Udupi

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮಾ.15ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ

ಉಡುಪಿ : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು…

Read more

ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಭೇಟಿ

ಉಡುಪಿ : ಶ್ರೀ ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರು ಆಗಮಿಸಿ ದೇವರ ದರ್ಶನ ಪಡೆದು ತಾವು ಬರೆದ ಕೋಟಿಗೀತಾ ಪುಸ್ತಕವನ್ನು ಪರ್ಯಾಯ ಶ್ರೀ ಗಳಿಗೆ ಸಮರ್ಪಿಸಿ ಮಂತ್ರಾಕ್ಷತೆ ಪಡೆದುಕೊಂಡರು.

Read more

ಹೋಳಿ ಹುಣ್ಣಿಮೆ – ಕೃಷ್ಣಮಠದಲ್ಲಿ ವಿಶೇಷ ಪೂಜೆ

ಉಡುಪಿ : ಹೋಳಿಹುಣ್ಣಿಮೆಯ ದಿನವಾದ ನಿನ್ನೆ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆ ಸಂಪನ್ನಗೊಂಡಿತು. ಸಂಪ್ರದಾಯದಂತೆ ಶ್ರೀಕೃಷ್ಣಮಠದ ಚಂದ್ರಶಾಲೆಯಲ್ಲಿ ಪರ್ಯಾಯ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಿತು. ಬಳಿಕ ವಾದ್ಯ, ಬಿರುದಾವಲಿಗಳೊಂದಿಗೆ ಕಡಿಯಾಳಿಗೆ ಹೋಗಿ ಹಣ್ಣುಕಾಯಿ ನೈವೇದ್ಯ ಮಾಡಿಸಿ ಬಣ್ಣ ಸಮರ್ಪಣೆ ಮಾಡಲಾಯಿತು. ಬಳಿಕ ಪ್ರಸಾದವನ್ನು…

Read more

ಆರೋಪಿ ಕಾಲಿಗೆ ಗುಂಡೇಟು ಪ್ರಕರಣ – ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಣಿಪಾಲ : ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಆರೋಪಿ ಇಸಾಕ್ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಸಾಕ್‌ನನ್ನು ಸರ್ಜರಿಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸಾಕ್ ಜೊತೆ ಇದ್ದ ಇತರ ಆರೋಪಿಗಳಾದ ರಾಹಿದ್(25),…

Read more

ಟ್ರಾನ್ಸ್‌ಫಾರ್ಮರ್‌ನಿಂದ ಹಾರಿದ ಕಿಡಿ – ಮರಗಿಡಗಳು ಹೊತ್ತಿ ಉರಿದು ಅಪಾರ ಹಾನಿ

ಶಿರ್ವ : ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಿಂದ ಹಾರಿದ ಕಿಡಿಯಿಂದ ಕಾಡಿಕಂಬಳ ನಜರೆತ್‌ನಗರ-ಹಿಂದೂ ರುದ್ರಭೂಮಿ-ಶಿರ್ವ ಹಿಂದೂ ಪ.ಪೂ. ಕಾಲೇಜಿನ ಬಳಿಯ ಪ್ರದೇಶಕ್ಕೆ ಬೆಂಕಿ ತಗಲಿ ಮರಗಿಡಗಳು ಹೊತ್ತಿ ಉರಿದಿದ್ದು, ಅಪಾರ ಹಾನಿ ಸಂಭವಿಸಿದೆ. ರಸ್ತೆ ಬದಿಯಲ್ಲಿರುವ ವಿದ್ಯುತ್‌ ಟ್ರಾನ್ಸ್‌‌ಫಾರ್ಮ್‌‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ…

Read more

2025ರ ಕ್ಯೂಎಸ್ ಸಬ್ಜೆಕ್ಟ್ ಶ್ರೇಯಾಂಕದಲ್ಲಿ ಮಹತ್ವದ ಸಾಧನೆ – ಲೈಫ್ ಸೈನ್ಸಸ್ ಮತ್ತು ಮೆಡಿಸಿನ್ ವಿಭಾಗದಲ್ಲಿ 24 ಸ್ಥಾನಗಳ ಏರಿಕೆ ಕಂಡ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ (ಮಾಹೆ)

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ (ಮಾಹೆ) 2025ನೇ ಸಾಲಿನ ಕ್ವಾಕ್ವರೆಲ್ಲಿ ಸೈಮಂಡ್ಸ್ (ಕ್ಯೂಎಸ್) ವರ್ಲ್ಡ್ ಯುನಿವರ್ಸಿಟಿ ಶ್ರೇಯಾಂಕದಲ್ಲಿ ಉತ್ತಮ ಶ್ರೇಯಾಂಕಗಳನ್ನು ಗಳಿಸಿ ಮಹತ್ತರ ಸಾಧನೆ ಮಾಡಿದೆ. ಮಾಹೆ ಎಂಟು ಸೀಮಿತ ವಿಷಯಗಳಲ್ಲಿ ಮತ್ತು ಒಂದು ವಿಸ್ತಾರ ವಿಷಯದಲ್ಲಿ…

Read more

ಎರ್ನಾಕುಲಂ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲುಗಳು ಕುಂದಾಪುರದಲ್ಲಿ ನಿಲುಗಡೆ – ಸಂಸದ ಕೋಟ

ಉಡುಪಿ : ದೇಶದ ರಾಜಧಾನಿ ದೆಹಲಿಗೆ ಹಗಲು ವೇಳೆಯಲ್ಲಿ ಸಂಚರಿಸುವ ಪ್ರಯಾಣಿಕರಿಗಾಗಿ ಮತ್ತು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ ಬೇಕು ಎನ್ನುವುದು ಸಾರ್ವಜನಿಕರ ಮತ್ತು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ…

Read more

ಮಕ್ಕಳ ರಕ್ಷಣೆಗೆ ಇರುವ ಕಾಯ್ದೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು – ನ್ಯಾ. ಕಿರಣ್ ಎಸ್. ಗಂಗಣ್ಣನವರ್

ಉಡುಪಿ : ತಂದೆ, ತಾಯಿಗಳ ಮಧ್ಯೆ ವಿರಸ ಉಂಟಾದಾಗ ಮಕ್ಕಳಲ್ಲಿ ಅಸುರಕ್ಷಿತ ಭಾವನೆ ಉಂಟಾಗುತ್ತದೆ. ಇದು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇಂತಹ ಸನ್ನಿವೇಶದಲ್ಲಿ ಹಿರಿಯರು ಜಾಗರೂಕತೆ ವಹಿಸಬೇಕು ಎಂದು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ, ಜಿಲ್ಲಾ…

Read more

ಅಧಿಕಾರಿಗಳಿಗೆ ಮಾ.31ರೊಳಗೆ ಇಂದ್ರಾಳಿ ರೈಲ್ವೆ ಮೇಲ್ವೇತುವೆ ಪೂರ್ಣಗೊಳಿಸುವ ವಿಶ್ವಾಸ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾಕಷ್ಟು ಜನಾಕ್ರೋಶಕ್ಕೂ ಕಾರಣವಾಗಿರುವ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮಾರ್ಚ್ 31ರೊಳಗೆ ಪೂರ್ಣ ಗೊಳಿಸುವ ವಿಶ್ವಾಸವನ್ನು ರೈಲ್ವೆ ಇಂಜಿನಿಯರ್‌ಗಳು ಹಾಗೂ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ…

Read more

ತಡರಾತ್ರಿವರೆಗೆ ಧ್ವನಿವರ್ಧಕ ಬಳಕೆ; ಪ್ರಕರಣ ದಾಖಲು

ಉಡುಪಿ : ಬ್ರಹ್ಮಗಿರಿ ಲಯನ್ಸ್ ಭವನದ ಬಳಿ ರಾತ್ರಿ 10 ಗಂಟೆಯ ಅನಂತರವೂ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ನಡೆಸುತ್ತಿದ್ದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ನೆಮ್ಮದಿಗೆ ಭಂಗವಾಗುತ್ತಿರುವ ಬಗ್ಗೆ ಬಂದ ಮಾಹಿತಿಯನುಸಾರ ರಾತ್ರಿ 10.40ರ ಸುಮಾರಿಗೆ ಪೊಲೀಸರು…

Read more