Udupi

ರಾಹುಲ್ ಗಾಂಧಿ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಉಡುಪಿ : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರ ಅವಹೇಳನ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದ ಆಸ್ಕರ್ ಫರ್ನಾಂಡಿಸ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು…

Read more

ವಿಪ್ರ ಬಾಂಧವರಿಂದ ಉಡುಪಿ ಶ್ರೀ ಕೃಷ್ಣನ ಸನ್ನಿದಾನಕ್ಕೆ ಪಾದಯಾತ್ರೆ

ಹೆಬ್ರಿ : ವಿಪ್ರ ಬಾಂಧವರಿಂದ ಹೆಬ್ರಿ ಶ್ರೀ ಅನಂತಪದ್ಮನಾಭ ದೇವಸ್ಥಾನದಿಂದ ಉಡುಪಿ ಶ್ರೀ ಕೃಷ್ಣಮಠಕ್ಕೆ 14ನೇ ಪಾದಯಾತ್ರೆ ಸೆಪ್ಟೆಂಬರ್ 22ರಂದು ಭಾನುವಾರ ನಡೆಯಿತು. ಧರ್ಮ ಜಾಗೃತಿ, ದೇವರ ಅನುಗ್ರಹ, ಧರ್ಮ ಜಾಗೃತಿ ಮತ್ತು ಲೋಕಕ್ಕೆ ಸುಭಿಕ್ಷೆಯಾಗಲಿ ಎನ್ನುವ ಸದುದ್ದೇಶದಿಂದಪಾದಯಾತ್ರೆಯ ಹಾದಿಯಲ್ಲಿ ದೇವರ…

Read more

ತಿರುಪತಿ ಲಡ್ಡು ಪ್ರಾಣಿ ಕೊಬ್ಬು ಬಳಕೆಯ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುವ ಹುನ್ನಾರ : ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ ಮೂಲಕ ಸಮಸ್ತ ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಿಂದೂ ವಿರೋಧಿಗಳ ಹುನ್ನಾರ ಎಂದು ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಗನ್…

Read more

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಡುಪಿ : ಹಳೇ ಪ್ರಕರಣಕ್ಕೆ ಸಂಬಂಧಿಸಿ ಕಳೆದ 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕಾರ್ಕಳ ರೆಂಜಾಳದ ಮಹಮ್ಮದ್ ಬಶೀರ್‌ನನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಠಾಣಾ ಹೆಡ್‌ ಕಾನ್ಸ್‌ಟೆಬಲ್ ಸುರೇಶ್, ಪಿಸಿ ಹೇಮಂತ್ ಕುಮಾರ್, ಶಿವಕುಮಾ‌ರ್ ಮತ್ತು…

Read more

ಉಡುಪಿ ನಗರದ ಆಯುರ್ವೇದ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಲಕ್ಷಾಂತರ ರೂ.ನಷ್ಟ

ಉಡುಪಿ : ಉಡುಪಿ ನಗರದ ಹೊರವಲಯದ ಆಯುರ್ವೇದ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಬೆಳ್ಳಂಬೆಳಿಗ್ಗೆ ಈ ಅವಘಡ ಸಂಭವಿಸಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಉಡುಪಿಯ ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನ ಬಳಿಯ…

Read more

ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ

ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ನಿಧನ ಹೊಂದಿದರು. ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ…

Read more

ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ : ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ; ಪೇಜಾವರ ಶ್ರೀ

ಉಡುಪಿ : ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ.ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವ‌ಪ್ರಸನ್ನ ತೀರ್ಥರ ಪ್ರತಿಕ್ರಿಯೆ ನೀಡಿದ್ದಾರೆ.…

Read more

ಪರಿಷತ್ ಚುನಾವಣೆ – ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಹಾಗೂ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Read more

ಉಡುಪಿಯಲ್ಲಿ ಮತ್ತೆ ನಾಲ್ವರಿಗೆ ಕಾಲರಾ – ಒಟ್ಟು 15 ಪ್ರಕರಣ ಪತ್ತೆ

ಉಡುಪಿ : ಜಿಲ್ಲೆಯಲ್ಲಿ ಮಾರಕ ಕಾಲರಾದ 15 ಪ್ರಕರಣಗಳು ಇದುವರೆಗೆ ವರದಿಯಾಗಿವೆ. 2015ರಲ್ಲಿ ಎಂಟು ಪ್ರಕರಣಗಳು ವರದಿಯಾಗಿ ಇಬ್ಬರು ಮೃತಪಟ್ಟ ಬಳಿ ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರಕರಣ ವರದಿಯಾಗಿರಲಿಲ್ಲ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ತಿಳಿಸಿದ್ದಾರೆ. 2019 ಹಾಗೂ 2021ರಲ್ಲಿ…

Read more

ಸುಡುಮದ್ದು ಮಾರಾಟ : ತಾತ್ಕಾಲಿಕ ಪರವಾನಿಗೆಗೆ ಅರ್ಜಿ ಆಹ್ವಾನ

ಉಡುಪಿ : ದೀಪಾವಳಿ ಸಂದರ್ಭದಲ್ಲಿ (ಅ.30 ರಿಂದ ನ.2ರ ವರೆಗೆ ಮಾತ್ರ) ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರಿಂದ ಪರವಾನಿಗೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಜಿಲ್ಲಾಧಿಕಾರಿಗಳ ಕಚೇರಿಯಿಂದ ನಮೂನೆ ಪಡೆದು ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಗೆ ಎಲ್ಲ…

Read more