ಟೀಮ್ ನೇಷನ್ ಫಸ್ಟ್ ವತಿಯಿಂದ ಚಿಣ್ಣರ ನಟ್ಟಿ ಕಾರ್ಯಕ್ರಮ

ಉಡುಪಿ : ಟೀಮ್ ನೇಷನ್ ಫಸ್ಟ್(ರಿ) ತಂಡವು ಪ್ರತಿ ವರ್ಷದಂತೆ ಈ ವರ್ಷವೂ “ಚಿಣ್ಣರ ನಟ್ಟಿ” ಕಾರ್ಯಕ್ರಮವನ್ನು ಈ ಭಾನುವಾರದಂದು ಕಿದಿಯೂರಿನ ಹೊಸ ವಾಟರ್ ಟ್ಯಾಂಕ್‌ನ ಬಳಿ ಆಯೋಜಿಸಲಾಗಿದೆ ಎಂದು ಅಧ್ಯಕ್ಷರಾದ ಸೂರಜ್ ಕಿದಿಯೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ 200-250 ವಿದ್ಯಾರ್ಥಿಗಳು ಪಾಲುಗೊಳ್ಳರಿದ್ದಾರೆ. ಬೆಳಿಗ್ಗೆ 7:30ರಿಂದ ಸಂಜೆ 5ರವರೆಗೆ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರ ಪಾಲುಗೊಳ್ಳುವಿಕೆಗೂ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷದ ಚಿಣ್ಣರ ನಟ್ಟಿ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಪಾಲ್ಗೊಂಡು ನಮ್ಮನ್ನು ಪ್ರಶಂಸಿಸಿ ಹರಸಿದ್ದರು ಎಂದು ನೆನಸಿಕೊಂಡರು.

ಸಾಂಪ್ರದಾಯಿಕ ಪದ್ಧತಿಯಲ್ಲಿ ಭತ್ತದ ನಾಟಿ ಮಾಡುವ ಅವಕಾಶ ಹಾಗು ಸಮಾಜದಲ್ಲಿ ಕೃಷಿಯ ಪ್ರಾಮುಖ್ಯತೆಯ ತಿಳುವಳಿಕೆ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೂರಜ್ ಕಿದಿಯೂರ್ – 7353308181 ಇವರನ್ನು ಸಂಪರ್ಕಿಸಬಹುದು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು