ಚೆನ್ನಪಟ್ಟಣ ಕ್ಷೇತ್ರದ ಗೊಂದಲ ಸುಖಾಂತ್ಯ ಆಗಲಿದೆ, ಅಲ್ಲಿ ಎನ್‌ಡಿಎ ಗೆಲ್ಲುತ್ತೆ – ಸಂಸದ ಕೋಟ

ಉಡುಪಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗೊಂದಲಗಳು ಶೀಘ್ರ ಸುಖಾಂತ್ಯ ಕಾಣಲಿದೆ. ಅಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ಸಿ.ಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಕೇಳಿದಾಗ, ಈ ಕ್ಷಣದವರೆಗೆ ಅವರು ನಮ್ಮ ಪಕ್ಷದಲ್ಲೇ ಇದ್ದಾರೆ ಎಂಬ ಮಾಹಿತಿ ಇದೆ. ಆದರೆ ಮುಂದಿನ ಬೆಳವಣಿಗೆ ಗೊತ್ತಿಲ್ಲ. ಅವರು ಈ ಹಿಂದೆ ಬಿಜೆಪಿಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದವರು.ಕುಮಾರಸ್ವಾಮಿ ಅವರು ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಹೀಗಾಗಿ ಸಹಜವಾಗಿಯೇ ಚೆನ್ನಪಟ್ಟಣ ಸೂಕ್ಷ್ಮ ಕ್ಷೇತ್ರ. ಅಲ್ಲಿ ಏನೇ ಗೊಂದಲಗಳಿದ್ದರೂ ನಮ್ಮ ವರಿಷ್ಠರು ಅದಕ್ಕೆ ಪರಿಹಾರ ಸೂಚಿಸಲಿದ್ದಾರೆ. ಆ ಕ್ಷೇತ್ರದಲ್ಲಿ ಎನ್‌ಡಿಎ ಗೆಲ್ಲಲೇಬೇಕಿದೆ ಎಂದು ಹೇಳಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ