ಬ್ರಹ್ಮಾವರ ಠಾಣಾಧಿಕಾರಿ ಮಧು ಬಿ.ಇ. ಅವರಿಗೆ ಮುಖ್ಯಮಂತ್ರಿ ಪದಕ

ಉಡುಪಿ : ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಧು ಬಿ.ಇ. ಅವರು 2023‌ನೇ ಸಾಲಿನ ಮುಖ್ಯಮಂತ್ರಿ ಪದಕ ಪಡೆದ ಗೌರವಕ್ಕೆ ಭಾಜನರಾಗಿದ್ದಾರೆ.

2016‌ರಲ್ಲಿ ತರಬೇತಿ ಪಡೆದು 2017‌ರಿಂದ ಪೊಲೀಸ್ ಇಲಾಖೆಗೆ ಸೇರಿದ ಮಧು ಅವರು ಉಡುಪಿ ಜಿಲ್ಲೆಯ ಮಲ್ಪೆ, ಕಾರ್ಕಳ, ಕೋಟ, ಶಂಕರನಾರಾಯಣ ಮತ್ತು ಪ್ರಸ್ತುತ ಬ್ರಹ್ಮಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಲಾಖೆಯಲ್ಲಿ ಸಲ್ಲಿಸಿದ ಉತ್ತಮ ಸೇವೆಗೆ ಈ ಪದಕ‌ ಲಭಿಸಿದೆ.

ಮೂಲತಃ ತೀರ್ಥಹಳ್ಳಿಯವರಾದ ಮಧು ಅವರು 2019 ನವೆಂಬರ್‌ನಲ್ಲಿ ಮಲ್ಪೆ ಠಾಣೆಯಿಂದ ಕಾರ್ಕಳಕ್ಕೆ ವರ್ಗಾವಣೆಯಾಗಿದ್ದರು. ಎಸ್‌ಪಿಯವರ ಅಪರಾಧ ಪತ್ತೆ ತಂಡದಲ್ಲಿ ಸಕ್ರಿಯರಾಗಿದ್ದ ಮಧು ಅವರು ಬ್ರಹ್ಮಾವರ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಕೊಲೆ ಪ್ರಕರಣ ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾರ್ಕಳ ಕಾಬೆಟ್ಟುವಿನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದರು. ಸೇವಾವಧಿಯಲ್ಲಿ ತನ್ನ ನಡವಳಿಕೆ, ಮಾತು ಮತ್ತು ಕಾರ್ಯಕ್ಷಮತೆಯಿಂದಲೇ ಕಾರ್ಕಳದ ಜನತೆಯ ಮನಗೆದ್ದಿದ್ದರು.

ರಾಜ್ಯದ 126 ಮಂದಿ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪದಕ ಸ್ವೀಕರಿಸಲಿದ್ದಾರೆ.

Related posts

ಕೋಟತಟ್ಟುವಿನಲ್ಲಿ ಹೆಜ್ಜೇನು ದಾಳಿ : ಇಬ್ಬರ ಸ್ಥಿತಿ ಗಂಭೀರ

ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್