ಕ್ರೈಸ್ತ ಬಾಂಧವರಿಂದ ಪವಿತ್ರ ಗುರುವಾರ – ಚರ್ಚ್‌ಗಳಲ್ಲಿ ಬಲಿಪೂಜೆ, ಧಾರ್ಮಿಕ ಕಾರ್ಯಕ್ರಮ ಸಂಪನ್ನ

ಉಡುಪಿ : ಯೇಸು ಕ್ರಿಸ್ತರು ತಮ್ಮ ಶಿಷ್ಯರೊಂದಿಗೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ಸ್ಮರಣಾರ್ಥ ಪವಿತ್ರ ಗುರುವಾರದ ಆಚರಣೆಯಲ್ಲಿ ಜಿಲ್ಲೆಯಾದ್ಯಂತ ಕ್ರೈಸ್ತ ಭಾಂಧವರು ಶ್ರದ್ದೆ ಹಾಗೂ ಭಕ್ತಿಯಿಂದ ಆಚರಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಪ್ರಧಾನ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪವಿತ್ರ ಗುರುವಾರದಂದು ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಸೇರಿ ಕೊನೆಯ ಭೋಜನ ಮಾಡಿದ್ದರು. ಈ ವೇಳೆ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ಶಿಷ್ಯರಿಗೆ ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು. ಅದರ ಧ್ಯೋತಕವಾಗಿ ಬಲಿಪೂಜೆಯ ವೇಳೆ ಧರ್ಮಾಧ್ಯಕ್ಷರಾದ ಜೆರಾಲ್ಡ್ ಐಸಾಕ್ ಲೋಬೊ 12 ಮಂದಿ ಪ್ರೇಷಿತರ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರೀತಿಯ ಸಂದೇಶವನ್ನು ನೀಡಿದರು.

ಉಡುಪಿಯ ಚರ್ಚ್‌ಗಳಲ್ಲಿ ಸಾವಿರಾರು ಕ್ರೈಸ್ತ ಬಾಂಧವರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ