ಉಡುಪಿ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ (ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಮತ್ತು ಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈಗಾಗಲೇ ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟದ ಕೆಲವು ಪ್ರಕರಣಗಳು ಕಂಡು ಬರುತ್ತಿದ್ದು ಇದನ್ನು ಗಮನಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಈಗಾಗಲೇ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದು ಜಿಲ್ಲೆಯ ಕೆಲವೊಂದು ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗೋ ಸಾಗಾಟ ಕಳ್ಳತನ ಮತ್ತು ಗೋ ಹತ್ಯೆ ನಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದು ಪರಿಷದ್ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದು ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Udupi
ಕಾಪು : ತಂದೆಯ ನಿಧನದಿಂದ ಮನನೊಂದ ಮಹಿಳೆಯೊಬ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ಸಂಭವಿಸಿದೆ. ಮಲ್ಲಾರು ಚುಕ್ಕು ತೋಟ ನಿವಾಸಿ ಮೋಸಿನಾ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ತಂದೆಯ ನಿಧನ ನಂತರ ಮೋಸಿನಾ ಖಿನ್ನತೆಗೊಳಗಾಗಿದ್ದರು. ಮೃತ ಮೋಸಿನಾಗೆ 7 ವರ್ಷ ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳಿದ್ದಾರೆ. ಉಡುಪಿಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಮಹಿಳೆಯ ಮೃತದೇಹವನ್ನು ಬಾವಿಯಿಂದ ಮೇಲೆತ್ತಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ : ರಸ್ತೆ ಬದಿಯ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಸಂಭವಿಸಿದ್ದು ಅವರನ್ನು ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ನಡೆದಿದೆ.
ಗದಗ ಮೂಲದ ಅಣ್ಣಪ್ಪ(45), ಸುಜಾತ(25) ಹಾಗೂ ಸುಜಾತ ಅವರ ಮಗಳು ಸಂಗೀತ(7) ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರು.
ಕೂಲಿ ಕೆಲಸ ಮಾಡಿಕೊಂಡಿರುವ ಇವರು, ರಾತ್ರಿ ವೇಳೆ ರಸ್ತೆ ಬದಿಯಲ್ಲಿದ್ದ ಅಣಬೆಯನ್ನು ತಿಂದಿದ್ದರು. ಇದರಿಂದ ಇವರು ತಡರಾತ್ರಿ ವೇಳೆ ತೀವ್ರ ಅಸ್ವಸ್ಥಗೊಂಡಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಪತ್ಥಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಆಂಬುಲೆನ್ಸ್ ಮೂಲಕ ಈ ಮೂವರನ್ನೂ ಉಡುಪಿಯ ಆಸ್ಪತ್ರೆಗೆ ದಾಖಲಿಸಿದೆ. ವೈದ್ಯರು ನೀಡಿದ ಚಿಕಿತ್ಸೆಯಿಂದ ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ : ಉಡುಪಿಯ ಅಂಬಾಗಿಲು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ.
ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲುಸಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯೆಲ್ಲಾ ಕಾರಿನ ಬಿಡಿಭಾಗಗಳು ಹರಡಿಕೊಂಡು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ.
ಇನ್ನು ಕಾರಿನ ಕಾರಿನ ಇಂಜಿನ್ ಬೇರ್ಪಟ್ಟು ಮಾರುದೂರ ಹೋಗಿ ಬಿದ್ದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದ್ದು ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಗಾಯಗಳಾಗಿರುವ ಸಾಧ್ಯತೆಗಳಿವೆ.

ಜೂನ್ 15ರಂದು ಮಿಶನ್ ಆಸ್ಪತ್ರೆಯಲ್ಲಿ ‘ಇನ್ಸ್ಪಾಯರ್’ ಗ್ರೀನ್ ಹಾಸ್ಪಿಟಲ್ ಯೋಜನೆಗೆ ಚಾಲನೆ
ಉಡುಪಿ : ಕಳೆದ ಒಂದು ಶತಮಾನದಿಂದ ಉಡುಪಿ ಪರಿಸರದ ಆರೋಗ್ಯ ರಕ್ಷಣೆಯ ಮೂಲಾಧಾರವಾಗಿದ್ದ ಸಿಎಸ್ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಇದೀಗ ‘ಇನ್ಸ್ಪಾಯರ್’ ಗ್ರೀನ್ ಹಾಸ್ಪಿಟಲ್ ಯೋಜನೆಯನ್ನು ಆರಂಭಿಸುವುದರೊಂದಿಗೆ ಹವಾಮಾನ ಬದಲಾವಣೆಯನ್ನು ನೀಗಿಸುವ ಪ್ರಕ್ರಿಯೆಗೆ ಮುಂದಾಗಿದೆ.
ಇನ್ಸ್ಪಾಯರ್ ಯೋಜನೆಗೆ ಇದೇ ಜೂನ್ 15ರಂದು ಬೆಳಿಗ್ಗೆ 11ಗಂಟೆಗೆ ಆಸ್ಪತ್ರೆ ಆವರಣದಲ್ಲಿ ನಡೆಯಲಿರುವ ಸಂಸ್ಥೆಯ 101ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಚಾಲನೆ ಸಿಗಲಿದೆ.
ಈ ಕುರಿತು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಿಷನ್ ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನ ಮಾಹಿತಿ ನೀಡಿದರು. ಸೌರ ಫಲಕಗಳ ಅಳವಡಿಕೆಯನ್ನು ಸಿಎಸ್ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಬಿಷಪ್ ಹೇಮಚಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಈಶ್ವರ ಗಡಾದ್ ಭಾಗವಹಿಸಲಿದ್ದಾರೆ. ನಾಗಾಲ್ಯಾಂಡ್ನ ಸಂಗೀತಗಾರ ನೀಸೆ ಮೆರುನೊ ಮತ್ತು ಸಿಎಸ್ಐ ಏರಿಯಾ ಚೇರ್ಮನ್ ಐವನ್ ಡಿ.ಸೋನ್ಸ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗಣೇಶ್ ಕಾಮತ್, ಆಡಳಿತಾಧಿಕಾರಿ ಡೀನಾ ಪ್ರಭಾವತಿ, ಪಿಆರ್ಒ ರೋಹಿ ರತ್ನಾಕರ್ ಉಪಸ್ಥಿತರಿದ್ದರು.
ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ : ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ (8-6-2024) ಶಾಸ್ತ್ರಿ ಸರ್ಕಲ್ನಿಂದ ತಾಲೂಕು ಆಫೀಸಿನವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು. ಇದರ ಪರಿಣಾಮ ಮೊದಲ ಹಂತದಲ್ಲಿ ಎಬಿವಿಪಿ ಬೇಡಿಕೆಯಂತೆ ಆಜ್ರಿಯಿಂದ ಕುಂದಾಪುರಕ್ಕೆ ಬಸ್ ಬಿಟ್ಟಿರುವುದು ಶ್ಲಾಘನೀಯ.
ಈಗಾಗಲೇ ಆಜ್ರಿಯಿಂದ ನೇರಳಕಟ್ಟೆ ತಲ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಮಾಡಿದ ಬಸ್ ವ್ಯವಸ್ಥೆಯಿಂದಾಗಿ ಕೇವಲ ವಿದ್ಯಾರ್ಥಿಗಳಿಗಲ್ಲದೆ ಸಾರ್ವಜನಿಕರಿಗೂ ಸಹಾಯಕವಾಗಿದೆ. ಅನೇಕ ಸಮಯದಿಂದ ಈ ಮಾರ್ಗಕ್ಕೆ ಬಸ್ನ ಬೇಡಿಕೆ ಇದ್ದರೂ ಅಧಿಕಾರಿಗಳಿಗೆ ವಿವಿಧ ರೀತಿಯಲ್ಲಿ ಮನವಿ ಸಲ್ಲಿಸಿದರೂ ಸಮರ್ಪಕ ಬಸ್ ವ್ಯವಸ್ಥೆ ಮಾಡದ ಅಧಿಕಾರಿಗಳು ಹೋರಾಟ ನಡೆಸಿದ ಐದು ದಿನಗಳ ಒಳಗೆ ಬಸ್ ಬಿಟ್ಟಿರುವುದು ವಿದ್ಯಾರ್ಥಿಗಳ ಧ್ವನಿಯ ಬೆಲೆಯನ್ನು ಸಾರುತ್ತದೆ
ಇನ್ನು ಸುಮಾರು 15ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಸ್ ವ್ಯವಸ್ಥೆ ಮಾಡುವ ಅವಶ್ಯಕತೆ ಇದ್ದು ಆದಷ್ಟು ಬೇಗ ಇದು ಆಗುವಂತೆ ಮಾರ್ಗದ ಅವಶ್ಯಕತೆಯ ಕುರಿತು ಈಗಾಗಲೇ ಎಬಿವಿಪಿ ವಿದ್ಯಾರ್ಥಿಗಳ ಆಗ್ರಹದ ಧ್ವನಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದೆ ಮತ್ತು ಮುಂದೆ ಬರುವ 15 ದಿನಗಳ ಒಳಗೆ ಎಲ್ಲಾ ಮಾರ್ಗಗಳಿಗೆ ಬಸ್ ವ್ಯವಸ್ಥೆ ಆಗುವ ಭರವಸೆಯೂ ಇದೆ.
ಉಡುಪಿ : ನಗರದ ಆದರ್ಶ ಆಸ್ಪತ್ರೆಯಲ್ಲಿ ಫ್ಯಾಟಿ ಲಿವರ್ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗಿತ್ತು.
ತಪಾಸಣಾ ಶಿಬಿರವನ್ನು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಮಲ ಚಂದ್ರಶೇಖರ್ ಹಾಗೂ ಆದರ್ಶ ಆಸ್ಪತ್ರೆಯ ಯಕೃತ್ತು ಹಾಗೂ ಕರಳು ಸಂಬಂಧಿ ರೋಗಗಳ ತಜ್ಞರಾದ ಡಾ. ಸತೀಶ್ ಕೆ. ನಾಯಕ್ ಹಾಗೂ ಸ್ತ್ರೀರೋಗ ತಜ್ಞರಾದ ಡಾ. ರಂಜಿತಾ ಎಸ್. ನಾಯಕ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸತೀಶ್ ಕೆ. ನಾಯಕ್, ಲಿವರ್ನ ಮಹತ್ವ, ಫ್ಯಾಟಿ ಲಿವರ್ನಿಂದ ಆಗುವ ದುಷ್ಪರಿಣಾಮಗಳು, ಹಾಗೂ ಆಹಾರ ಪದ್ದತಿ, ವ್ಯಾಯಾಮದ ಮಹತ್ವವನ್ನು ತಿಳಿಸಿದರು.
ಡಯಟಿಷನ್ ಅನುಶ್ರೀ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಉಡುಪಿ : ಕಳೆದ ಮೂರು ವರ್ಷಗಳ ಕಾಲ ಉಡುಪಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ದಾವಣಗೆರೆಗೆ ವರ್ಗಾವಣೆಗೊಂಡ ಟಿವಿ 9 ಟಿವಿ ವಾಹಿನಿಯ ಕ್ಯಾಮೆರಮೆನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಎಂ.ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಜಂಟಿ ಆಶ್ರಯದಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ದಿನೇಶ್ ಎಂ.ಎಚ್. ಅವರನ್ನು ಉಡುಪಿ ವಾರ್ತಾಧಿಕಾರಿ ಮಂಜುನಾಥ್ ಸನ್ಮಾನಿಸಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ವಹಿಸಿದ್ದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ, ಸಂಘದ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.
ಉಡುಪಿಗೆ ವರ್ಗಾವಣೆಗೊಂಡು ಬಂದಿರುವ ಪ್ರಜಾವಾಣಿ ಜಿಲ್ಲಾ ವರದಿಗಾರ ನವೀನ್ ಕುಮಾರ್ ಜಿ. ಹಾಗೂ ಟಿವಿ 9 ಕೆಮೆರಾಮೆನ್ ರಾಮು ಅವರನ್ನು ಸ್ವಾಗತಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಪತ್ರಿಕಾ ಭವನ ಸಮಿತಿಯ ಸಹಸಂಚಾಲಕ ಅಂಕಿತ್ ಶೆಟ್ಟಿ ವಂದಿಸಿದರು.
ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಯಶ್ಪಾಲ್ ಸುವರ್ಣ
ಉಡುಪಿ : ಉಳ್ಳಾಲ ಬೋಳಿಯಾರಿನಲ್ಲಿ ಭಾರತ ಮಾತೆಗೆ ಜಯಕಾರ ಕೂಗಿದ ಕಾರಣಕ್ಕಾಗಿ ಮತಾಂಧರಿಂದ ತೀವ್ರ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ರವರನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ನಂದನ್ ಮಲ್ಯ, ಬಿಜೆಪಿ ಮಂಗಳೂರು ದಕ್ಷಿಣ ಉಪಾಧ್ಯಕ್ಷರಾದ ಶ್ರೀ ಸಂದೀಪ್ ಶೆಟ್ಟಿ ಎಕ್ಕೂರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಣಿಪಾಲ : ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ “ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್ ಕ್ರಿಪ್ಟೋಗ್ರಾಫಿಕ್ ಟೆಕ್ನಿಕ್ಸ್ ಫಾರ್ ಸೆಕ್ಯೂರ್ ಡ್ರೋನ್ ಕಮ್ಯುನಿಕೇಶನ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಾಹೆ ವಿ. ವಿ. ಪಿ.ಎಚ್.ಡಿ ನೀಡಿದೆ.
ಎಂ.ಐ.ಟಿ. ಬೆಂಗಳೂರು ಸಿ.ಎಸ್.ಇ ವಿಭಾಗದ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಡಾ. ಪ್ರೇಮಾ ಕೆ.ವಿ. ಅವರ ಮಾರ್ಗದರ್ಶನದಲ್ಲಿ ಹಾಗೂ ಎಂ.ಐ.ಟಿ ಮಣಿಪಾಲದ ಸಿ.ಎಸ್.ಇ. ವಿಭಾಗದ ಪ್ರಾಧ್ಯಾಪಕಿ ಡಾ. ಮಮತ ಬಾಲಚಂದ್ರ ಅವರ ಸಹ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಮಂಡಿಸಿದ್ದಾರೆ.
ಇವರು ಎಂ.ಐ.ಟಿ ಮಣಿಪಾಲದ ಆಡಳಿತಾಧಿಕಾರಿ, ಮಾಜಿ ಯೋಧ ರತ್ನಾಕರ ಸಾಮಂತ್ ಹಾಗೂ ಜಯಲಕ್ಷ್ಮೀ ದಂಪತಿಯ ಪುತ್ರ.