು ಬೀಸುತ್ತಾ ಬೆದರಿಸಿದ್ದಾರೆ. ಗಲಾಟೆ ಮಾಡುವುದಿದ್ದರೇ ನಿಮಗೆ ಈಗಲೇ ಶೂಟ್ ಮಾಡಿ ಸಾಯಿಸುವುದಾಗಿ ಪಿಸ್ತೂಲ್ ತಲೆಗೆ ಹಿಡಿದು ಜೀವ ಬೆದರಿಕೆ ಹಾಕಿದ ಪ್ರಕರಣ ಇದಾಗಿದೆ.
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು.
ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ, ದಕ್ಷಿಣ ಕನ್ನಡದಲ್ಲಿ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಅ. 21ರಂದು ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಿಶೋರ್ ಕುಮಾರ್ ತಮ್ಮ ಮುಖ್ಯ ಪ್ರತಿಸ್ಪರ್ಧಿ, ಕಾಂಗ್ರೆಸ್ನ ರಾಜು ಪೂಜಾರಿ ವಿರುದ್ಧ ಗೆಲುವು ಸಾಧಿಸಿದರು.
ಒಟ್ಟು 5,906 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದು, 12 ಮೇಜುಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದೆ. ಪ್ರತಿ ಮೇಜಿಗೆ ಕಣ್ಕಾವಲು ಮತ್ತು ಸಹಾಯಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮಿಶ್ರಣ ಮತ್ತು ಸಿಂಧುತ್ವ ಪರಿಶೀಲನೆಯ ನಂತರ, ಮೊದಲ ಪ್ರಾಶಸ್ತ್ಯದ ಮತಗಳ ಅಂತಿಮ ಎಣಿಕೆ ನಡೆಸಲಾಯಿತು.
ಈ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳು ಸ್ಪರ್ಧಿಸಿದ್ದರು – ಬಿಜೆಪಿನ ಕಿಶೋರ್ ಕುಮಾರ್, ಕಾಂಗ್ರೆಸ್ನ ರಾಜು ಪೂಜಾರಿ, ಎಸ್ಡಿಪಿಐನ ಅನ್ವರ್ ಸಾದತ್, ಮತ್ತು ಪಕ್ಷೇತರ ದಿನಕರ ಉಳ್ಳಾಲ್. ಈ ಕ್ಷೇತ್ರವು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿಯನ್ನು ಒಳಗೊಂಡಿದ್ದು, ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆ ಮತ್ತು ಶಾಸಕರು ಈ ಕ್ಷೇತ್ರದ ಮತದಾರರಾಗಿದ್ದರು.
ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ಸಾಧಿಸಿರುವುದರಿಂದ, ಅವರು ದಕ್ಷಿಣ ಕನ್ನಡದ ಹೊಸ ಪರಿಷತ್ ಸದಸ್ಯರಾಗಿ ಆಯ್ಕೆಯಾದರು.
ಉಡುಪಿ : ಅಕ್ಟೋಬರ್ 24ರಿಂದ 26ರವರೆಗೆ ಪ್ರತಿದಿನ ಬೆಳಗ್ಗೆ 5.30ರಿಂದ 7.30ರವರೆಗೆ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬಾಬಾ ರಾಮ್ದೇವ್ ಅವರಿಂದ ಪತಂಜಲಿ ಯೋಗ ಶಿಬಿರ ನಡೆಯಲಿದೆ.ಮೊದಲ ದಿನವಾದ ಇಂದು ರಾಮ್ ದೇವ್ ನೇತೃತ್ವದಲ್ಲಿ ಯೋಗ ಶಿಬಿರ ನಡೆಯಿತು.
ಈ ಶಿಬಿರದಲ್ಲಿ ಬಾಬಾ ರಾಮ್ದೇವ್ ಅವರು ಯೋಗ, ಆಸನ, ಪ್ರಾಣಾಯಾಮ ಸಹಿತ ಸುದೃಢ ಆರೋಗ್ಯಕ್ಕೆ ಪೂರಕವಾದ ಹಲವು ಸಲಹೆ, ಮಾರ್ಗದರ್ಶನ ನೀಡಿದರು.
ಶ್ರೀ ಕೃಷ್ಣಮಠ ಶ್ರೀ ಪರ್ಯಾಯ ಪುತ್ತಿಗೆ ಮಠದ ಸಹಯೋಗದಲ್ಲಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ಭಾರತೀಯ ವಿದ್ವತ್ ಪರಿಷತ್ ಆಶ್ರಯದಲ್ಲಿ ಮೂರು ದಿನ ನಡೆಯಲಿರುವ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾಸಮ್ಮೇಳನದಲ್ಲಿ ನಿತ್ಯ ಬೆಳಗ್ಗೆ ಪತಂಜಲಿ ಯೋಗ ಇರಲಿದೆ.
ಇಂದು ಬಾಬಾ ರಾಮ್ದೇವ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ವಿಧಾನಪರಿಷತ್ ಉಪಚುನಾವಣೆಯ ಮತಗಳ ಎಣಿಕೆ ಇಂದು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭವಾಗಿದೆ.
ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಮತಗಳ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ನಿಯೋಜಿಸಲಾಗಿದೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ಗೆ 33ರಂತೆ ಹಂಚಿಕೆ ಮಾಡಲಾಗುತ್ತದೆ.
ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುತ್ತದೆ. ಅ.21 ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.
ಉಡುಪಿ : ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಅವರ ಹೋರಾಟದ ಮನೋಭಾವ, ಆತ್ಮವಿಶ್ವಾಸ, ಶೌರ್ಯ, ಪರಾಕ್ರಮಗಳ ವ್ಯಕ್ತಿತ್ವ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ, 200 ವರ್ಷ ಪೂರೈಸಿರುವ ಹಿನ್ನೆಲೆ, ರಾಜ್ಯ ಸರ್ಕಾರವು ಕಿತ್ತೂರು ಉತ್ಸವ -2024 ರ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಆಯೋಜಿಸಿದ್ದು, ರಥವು ರಾಜ್ಯದಾದ್ಯಂತ ಸಂಚರಿಸುವ ಮೂಲಕ ರಾಣಿ ಚೆನ್ನಮ್ಮರ ಸಂದೇಶ, ಸಾಹಸಗಾಥೆಯ ಬಗ್ಗೆ ಸಮಾಜಕ್ಕೆ ತಿಳಿಸುವ ಮೂಲಕ ಅರಿವು ಮೂಡಿಸಲಾಗಿದೆ ಎಂದರು.
ಮಹಿಳೆ ಮನಸ್ಸು ಮಾಡಿದರೇ ಯಾವ ಸಾಧನೆಯನ್ನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಸೂಕ್ತ ನಿದರ್ಶನ ಕಿತ್ತೂರು ರಾಣಿ ಚೆನ್ನಮ್ಮ. ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಜೀವನ ನಡೆಸಿದ ಚೆನ್ನಮ್ಮರ ಆದರ್ಶಗಳನ್ನು ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅದನ್ನು ಪಾಲಿಸಬೇಕು ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ರಾಣಿ ಚೆನ್ನಮ್ಮರ ದಿಟ್ಟತನ ಹಾಗೂ ಸ್ವಾಭಿಮಾನದ ಪ್ರತೀಕವಾದ ಜೀವನಶೈಲಿಯನ್ನು ಮಹಿಳೆಯರು ಸ್ಪೂರ್ತಿಯಾಗಿರಿಸಿಕೊಂಡು, ಆಧುನಿಕ ಸಮಾಜದಲ್ಲಿ ಪ್ರತಿನಿತ್ಯ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಬಾಲ್ಯದಿಂದಲೇ ಧೀರ ಮಹಿಳೆಯಾಗಿ ರೂಪುಗೊಂಡಿದ್ದ ಇವರು ಪುರುಷರಿಗೆ ಸರಿಸಮಾನವಾದ ಕತ್ತಿವರಸೆ, ಕುದುರೆ ಸವಾರಿ ಮುಂತಾದ ಕೌಶಲ್ಯಗಳನ್ನು ಮೈಗೂಡಿಸಿಕೊಂಡಿದ್ದರು. ಚೆನ್ನಮ್ಮಳು ತನ್ನ ಸಂಸ್ಥಾನ ಹಾಗೂ ಸ್ವಾತಂತ್ರ್ಯ ಉಳಿಸಿಕೊಳ್ಳಲು ನಡೆಸಿದ ಹೋರಾಟ, ತ್ಯಾಗ ಇಂದಿಗೂ ಜನಮಾನಸದಲ್ಲಿ ಅಚ್ಛಳಿಯದೇ ಉಳಿದಿದೆ ಎಂದರು. ರಾಣಿ ಚೆನ್ನಮ್ಮನವರ ಪರಾಕ್ರಮ, ಕೆಚ್ಚದೆಯ ಯುದ್ಧಕಲೆ ಹಾಗೂ ಜೀವಿತ ಕಾಲದುದ್ದಕ್ಕೂ ಹಂಗಿನ ಜೀವನಕ್ಕೆ ಆಸೆ ಪಡದೆ ಜೀವನ ನಡೆಸಿದ ರೀತಿ ಸದಾ ಸ್ಮರಣೀಯ. ಸ್ವಾತಂತ್ರö್ಯ ಹೋರಾಟದಲ್ಲಿ ಮುಖ್ಯ ವಾಹಿನಿಯಲ್ಲಿ ನಿಂತು ಬ್ರಿಟಿಷರ ವಿರುದ್ಧ ನಿರ್ಭೀತಿಯಿಂದ ಹೋರಾಡಿದ ಚೆನ್ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಕ.ಸಾ.ಪ ದ ಮನೋಹರ್ ಹಾಗೂ ನರಸಿಂಹಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಪ್ರಭಾಕರ ಪೂಜಾರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿದರೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಸಿದ್ದಬಸಯ್ಯ ಸ್ಯಾಮಿ ಚಿಕ್ಕಮಠ ವಂದಿಸಿದರು.
ಶಿರ್ವ : ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 7 ಮಂದಿಯನ್ನು ವಶಕ್ಕೆ ಪಡೆದ ಘಟನೆ ಮೂಡುಬೆಳ್ಳೆ ಗೂಡುದೊಟ್ಟು ಎಂಬಲ್ಲಿ ನಡೆದಿದೆ.
ಆರೋಪಿಗಳನ್ನು ವಿಜಯ್ ಪ್ರಕಾಶ್ ಕ್ವಾಡ್ರಸ್, ಸುರೇಶ್, ಫ್ರಾನ್ಸಿಸ್ ದೀಪಕ್ ಮೆಂಡೋನ್ಸ್, ಪ್ರಜ್ವಲ್ ಜೋಸೆಫ್ ಮಾರ್ಟೀಸ್, ಪ್ರದೀಪ್, ಸಂತೋಷ್, ಸುಜಿತ್ಯ ಎಂದು ಗುರುತಿಸಲಾಗಿದೆ.
ಇವರಿಂದ 4 ಜೀವಂತ ಹುಂಜ ಕೋಳಿಗಳು, 2 ಕತ್ತಿ ಬಾಲು, 7,850ರೂ. ನಗದು, ರಿಕ್ಷಾ ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು ‘ಡಿ’ ಗ್ರೂಪ್ ಸಿಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ಗೆ 33ರಂತೆ ಹಂಚಿಕೆ ಮಾಡಲಾಗುತ್ತದೆ.
ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಅನಂತರ ಒಂದನೇ ಪ್ರಾಶಸ್ತ್ರದ ಮತಗಳ ಎಣಿಕೆ ಮಾಡಲಾಗುತ್ತದೆ.
ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ರದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು. ಅಕ್ಟೋಬರ್ 21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.
Maax News covers major news and events of Udupi district. This channel provides detailed reports on the political, social, economic, and cultural life of Udupi district.
Maax News, equipped with the most sophisticated studio in Udupi, assures people comprehensive news coverage.