ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.

1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Related posts

ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಯುವಕರು; ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ನಿಡ್ಡೋಡಿಯ ಮಹಿಳೆ ಕೊಲೆ ಪ್ರಕರಣ : ಆರೋಪಿ ಖುಲಾಸೆ