ಚಾರ್ಜ್‌ಗಿಟ್ಟ ಮೊಬೈಲ್ ಸ್ಪೋಟ; ಅಪಾರ ಹಾನಿ

ಕಾರ್ಕಳ : ಚಾರ್ಜ್‌ಗಿಟ್ಟ ಮೊಬೈಲ್‌ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ ಘಟನೆ ಇಂದು ಮುಂಜಾನೆ ಕಾರ್ಕಳದ ತೆಳ್ಳಾರು ರಸ್ತೆಯ‌ ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್‌ ಕುಮಾರ್‌ ಶೆಟ್ಟಿ ಎಂಬವರ ಮನೆಯಲ್ಲಿ ಸಂಭವಿಸಿದೆ.

ಚಾರ್ಜ್‌ಗಿಟ್ಟ ಮೊಬೈಲ್‌ ಸ್ಫೋಟಗೊಂಡು ಮನೆಯ ಕೋಣೆಗಳಿಗೆಲ್ಲಾ ಬೆಂಕಿ ಆವರಿಸಿ ಸುಮಾರು 7ಲಕ್ಷ ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಎರಡೂವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತವಾಗದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮನೆಯಲ್ಲಿ ಎಸಿ ಆನ್ ಇದ್ದ ಕಾರಣ ಬೆಂಕಿಯ ಕಿಡಿ ಮನೆ ತುಂಬೆಲ್ಲ ಆವರಿಸಿದ್ದು ಪರಿಣಾಮ ಟಿವಿ, ಕಿಟಕಿ, ಫ್ಯಾನ್, ಮೊಬೈಲ್, ಇಂಟೀರಿಯರ್, ಸೋಫಾ ಸೇರಿದಂತೆ ವಿವಿಧ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ.

ಈ ಅವಘಡ ಸಂಭವಿಸಿದಾಗ ಮನೆಯ ಮಾಲೀಕ ಕಿಶೋರ್ ಕುಮಾರ್ ಶೆಟ್ಟಿ ಅವರು ಮನೆಯಲ್ಲಿಯೇ ಇದ್ದು ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

Related posts

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ವೈದ್ಯಕೀಯ ಶಿಕ್ಷಣದಲ್ಲಿ ಆಧುನಿಕ VR-ಆಧಾರಿತ ಕೌಶಲ ತರಬೇತಿಗೆ ಮೆಡಿಸಿಮ್ ವಿಆರ್‌ನೊಂದಿಗೆ ಮಾಹೆ ಒಪ್ಪಂದ

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ