ವಿಮಾನದಲ್ಲಿ ಸಿಗರೇಟ್ ಸೇವನೆ : ಯುವಕನ ವಿರುದ್ಧ ದೂರು

ಮಂಗಳೂರು : ವಿಮಾನ ಲ್ಯಾಂಡಿಂಗ್ ಆಗುವುದಕ್ಕೆ ಮುನ್ನವೇ ಸಿಗರೇಟ್ ಸೇವನೆ ಮಾಡಿದ ಯುವಕನ ಮೇಲೆ ಶನಿವಾರ ಇಂಡಿಗೋ ವಿಮಾನ ಸಂಸ್ಥೆಯ ಅಧಿಕಾರಿಗಳು ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಂಜೇಶ್ವರ ನಿವಾಸಿ ಮುಶದೀಕ್ ಹುಸೈನ್ (24) ಎಂಬಾತ ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದ.

ವಿಮಾನ ಲ್ಯಾಂಡ್ ಆಗುವ ಕೆಲವೇ ಸಮಯಕ್ಕೆ ಮುನ್ನ ವಿಮಾನದ ಟಾಯ್ಲೆಟ್‌ನಲ್ಲಿ ಸಿಗರೇಟ್ ಸೇವನೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನದ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಬಗ್ಗೆ ಇಂಡಿಗೋ ಅಧಿಕಾರಿಗಳು ಬಜಪೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!