ಭಟ್ಕಳ : ಗರ್ಭಧರಿಸಿದ್ದ ಗೋವನ್ನು ಹತ್ಯೆಗೈದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ.

ಮಾಂಸಕ್ಕಾಗಿ ದನವನ್ನು ವಧೆ ಮಾಡಿ ಕರುವಿನ ಭ್ರೂಣ ಹಾಗೂ ಅಂಗಾಂಗಗಳನ್ನು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ. ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಹೊನ್ನಾವರದಲ್ಲಿ ಇಂತದ್ದೇ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ್ನು ಹಿಡಿದು ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದರು. ಆ ಘಟನೆ ಮಾಸುವ ಮುನ್ನವೇ ಭಟ್ಕಳದಲ್ಲಿ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
			        


			        
                        
                        
                        
                        
                        
                        
                        


                        
                        
                        