ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ : ಪಲ್ಟಿಯಾದ ವಾಹನ, ಆರೋಪಿ ಚಾಲಕ ಪರಾರಿ

ಬೈಂದೂರು : ಮೀನು ಸಾಗಿಸುವ ಇನ್ಸುಲೇಟರ್‌ ವಾಹನವೊಂದು ಪಲ್ಟಿಯಾಗಿ, ಅದರ ಒಳಗೆ ಮೀನು ಬಾಕ್ಸ್‌ಗಳ ಜೊತೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ಪತ್ತೆಯಾಗಿದೆ. ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ರಾತ್ರಿ ಹೊತ್ತು ಮಿನಿ ಇನ್ಸುಲೇಟರ್‌ ವಾಹನದೊಳಗೆ ಮೀನು ತುಂಬಿರುವ ಟ್ರೇ‌ಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್‌ ಹತ್ತಿರ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ