Udupi

ಮತ್ತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ – ಆರೋಪಿ ಇಸಾಕ್ ಕಾಲಿಗೆ ಪೊಲೀಸರಿಂದ ಗುಂಡೇಟು!

ಮಣಿಪಾಲ : ಇತ್ತೀಚೆಗಷ್ಟೇ ಮಣಿಪಾಲ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಇದಕ್ಕೂ‌ ಮುನ್ನ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಯತ್ನ‌ ನಡೆಸಿದ್ದ…

Read more

ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಸಿಲಿಂಡರ್‌ಗಳ ದುರುಪಯೋಗ : ಗ್ರಾಹಕ ದಕ್ಷತಾ ಕಲ್ಯಾಣ ಫೌಂಡೇಷನ್ ಆರೋಪ

ಉಡುಪಿ : ಉಡುಪಿ ಜಿಲ್ಲೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದುರ್ಬಳಕೆ ನಡೆಯುತಿದ್ದು, ಇದರಿಂದ ಸರಕಾರಕ್ಕೆ ಕೋಟ್ಯಾಂತರ ರೂ. ಜಿಎಸ್‌ಟಿ ಹಾಗೂ ಇತರ ರೂಪದ ನಷ್ಟ ಸಂಭವಿಸುತ್ತಿದೆ. ಅಲ್ಲದೇ ಗೃಹ ಬಳಕೆಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ವಾಣಿಜ್ಯ ಬಳಕೆಗೆ…

Read more

ಎನ್‌ಎಸ್‌ಇ ಅಕಾಡೆಮಿ ಮತ್ತು ಮಾಹೆ ಮಧ್ಯೆ ಕ್ಯಾಪಿಟಲ್ ಮಾರ್ಕೆಟ್‌ಗಳು, ಫಿನ್‌ಟೆಕ್ ಮತ್ತು ಅನಾಲಿಟಿಕ್ಸ್‌ನಲ್ಲಿ ಅತ್ಯಾಧುನಿಕ ಸರ್ಟಿಫಿಕೇಶನ್ ಪ್ರೋಗ್ರಾಂಗಾಗಿ ಒಪ್ಪಂದ

ಮಣಿಪಾಲ : ಹಣಕಾಸು ಮತ್ತು ತಂತ್ರಜ್ಞಾನ ಶಿಕ್ಷಣದ ಭವಿಷ್ಯವನ್ನು ರೂಪಿಸುವ ಗುರಿಯನ್ನು ಸ್ಥಾಪಿಸಲು ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ ಅಂಗಸಂಸ್ಥೆಯಾದ ಎನ್‌ಎಸ್‌ಇ ಅಕಾಡೆಮಿ ಲಿಮಿಟೆಡ್ ಮತ್ತು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಯುನಿವರ್ಸಿಟಿ ಮಹತ್ವದ ಸಹಯೋಗದ ಒಪ್ಪಂದಕ್ಕೆ ಬಂದಿದೆ. ಉದ್ಯಮ-ಸಂಬಂಧಿತ…

Read more

ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ಹೊಸ ಕೋಚ್‌ಗಳಲ್ಲಿ ಲೋಪ : ದೂರು ನಿವಾರಣೆಗೆ ಸಚಿವರನ್ನು ಭೇಟಿಯಾದ ಸಂಸದ ಕೋಟ

ಉಡುಪಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾಗಿ ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್‌ಗಳ ಜೊತೆಗೆ 2020‌ರಲ್ಲಿ ತಯಾರಾದ ಹಳೆಯ LHB ಕೋಚ್‌ಗಳನ್ನು ಸೇರಿಸುವ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ.…

Read more

ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಕೆಎಂಸಿಯಲ್ಲಿ ಬಾಲ್ಯದ ಕ್ಯಾನ್ಸರ್‌ಗೆ ಯಶಸ್ವಿ ಚಿಕಿತ್ಸೆ

ಮಣಿಪಾಲ : ಮಕ್ಕಳ ಆಂಕೊಲಾಜಿ ವಿಭಾಗದ ಐತಿಹಾಸಿಕ ಬೆಳವಣಿಗೆಯಲ್ಲಿ, ಹೆಚ್ಚಿನ ಅಪಾಯದ ನ್ಯೂರೋಬ್ಲಾಸ್ಟೊಮಾದಿಂದ ಬಳಲುತ್ತಿರುವ 3 ವರ್ಷದ ಬಾಲಕಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಡೈನುಟುಕ್ಸಿಮಾಬ್ ಬೀಟಾ ಎಂಬ ಜೀವ ಉಳಿಸುವ ಇಮ್ಯುನೊಥೆರಪಿಯನ್ನು ನೀಡಲಾಗಿದೆ. ಈ ಇಮ್ಯುನೊಥೆರಪಿ ಪ್ರಸ್ತುತ ಈ ಕ್ಯಾನ್ಸರ್ ಅನ್ನು…

Read more

ಮೂಳೂರು ಬಳಿ ಅಪರಿಚಿತ ವಾಹನ‌ ಡಿಕ್ಕಿ, ಯುವಕ ಸಾವು : ಮತ್ತೋರ್ವ ಗಂಭೀರ

ಕಾಪು : ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು, ಮಂಗಳಪೇಟೆಯಲ್ಲಿ ಮಾ.11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ. ಮೃತ ಸವಾರನನ್ನು ಕಾಪು ನಿವಾಸಿ ಪ್ರತೀಶ್ ಪ್ರಸಾದ್ (21) ಎಂದು ಗುರುತಿಸಲಾಗಿದೆ. ಮತ್ತೋರ್ವ ಸವಾರ…

Read more

ಬೇಸಿಗೆಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಕಟ್ಟೆಚ್ಚರ ವಹಿಸಿ – ಆರೋಗ್ಯ ಇಲಾಖೆಗೆ ಉಡುಪಿ ಡಿಸಿ ಸೂಚನೆ

ಉಡುಪಿ : ಬೇಸಿಗೆ ಪ್ರಾರಂಭಗೊಂಡಿದೆ. ಜಿಲ್ಲೆಯಲ್ಲಿ ಜಾತ್ರೆ, ರಥೋತ್ಸವ, ಊರ ಹಬ್ಬ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳು ಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ ಸೇರಿದಂತೆ ವಿವಿಧ ಸಾಂಕ್ರಾಮಿಕ…

Read more

ಕಾಲೇಜು ವಿದ್ಯಾರ್ಥಿನಿ ಮೃತ್ಯು

ಉಡುಪಿ : ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು. ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.…

Read more

ಅಕ್ರಮ ಮರಳು ಸಾಗಾಟ; ಟಿಪ್ಪರ್ ವಶಕ್ಕೆ

ಶಿರ್ವ : ಶಿರ್ವ ಠಾಣೆ ವ್ಯಾಪ್ತಿಯ ಪಿಲಾರು ಖಾನದಲ್ಲಿ ಅಕ್ರಮ ಮರಳು ಸಾಗಾಟದ ಟಿಪ್ಪರ್‌ನ್ನು ವಶಕ್ಕೆ ಪಡೆದ ಶಿರ್ವ ಪೊಲೀಸರು ಟಿಪ್ಪರ್ ಚಾಲಕ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಕ್ತಿವೇಲು ಇ. ಅವರು ಸಿಬ್ಬಂದಿಯೊಂದಿಗೆ…

Read more

ಮಾಹೆಯ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಅಧ್ಯಯನ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌‌ನ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಕುರಿತ ಕ್ಷೇತ್ರಾಧ್ಯಯನವು ಪಡುಬಿದ್ರಿ ಸಮೀಪದ ಪಾದೆಬೆಟ್ಟುವಿನಲ್ಲಿ ನಡೆಯಿತು. ಕೊರಗ ಭಾಷಾ ತಜ್ಞ, ಲೇಖಕರಾದ ಪಾಂಗಾಳ ಬಾಬು ಕೊರಗ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದ್ದು…

Read more