ಚಿಟ್ಟಾಣಿ ಸಪ್ತಾಹ – ಸಮಾರೋಪ ಸಮಾರಂಭ

ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನವೆಂಬರ್ 5ರಂದು ಆರಂಭಗೊಂಡ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭವು ನವೆಂಬರ್ 11ರಂದು ಜರಗಿತು.

ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಿರಿಯ ಸ್ತ್ರೀವೇಷಧಾರಿ ಎಂ. ಎ ನಾಯ್ಕರಿಗೆ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಾಗೂ ಹವ್ಯಾಸಿ ಅರ್ಥಧಾರಿ, ಸಂಘಟಕ ನಾರಾಯಣ ಹೆಗಡೆಯವರಿಗೆ ಟಿ. ವಿ. ರಾವ್ ಪ್ರಶಸ್ತಿಯನ್ನು ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರತೀರ್ಥರು ಉಪಸ್ಥಿತರಿದ್ದರು.

ಮುಖ್ಯ ಅಭ್ಯಾಗತರಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಹೈಟೆಕ್ ಆಸ್ಪತ್ರೆಯ ನಿರ್ದೇಶಕ ಟಿ. ಎಸ್. ರಾವ್ ಭಾಗವಹಿಸಿದ್ದರು. ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ವಂದಿಸಿದರು. ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ