Udupi

ಐವನ್ ಡಿಸೋಜ ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆ

ಉಡುಪಿ : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಪ್ರಚೋದನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೇತೃತ್ವದಲ್ಲಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬನ್ನಂಜೆ ಶ್ರೀ ನಾರಾಯಣಗುರು ವೃತ್ತದಿಂದ ಆರಂಭಗೊಂಡ ಮೆರವಣಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯವರೆಗೆ ಸಾಗಿಬಂತು.…

Read more

ಭೂಸೇನೆ ಯೋಧರಿಂದ ಕೋಟಿ ಗೀತಾ ಯಜ್ಞ ದೀಕ್ಷೆ

ಉಡುಪಿ : ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಉಡುಪಿಯಲ್ಲಿ ಯುವಕರಿಗೆ ತರಬೇತಿ ನೀಡಲು ಬಂದಿರುವ ಕೇರಳ ಮೂಲದ ಉಣ್ಣಿ ಕೃಷ್ಣನ್‌, ಗುಜರಾತ್‌ ಮೂಲದ ಅಶೋಕ್‌ ತಕ್ಕರ್‌ ಅವರಿಗೆ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕೋಟಿ ಗೀತಾ ಯಜ್ಞ ದೀಕ್ಷೆ…

Read more

ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿ ಸಾವು

ಕಾರ್ಕಳ : ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆ ನಿವಾಸಿ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿ. ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ…

Read more

ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಕಾರು

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಘಟನೆ ಸಂಭವಿಸಿದೆ. ಉಡುಪಿ ನಗರದ ಹೃದಯ ಭಾಗದಲ್ಲಿರುವ ಕೆ.ಎಂ.ಮಾರ್ಗದಲ್ಲಿನ ಗೃಹೋಪಯೋಗಿ ಮಳಿಗೆಗೆ ಕಾರು ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಮಗ್ಗಲಿಗೆ ಕಾರು ಹೋಗಿದೆ. ಶಾಪ್‌ನ ಮುಂಭಾಗದಲ್ಲಿರುವ ಮೆಟ್ಟಿಲನ್ನು…

Read more

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ಗಣೇಶ ವಿಗ್ರಹಗಳ ತಯಾರಿ, ಮಾರಾಟಕ್ಕೆ ನಿಷೇಧ

ಉಡುಪಿ : ಪ್ರಸಕ್ತ ಸಾಲಿನ ಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು ಈ ಸಂದರ್ಭ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು,…

Read more

ಕಡಿಮೆ ಬೆಲೆಯಲ್ಲಿ ಚಿನ್ನ ಕೊಡಿಸುವುದಾಗಿ ನಂಬಿಸಿ ಹಲವರಿಗೆ 75 ಲಕ್ಷ ರೂ.ಗಳ ವಂಚನೆ

ಬ್ರಹ್ಮಾವರ : ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷ ರೂ.ಗಳನ್ನು ವಂಚಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಸುವಾಸಿನಿ ಹಾಗೂ ಅವರ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ…

Read more

ಮಾಹೆ ಜೊತೆಗೆ ಸ್ಕಾನ್‌ ಮತ್ತು ಹೆಪಿಯೆಸ್ಟ್‌ ಹೆಲ್ತ್‌ ಒಡಂಬಡಿಕೆ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಮತ್ತು ಸ್ಕಾನ್‌ ರಿಸರ್ಚ್‌ ಟ್ರಸ್ಟ್‌ [ಎಸ್‌ಕಎಎನ್‌] ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು ಈ ಒಡಂಬಡಿಕೆಯು ಶೈಕ್ಷಣಿಕ, ಸಂಶೋಧಕ ಮತ್ತು ಪರಿಣತ ಸಲಹೆಗಳಿಗೆ ಸಂಬಂಧಿಸಿದ್ದಾಗಿದೆ. ಮಣಿಪಾಲ್‌ ಅಕಾಡೆಮಿ ಆಫ್‌ ಆಫ್‌ ಹೈಯರ್‌ ಎಜುಕೇಶನ್‌…

Read more

ಕೊಡವೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಉಡುಪಿ : ಕೊಡವೂರು ಹಾಲು ಉತ್ಪಾದಕರ ಸಹಕಾರಿ ಸಂಘ ನಿ., ಕೊಡವೂರು ಇದರ ವಾರ್ಷಿಕ ಮಹಾಸಭೆ ಸಂಘದ ‘ಕ್ಷೀರಧಾಮ’ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಹಾಗೂ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರು, ಪ್ರಸ್ತುತ ನಿರ್ದೇಶಕ ರವಿರಾಜ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಒಕ್ಕೂಟ ಹಾಗೂ ಸಂಘದಲ್ಲಿ…

Read more

ಸಮಾನತೆಗಾಗಿ ಹೋರಾಡಿದ ಸಂತ ನಾರಾಯಣಗುರು : ಸಂಸದ ಕೋಟ

ಉಡುಪಿ : ಶತಮಾನಗಳ ಹಿಂದೆ ಸಮಪಾಲು-ಸಮಬಾಳ್ವೆಗಾಗಿ ಧ್ವನಿ ಎತ್ತಿದ ನಾರಾಯಣ ಗುರುಗಳು ಯಾವುದೇ ರಕ್ತ ಕ್ರಾಂತಿಗಳಿಲ್ಲದೆ ತಮ್ಮ ಮಾತು ಹಾಗೂ ಬದ್ಧತೆಗಳ ಮೂಲಕ ಸಮಾಜದಲ್ಲಿದ್ದ ಮೇಲು-ಕೀಳು ಎಂಬ ಅಂಧಕಾರವನ್ನು ಹೋಗಲಾಡಿಸಿ, ಸಮಾನತೆಗಾಗಿ ಹೋರಾಡಿದ ಮಹಾನ್ ಸಂತ ಎಂದು ಸಂಸದ ಕೋಟ ಶ್ರೀನಿವಾಸ…

Read more

ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ – ಜಿಲ್ಲಾಧಿಕಾರಿ

ಉಡುಪಿ : ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ ಅನ್ವಯ ನಾಮಫ‌ಲಕದಲ್ಲಿ ಕನ್ನಡವನ್ನು ಪ್ರಧಾನವಾಗಿ ಬಳಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ನಾಮಫ‌ಲಕದ ಮೇಲ್ಭಾಗದಲ್ಲಿ ಕನ್ನಡ ಭಾಷೆ ಶೇ.60ರಷ್ಟು ಪ್ರದರ್ಶಿಸದೆ ಇರುವುದು ಪರಿಶೀಲನೆ ವೇಳೆ ಕಂಡುಬಂದಿದ್ದು, ನಿಯಮವನ್ನು ಪಾಲಿಸದಿರುವ ಸಂಘ,…

Read more