ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಈ ದೊಡ್ಡ ಮಟ್ಟದ ಯಶಸ್ಸಿನ ಹಿಂದೆ ಇರುವ ಉಡುಪಿಯ ಬೈಲೂರು ಭಾಗದ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಸನ್ನಿಧಾನದಲ್ಲಿರುವ ಕೊರಗಜ್ಜನಿಗೆ ಮಧ್ಯ, ಚಕ್ಕುಲಿ, ಬೀಡ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ ನಟ, ನಿರ್ದೇಶಕ ರಿಶಬ್ ಶೆಟ್ಟಿ. ಹೌದು, ಈ ಸನ್ನಿಧಾನದಲ್ಲಿರುವ ಬಬ್ಬುಸ್ವಾಮಿ, ಕೊರಗಜ್ಜ, ಬಳಿ ಪ್ರಾರ್ಥನೆ ಮಾಡಿದ ವೇಳೆ ಪಂಜುರ್ಲಿ ದೈವದ ಮೇಲೆ ಕಥೆ ನಿರ್ಮಿಸಿ ಎನ್ನುವ ನುಡಿ ಕೇಳಿ ಬಂದಿತ್ತಂತೆ. ಈ ಹಿನ್ನಲೆ ಕಾಂತಾರ ದೊಡ್ಡ ಸಕ್ಸಸ್ ಕಂಡಿತ್ತು. ಈ ಯಶಸ್ಸಿನ ಬಳಿಕ ಮತ್ತೆ ರಿಶಬ್ ಶೆಟ್ಟಿ ಪತ್ನಿ, ಮಕ್ಕಳ ಜೊತೆ ಆಗಮಿಸಿ ಕೊರಗಜ್ಜ, ಬಬ್ಬುಸ್ವಾಮಿಗೆ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಿದ್ರು. ಈಗಾಗಲೇ ನಡೆಯುತ್ತಿರುವ ಕಾಂತಾರ ಭಾಗ ೧ ಸಿನಿಮಾಗೂ ದೊಡ್ಡ ಮಟ್ಟದ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ದೈವಸ್ಥಾನದ ಆಡಳಿತ ಮಂಡಳಿ ರಿಶಬ್ ಶೆಟ್ಟಿ ಕುಟುಂಬವನ್ನ ಗೌರವಿಸಿತು. ರಿಶಬ್ ಬರೋದನ್ನೇ ಕಾಯುತ್ತಿದ್ದ ಅಭಿಮಾನಿಗಳು ಸೆಲ್ಪಿ ತೆಗೆದು ಖುಷಿಪಟ್ರು.
Uncategorized
ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಕಾಮಗಾರಿ ವೀಕ್ಷಿಸಿದ ಸಂಸದ ಶ್ರೀನಿವಾಸ ಪೂಜಾರಿ
ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿ ಹಲವಾರು ಸಮಸ್ಯೆ ಹೊಂದಿದೆ. ಈ ಕಾಮಗಾರಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದ್ದಾರೆ.
ಕಾಮಗಾರಿ ವಿಳಂಬದಿಂದ ದಿನ ನಿತ್ಯ ಆಗುತ್ತಿರುವ ಸಮಸ್ಯೆಯ ಕುರಿತು ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಿದ್ದಾರೆ.
ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಜೊತೆ ಚರ್ಚಿಸಿದ್ದಾರೆ.
ಮಳೆಗಾಲದಲ್ಲಿ ಅವಘಡಗಳು ಸಂಭವಿಸುವ ಮೊದಲೇ ಕಾಮಗಾರಿ ಮುಗಿಸುವಂತೆ ಸಂಸದರು ಸೂಚಿಸಿದರು.
ಮನೆಯಲ್ಲಿದ್ದ ರೆಫ್ರಿಜರೇಟರ್ ಸ್ಫೋಟ : ಉಪಕರಣಗಳು, ದಾಖಲೆ ಪತ್ರಗಳು ಬೆಂಕಿಗಾಹುತಿ
ಕಡಬ : ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಳಗೆ ಬೆಂಕಿ ಆವರಿಸಿ ಮನೆಯಲ್ಲಿದ್ದ ದಾಖಲೆ ಪತ್ರಗಳ ಸಹಿತ ಮನೆಯಲ್ಲಿದ್ದ ಉಪಕರಣಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಘಟನೆ ಕಡಬ ಕಾಲೇಜು ರಸ್ತೆಯಲ್ಲಿರುವ ಅಡ್ಡಗದ್ದೆ ಎಂಬಲ್ಲಿನ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ವೇಳೆ ನಡೆದಿದೆ.
ಕಡಬದ ಅಡ್ಡಗದ್ದೆ ನಿವಾಸಿ ಫಾರೂಕ್ ಎಂಬುವರ ಮನೆಯಲ್ಲಿ ಅವಘಡ ನಡೆದಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.
ಫಾರೂಕ್ರವರ ಪತ್ನಿ ಮತ್ತು ಮಕ್ಕಳು ಮದುವೆ ಸಮಾರಂಭಕ್ಕೆ ತೆರೆಳಿದ್ದು ಫಾರೂಕ್ರವರು ಕೆಲಸಕ್ಕೆ ತೆರಳಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಮನೆಯ ಸುತ್ತ ಹೊಗೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಸಂಶಯಗೊಂಡು ಸಮೀಪಕ್ಕೆ ತೆರಳಿ ನೋಡಿದಾಗ ಮನೆಯ ಒಳಗೆ ಬೆಂಕಿ ಉರಿಯುತ್ತಿರುವುದು ಕಂಡು ಬಂದಿದೆ. ಬಳಿಕ ಊರವರು ಸೇರಿ ಬೆಂಕಿ ನಂದಿಸಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 149208 ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕಳೆದ ಕೆಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಕಮಾಲ್ ಮಾಡಿದೆ. ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯೂ ಈ ಬಾರಿಯೂ ಗೆಲುವಿನ ನಗೆ ಬೀರಿದೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್ ಪದ್ಮರಾಜ್ ಅವರನ್ನು ಸೋಲಿಸಿದ್ದಾರೆ. ಈ ಬಾರಿ ಕಾಂಗ್ರೆಸ್ಸಿನ ಪದ್ಮರಾಜ್ ಗೆಲ್ಲುತ್ತಾರೆ ಎಂಬ ಲೆಕ್ಕಾಚಾರಗಳಿತ್ತಾದರೂ ಈಗ ಫಲಿತಾಂಶ ಬಹುತೇಕ ಉಲ್ಟಾ ಆಗಿದೆ. ಕ್ಯಾ. ಬ್ರಿಜೇಶ್ ಚೌಟ ಗೆದ್ದಿದ್ದಾರೆ.
ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ರೋ ವರ್ಕೌಟ್ ಆಗಿದ್ದು ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ.